MUDA ಸಿಬಿಐಗೆ: ಇಂದು ವಿಚಾರಣೆ
Team Udayavani, Dec 10, 2024, 6:20 AM IST
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಪ್ರಕರಣದ ದೂರುದಾರ ಹಾಗೂ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಂಗಳವಾರ ನಡೆಯಲಿದೆ.
ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಮಧ್ಯಾಹ್ನ 2.30ಕ್ಕೆ ಅರ್ಜಿಯ ವಿಚಾರಣೆ ನಿಗದಿಯಾಗಿದೆ. ಇದೇ ವೇಳೆ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇ.ಡಿ. ನನ್ನ ಮನೆಯಲ್ಲಿ ನಡೆಸಿರುವ ಶೋಧ ಹಾಗೂ ಇದಕ್ಕೆ ಸಂಬಂಧಿಸಿದಂತೆ ದಾಖಲು ಮಾಡಿಕೊಂಡಿರುವ ನನ್ನ ಹೇಳಿಕೆ ಕಾನೂನು ಬಾಹಿರ ಎಂದು ಆಕ್ಷೇಪಿಸಿ ಮುಡಾ ಮಾಜಿ ಆಯುಕ್ತ ಡಿ. ನಟೇಶ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ನ್ಯಾಯಮೂರ್ತಿ ಹೇಮಂತ ಚಂದನ್ ಗೌಡರ್ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ಮಂಗಳವಾರ ವಿಚಾರಣೆಗೆ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.