MUDA ಹಗರಣ: ನ.23ಕ್ಕೆ ಸಿಎಂ ಮೇಲ್ಮನವಿ ವಿಚಾರಣೆ
Team Udayavani, Nov 15, 2024, 6:30 AM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದ ಆರೋಪದಲ್ಲಿ ತಮ್ಮ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ್ದ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 23ಕ್ಕೆ ನಿಗದಿಪಡಿಸಿದೆ.
ಗುರುವಾರ ಹೈಕೋರ್ಟ್ ಕಲಾಪ ಆರಂಭವಾ ಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಏಕಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೆ ವಿಚಾರಣೆಗೆ ನಿಗದಿಯಾಗಿಲ್ಲ. ತುರ್ತಾಗಿ ಅರ್ಜಿ ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.
ವಾದವನ್ನು ಅಂಗೀಕರಿಸಿದ ನ್ಯಾಯಪೀಠ ವಿಚಾರಣೆಯನ್ನು ನವೆಂಬರ್ 23ಕ್ಕೆ ನಿಗದಿಪಡಿಸಿತು. ಅಭಿಯೋಜನೆಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿಹಿಡಿದಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ಸಿಎಂ ವಿರುದ್ಧ ವಿಚಾರಣೆಗೆ ಆದೇಶಿಸಿ ಸೆ. 24ರಂದು ತೀರ್ಪು ನೀಡಿತ್ತು. ಅದನ್ನು ಪ್ರಶ್ನಿಸಿ ಅಕ್ಟೋಬರ್ 24ಕ್ಕೆ ಮುಖ್ಯಮಂತ್ರಿ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಿಗದಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಿಎಂ ಪರ ವಕೀಲರು ಮೇಲ್ಮನವಿಯನ್ನು ವಿಚಾರಣೆಗೆ ನಿಗದಿಪಡಿಸಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್ಐಟಿ: ಸಚಿವ ಸಂಪುಟ ನಿರ್ಧಾರ
Karnataka; 7 ವೈದ್ಯಕೀಯ ಕಾಲೇಜುಗಳಲ್ಲಿ ಕ್ರಿಟಿಕಲ್ ಕೇರ್ ವಿಭಾಗ ಆರಂಭ
Bandh; ನ. 20ರಂದು ರಾಜ್ಯವ್ಯಾಪಿ ಮದ್ಯ ಮಾರಾಟ ಬಂದ್
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.