ಎಂ. ರಾಮ ಜೋಯಿಸ್ ನಿಧನಕ್ಕೆ ಸಚಿವ ಮುರುಗೇಶ್ ನಿರಾಣಿ ಸಂತಾಪ
Team Udayavani, Feb 16, 2021, 11:11 AM IST
ಬೆಂಗಳೂರು: ಸುಪ್ರೀಂಕೋರ್ಟ್‍ನ ನಿವೃತ್ತ ನ್ಯಾಯಮೂರ್ತಿಗಳು,ಮಾಜಿ ರಾಜ್ಯಪಾಲರು ಹಾಗೂ ಬಿಜೆಪಿಯ ಪ್ರಮುಖ ಹಿತೈಷಿಗಳೂ ಆಗಿದ್ದ ಮಾಜಿ ರಾಜ್ಯಸಭಾ ಸದಸ್ಯ ಎಂ.ರಾಮಜೋಯಸ್ ಅವರ ನಿಧನಕ್ಕೆ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಆರ್ ಎಸ್‍ಎಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿ ಬಿಜೆಪಿಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರ ಹಠಾತ್ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಕಂಬನಿ ಮಿಡಿದಿದ್ದಾರೆ.
ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಾಗಿ ಹಾಗೂ ಸುಪ್ರೀಂಕೋರ್ಟ್‍ನಲ್ಲೂ ನ್ಯಾಯಮೂರ್ತಿಯಾಗಿದ್ದ ರಾಮಜೋಯಸ್ ಅವರು ದೇಶದ ಕೆಲವು ಐತಿಹಾಸಿಕ ತೀರ್ಪುಗಳನ್ನು ನೀಡಿದ ಪ್ರಮುಖರಾಗಿದ್ದರು ಎಂದು ಬಣ್ಣಿಸಿದ್ದಾರೆ.
ಇದನ್ನೂ ಓದಿ : ಮಾಜಿ ರಾಜ್ಯಸಭಾ ಸದಸ್ಯ, ಗವರ್ನರ್, ನ್ಯಾ. ರಾಮ ಜೋಯಿಸ್ ಇನ್ನಿಲ್ಲ
ಓರ್ವ ಶ್ರೇಷ್ಠ ಜ್ಞಾನಿಯೂ ಆಗಿದ್ದ ಅವರು ದೇಶದ ಹಾಗೂ ರಾಜ್ಯದ ಯಾವುದೇ ಸಮಸ್ಯೆಗಳು ಬಿಕ್ಕಟ್ಟು ಎದುರಾದಾಗ ಮುಂಚೂಣಿಯಲ್ಲಿ ನಿಂತು ಸಲಹೆಗಳನ್ನು ನೀಡುತ್ತಿದ್ದ ಮೇಧಾವಿಯಾಗಿದ್ದರು.
ಕಾನೂನು ತಜ್ಞ ರಾಗಿದ್ದ ಅವರು ರಚಿಸಿದ ಕೃತಿಗಳೂ ದೇಶದ ಕಾನೂನು ವ್ಯವಸ್ಥೆ, ಸಂವಿಧಾನದ ಕುರಿತು ಬೆಳಕು ಚೆಲ್ಲುವ ಪ್ರಯತ್ನವಾಗಿತ್ತು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆ ವಾಸ ಅನುಭವಿಸಿದ್ದರು ಎಂದು ಸ್ಮರಿಸಿದ್ದಾರೆ.
ರಾಜ್ಯಸಭಾ ಸದಸ್ಯರಾಗಿದ್ದ ವೇಳೆ ಅವರು ಮಂಡಿಸುತ್ತಿದ್ದ ವಿಷಯ ಪಾಂಡಿತ್ಯ ಎಂಥವರನ್ನು ಮಂತ್ರಮುಗ್ಧರನ್ನಾಗಿಸುತ್ತಿತ್ತು. ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಜೋಯಸ್ ಅವರ ನಿಧನ ದೇಶಕ್ಕೆ ತುಂಬಲಾರದ ನಷ್ಟ ಎಂದು ಶೋಕ ವ್ಯಕ್ತಪಡಿಸಿದ್ದಾರೆ.
ಭಗವಂತನು ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಿರಾಣಿಯವರು ಪ್ರಾಥಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.