Muda scam: ಸಿಎಂ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು
Team Udayavani, Jul 20, 2024, 9:43 PM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ದಲ್ಲಿ ನಡೆದಿರುವ ಹಗರಣದ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ.
ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ, ಬಾವ ಮೈದುನ ಬಿ.ಎಂ. ಮಲ್ಲಿಕಾರ್ಜುನ ಸ್ವಾಮಿ, ಮುಡಾದ ಮಾಜಿ ಅಧ್ಯಕ್ಷರಾದ ಬಸವೇಗೌಡ, ಎಚ್.ವಿ. ರಾಜೀವ್ ಮತ್ತು ಆಯುಕ್ತರಾಗಿದ್ದ ಡಿ.ಬಿ. ನಟೇಶ್ ವಿರುದ್ಧವೂ ಬಿಬಿಎಂಪಿ ಮಾಜಿ ಸದಸ್ಯ ಎನ್.ಆರ್. ರಮೇಶ್ ಲೋಕಾಯುಕ್ತರಿಗೆ ದೂರು ನೀಡಿದ್ದಾರೆ.
ಶನಿವಾರ ಲೋಕಾಯುಕ್ತ ಕಚೇರಿಗೆ ತೆರಳಿದ ಅವರು 400 ಪುಟಗಳ ದಾಖಲೆಗಳನ್ನು ನೀಡಿದರು. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬದಲಿ ನಿವೇಶನಗಳ ಹೆಸರಿನಲ್ಲಿ ಬೃಹತ್ ಹಗರಣ ನಡೆದಿದ್ದು, ತಮ್ಮ ಪತ್ನಿಯ ಹೆಸರಿಗೆ ಕಾನೂನು ಬಾಹಿರವಾದ ಬದಲಿ ನಿವೇಶನಗಳ ಹಂಚಿಕೆಯಲ್ಲಿ ಸರಕಾರಕ್ಕೆ 40 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ನಷ್ಟ ಉಂಟು ಮಾಡಿದ್ದಾರೆ. ಒಂದು ವೇಳೆ ಲೋಕಾಯುಕ್ತರು ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳದೇ ಹೋದರೆ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರುವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.