MUDA Scam: ಸಿದ್ದರಾಮಯ್ಯ ಮೇಲ್ಮನವಿ ಅರ್ಜಿ ವಿಚಾರಣೆ ಜ.25ಕ್ಕೆ ಮುಂದೂಡಿಕೆ

Team Udayavani, Dec 5, 2024, 2:09 PM IST

7-cm-siddaramaiah

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದಿದ್ದ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠದ ಕ್ರಮವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಮೀನಿನ ಮೂಲ ಮಾಲೀಕ ದೇವರಾಜು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಜನವರಿ 25ಕ್ಕೆ ಮುಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜರಿಯಾ ಮತ್ತು ನ್ಯಾ.ಅರವಿಂದ ಕಾಮತ್ ಅವರ ನ್ಯಾಯಪೀಠದ ಮುಂದೆ ಅರ್ಜಿ ವಿಚಾರಣೆಗೆ ಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸೇರಿದಂತೆ ಪ್ರತಿವಾದಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

ದೇವರಾಜು ಪರ ಹಿರಿಯ ವಕೀಲ ದುಷ್ಯಂತ ದವೆ ವಾದಿಸಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ನೀಡಬೇಕು ಎಂದು ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ಏಕಸದಸ್ಯ ನ್ಯಾಯಪೀಠದ ಮುಂದೆ ಡಿಸೆಂಬರ್ 10ಕ್ಕೆ ಬರಲಿದೆ. ಈ ಅರ್ಜಿಗಳ ವಿಚಾರಣೆಯನ್ನು ಮುಂದೂಡುವಂತೆ ಏಕಸದಸ್ಯ ನ್ಯಾಯಪೀಠಕ್ಕೆ ಸೂಚನೆ ನೀಡಬೇಕು. ಇಲ್ಲವಾದರೆ ನಾನು ಅನಗತ್ಯವಾಗಿ ತೊಂದರೆ‌ಗೆ ಸಿಲುಕಿಕೊಳ್ಳಬೇಕಾಗುತ್ತದೆ ಎಂದು ಕೋರಿದರು. ಆದರೆ ನ್ಯಾಯಪೀಠ ಇಂತಹ ಸೂಚನೆ ನೀಡಲು ನಿರಾಕರಿಸಿತು.

80 ವರ್ಷದ ನನ್ನನ್ನು ರಾಜಕಾರಣದ ಕೆಸರೆರಚಾಟಕ್ಕೆ ಬಳಸಿಕೊಳ್ಳಲಾಗಿದೆ. ನನಗೂ ರಾಜಕಾರಣಕ್ಕೂ ಸಂಬಂಧವಿಲ್ಲ ಎಂದು ದೇವರಾಜು ಪರ ವಕೀಲರು ವಾದಿಸಿದರು.

ರಾಜ್ಯ ಸರ್ಕಾರದ ಪರ ವಾದಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ರಾಜ್ಯಪಾಲರಿಗೆ ಅಭಿಯೋಜನೆಗೆ ಅನುಮತಿ ನೀಡುವ ಅಧಿಕಾರವಿಲ್ಲ. ಈ ಪ್ರಕರಣದಲ್ಲಿ ರಾಜ್ಯಪಾಲರ ಅಭಿಯೋಜನೆಗೆ ನೀಡುವ ಅಧಿಕಾರ ಸಾಂವಿಧಾನಿಕ ವಿಷಯವಾಗಿದೆ. ಈ ರೀತಿ ಮುಖ್ಯಮಂತ್ರಿ, ಸಚಿವರನ್ನು ಅಭಿಯೋಜನೆಗೆ ಒಳ‌ಪಡಿಸಿದರೆ ಗೊಂದಲದ ಗೂಡಾಗಲಿದೆ ಎಂದು ವಾದಿಸಿದರು.

ಸಿದ್ದರಾಮಯ್ಯ ಅವರ ಪರ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಸೆಕ್ಷನ್ 17ಎ ಯನ್ನು ಉಲ್ಲಂಘಿಸಿದ್ದಾರೆ ಎಂದು ವಾದಿಸಿದರು.

ಟಾಪ್ ನ್ಯೂಸ್

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

HD-swamy

ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Eshwar–forest

Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.