ಬಹಿರಂಗ ಪ್ರಚಾರಕ್ಕೆ ತೆರೆ: ಇಂದು ಬೆಳಗ್ಗೆಯಿಂದಲೇ ಮನೆ ಮನೆ ಪ್ರಚಾರ
Team Udayavani, Aug 29, 2018, 6:00 AM IST
ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಪಾಲಿನ “ಲೋಕಲ್ ಟೆಸ್ಟ್’ ಆಗಿರುವ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಬುಧವಾರ ಬೆಳಗ್ಗೆ 7 ಗಂಟೆಗೆ ತೆರೆ ಬೀಳಲಿದೆ. ಮುಂದಿನ 48 ಗಂಟೆಗಳಲ್ಲಿ ಮನೆ-ಮನೆ ಪ್ರಚಾರಕ್ಕಷ್ಟೇ ಅವಕಾಶ. ರಾಜ್ಯ ಮಟ್ಟದಲ್ಲಿ ದೋಸ್ತಿ ಮಾಡಿಕೊಂಡು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಸ್ಥಳೀಯ ಮಟ್ಟದಲ್ಲಿ ಕುಸ್ತಿಗೆ ಇಳಿದಿವೆ. ಎರಡೂ ಪಕ್ಷಗಳು ಪ್ರತಿಷ್ಠೆ ಪಣಕ್ಕಿಟ್ಟು ಪರಸ್ಪರ ಪೈಪೋಟಿಗೆ ಬಿದ್ದಿವೆ. ಆಡಳಿತಾರೂಢ ಕಾಂಗ್ರೆಸ್-ಜೆಡಿಎಸ್ ಪಕ್ಷಗಳನ್ನು ಸ್ಥಳೀಯ ಮಟ್ಟದಲ್ಲಿ ಮಣಿಸಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ.
ನಿಯಮದಂತೆ ಮತದಾನ ಆರಂಭ ವಾಗುವ 48 ಗಂಟೆ ಮುಂಚಿತವಾಗಿ ಬಹಿರಂಗ ಪ್ರಚಾರ ಕೊನೆಗೊಳ್ಳಬೇಕು. ಹೀಗಾಗಿ, ಆ.31ರ ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಲಿದ್ದು, ಅದಕ್ಕಿಂತ ಮುಂಚೆ, ಅಂದರೆ, ಬುಧವಾರ (ಆ.29) ಬೆಳಿಗ್ಗೆ 7 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ
ಬೀಳಲಿದೆ. ಮೈಸೂರು, ತುಮಕೂರು, ಶಿವಮೊಗ್ಗ ಈ ಮೂರು ಮಹಾನಗರ ಪಾಲಿಕೆಗಳು ಮತ್ತು ರಾಜ್ಯದ 21 ಜಿಲ್ಲೆಗಳ 81 ತಾಲೂಕುಗಳಲ್ಲಿ 29 ನಗರಸಭೆಗಳು, 53 ಪುರಸಭೆಗಳು, 20 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆ.31ರಂದು ಮತದಾನ ನಡೆಯಲಿದೆ.
9 ಸಾವಿರ ಅಭ್ಯರ್ಥಿಗಳು: ಮೂರು ಮಹಾನಗರ ಪಾಲಿಕೆಗಳ 135 ವಾರ್ಡ್ ಗಳಲ್ಲಿ 814 ಮತ್ತು 102 ನಗರ ಸ್ಥಳೀಯ ಸಂಸ್ಥೆಗಳ 2,500 ವಾರ್ಡ್ ಗಳಲ್ಲಿ 8,344 ಸೇರಿ ಒಟ್ಟು 2,535 ವಾರ್ಡ್‌ಗಳಲ್ಲಿ 9 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿ ಉಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.