MUDA ತನಿಖೆ; ಮಹಾತ್ಮ ಗಾಂಧಿ ಅವರ ಜೀವನ ನನಗೆ ಧೈರ್ಯ ನೀಡಿದೆ: ಸಿದ್ದರಾಮಯ್ಯ
ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ
Team Udayavani, Oct 2, 2024, 2:19 PM IST
ಬೆಂಗಳೂರು: ಮುಡಾ ಹಗರಣದ ಕುರಿತು ಲೋಕಾಯುಕ್ತ ಪೊಲೀಸರು ಮತ್ತು ಇಡಿ ತನಿಖೆ ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ”ಮಹಾತ್ಮ ಗಾಂಧಿಯವರ ಜೀವನ ಮತ್ತು ಆಲೋಚನೆಗಳು ನನ್ನ ಹೋರಾಟದಲ್ಲಿ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿವೆ” ಎಂದು ಬುಧವಾರ(ಅ2) ಹೇಳಿಕೆ ನೀಡಿದ್ದಾರೆ.
ಮಹಾತ್ಮ ಗಾಂಧೀಜಿಯವರ 155ನೇ ಜನ್ಮ ದಿನಾಚರಣೆ ಅಂಗವಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಗಾಂಧಿ ಭವನದಿಂದ ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆವರೆಗೆ ಮೆರವಣಿಗೆ ನಡೆಸಿದರು.
“ಕೋಮುವಾದ, ಸರ್ವಾಧಿಕಾರ ಮತ್ತು ಹಿಂಸಾಚಾರದಿಂದ ತುಂಬಿರುವ ಜಗತ್ತಿನಲ್ಲಿ, ಸತ್ಯ, ಶಾಂತಿ ಮತ್ತು ಅಹಿಂಸೆಯ ಮೂರ್ತರೂಪವಾದ ಮಹಾತ್ಮ ಗಾಂಧಿ ಮಾತ್ರ ನಮ್ಮನ್ನು ಕೈ ಹಿಡಿದು ಮುನ್ನಡೆಸಬಲ್ಲರು” ಎಂದು ಪೋಸ್ಟ್ ಮಾಡಿದ್ದಾರೆ.
“ಸತ್ಯದ ನಿಜವಾದ ಪರೀಕ್ಷೆಯನ್ನು ಎದುರಿಸುವ ನನ್ನ ಪ್ರಸ್ತುತ ಹೋರಾಟದಲ್ಲಿಯೂ ಬಾಪು ಅವರ ಜೀವನ ಮತ್ತು ಆಲೋಚನೆಗಳು ನನಗೆ ಧೈರ್ಯ, ಶಕ್ತಿ ಮತ್ತು ಭರವಸೆಯನ್ನು ನೀಡಿವೆ. ನಾಡಿನ ಸಮಸ್ತ ಜನತೆಗೆ ಗಾಂಧಿ ಜಯಂತಿಯ ಶುಭಾಶಯಗಳು” ಎಂದು ತನಿಖೆಯನ್ನು ಉಲ್ಲೇಖಿಸದೆ ಪೋಸ್ಟ್ ಮಾಡಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
”ಮಹಾತ್ಮ ಗಾಂಧಿ ಅವರು ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು, ಬಳಿಕ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿದರು. ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು. ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟಿಷರು ಭಾರತದಿಂದ ಹೋಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ” ಎಂದರು.
”ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ. ಗ್ರಾಮಗಳ ಉದ್ಧಾರ ಆಗದೆ ದೇಶ ಉದ್ಧಾರವಾಗಲು ಸಾಧ್ಯವಿಲ್ಲ ಎಂದು ನಾವು ಗ್ರಾಮಗಳ ಪ್ರಗತಿಗೆ ಕಾರ್ಯಕ್ರಮ ರೂಪಿಸಿದ್ದೇವೆ. ಆತ್ಮ ಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದದು. ಆದ್ದರಿಂದ ನಾವು ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳುವುದೇ ಗಾಂಧಿಯವರಿಗೆ ನಾವು ಸಲ್ಲಿಸುವ ದೊಡ್ಡ ಗೌರವ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.