ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ
ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ; ಸರಕಾರದ ಮೇಲೆ ಗೂಬೆ ಕೂರಿಸಲು ಯತ್ನ
Team Udayavani, Apr 19, 2024, 11:49 PM IST
ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣಗಳು ವೈಯಕ್ತಿಕ ಕಾರಣಗಳ ಹಿನ್ನೆಲೆಯಲ್ಲಿ ಆಗಿವೆ ಎಂದು ಸರಕಾರ ಹೇಳಿದ್ದು, ಇದರ ಬೆನ್ನಲ್ಲೇ ಸಾಮಾಜಿಕ ಜಾಲತಾಣ ಸಹಿತ ಎಲ್ಲೆಡೆ ಸರಕಾರದ ವಿರುದ್ಧ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಈಚೆಗೆ ನಡೆದ ಕೊಲೆಗಳು ವೈಯಕ್ತಿಕ ಕಾರಣಗಳಿಂದ ಆಗಿರುವಂಥವು. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಸೂಚನೆಯನ್ನೂ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಚೆನ್ನಾಗಿದೆ. ಆದರೆ ಈ ಮಧ್ಯೆ ನಡೆದ ಕೊಲೆಗಳಿಗೆ ವೈಯಕ್ತಿಕ ಕಾರಣ ಗಳಿವೆ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಇದಕ್ಕಾಗಿ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರಕಾರದ ಕರ್ತವ್ಯ. ಅದನ್ನು ನಿರ್ವಹಿಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಎಲ್ಲ ಕಾಲದಲ್ಲೂ ನಡೆದಿವೆ
ಡಿಸಿಎಂ ಡಿ.ಕೆ.ಶಿವಕುಮಾರ್, ವೈಯಕ್ತಿಕ ವ್ಯವಹಾರಗಳಿಗೆ ಕೊಲೆಗಳು ನಡೆದಿವೆ. ಇದು ಈಗಲ್ಲ; ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಸಹಿತ ಎಲ್ಲರ ಕಾಲದಲ್ಲೂ ನಡೆದಿವೆ. ಅದೇನೇ ಇದ್ದರೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚಿಸಲಾಗಿದೆ. ಪೊಲೀಸ್ ಇಲಾಖೆ ಕರ್ತವ್ಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನು ಪ್ರಕಾರ ಅವರು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸರಿಯಾಗಿದೆ. ಬಿಜೆಪಿಯವರು ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಲ್ಲಿ ರಾಜ್ಯಪಾಲರ ಆಡಳಿತ ಹೇರಲು ಈ ರೀತಿಯ ನಾಟಕ ಹಾಗೂ ಹುನ್ನಾರವನ್ನು ವಿಪಕ್ಷ ನಾಯಕ ಆರ್.ಅಶೋಕ್ ಮತ್ತು ಬಿಜೆಪಿಯವರು ಮಾಡುತ್ತಿದ್ದಾರೆ. ಹಾಗಾಗಲು ಬಿಡುವುದಿಲ್ಲ ಎಂದರು. ಕರ್ನಾಟಕ ಬಿಹಾರ ಆಗುತ್ತಿದೆ ಎಂದ ಬೊಮ್ಮಾಯಿ ಹೇಳಿಕೆಗೆ, ಅವರ ಕಾಲದಲ್ಲೂ ಅನೇಕ ಕೃತ್ಯಗಳು ನಡೆದಿದ್ದವು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.