ಮೈಸೂರು ದಸರೆಗೆ ಗ್ಯಾರಂಟಿ ಸ್ತಬ್ಧಚಿತ್ರ: ದಸರಾ ಉದ್ಘಾಟಕರ ಆಯ್ಕೆ ಸಿಎಂ ವಿವೇಚನೆಗೆ
ಏರ್ ಶೋ ಆಯೋಜಿಸಲು ಸರಕಾರದ ಚಿಂತನೆ
Team Udayavani, Aug 1, 2023, 7:23 AM IST
ಬೆಂಗಳೂರು: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಸರಕಾರದ ಐದು ಗ್ಯಾರಂಟಿಗಳನ್ನು ಬಿಂಬಿ ಸುವ ಸ್ತಬ್ಧಚಿತ್ರಗಳು ಇರಲಿದ್ದು, ವೈಮಾನಿಕ ಪ್ರದರ್ಶನಕ್ಕೂ ರಾಜ್ಯ ಸರಕಾರ ತಯಾರಿ ಮಾಡಿಕೊಂಡಿದೆ.
ಅ. 15ರಂದು ದಸರಾ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಳ್ಳಲಾಗಿದೆ. ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸುವ ಮೂಲಕ ಜನರ ಉತ್ಸವವಾಗುವಂತೆ ನೋಡಿ ಕೊಳ್ಳ ಬೇಕು ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ.
ದಸರಾ ಉತ್ಸವಕ್ಕೆ ಅ. 15ರ ಬೆಳಗ್ಗೆ 10.15ರಿಂದ 10.30ರೊಳಗೆ ಚಾಲನೆ ನೀಡಲು ನಿರ್ಧರಿಸಿದ್ದು, ವಿಜಯ ದಶಮಿಯಂದು ಪಂಜಿನ ಕವಾ ಯತು ನಡೆಯಲಿದೆ. ಸಾಂಸ್ಕೃತಿಕ ಕಾರ್ಯ ಕ್ರಮ ಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನೂ ವ್ಯವಸ್ಥಿತವಾಗಿ ಆಯೋಜಿಸಬೇಕು ಎಂದು ಸಿಎಂ ಸೂಚಿ ಸಿದರು. ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯ ಮಂತ್ರಿಗಳಿಗೆ ನೀಡಲಾಯಿತು.
5 ಗ್ಯಾರಂಟಿಗಳನ್ನು ಬಿಂಬಿಸುವ ಸ್ತಬ್ಧಚಿತ್ರ
ಜಂಬೂ ಸವಾರಿ, ದೀಪಾಲಂಕಾರ, ಪಂಜಿನಕವಾಯತು ಬಹಳ ಮುಖ್ಯವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಮಾತ್ರವಲ್ಲದೆ ಅನಂತರವೂ ಒಂದು ವಾರದವರೆಗೆ ಇರಬೇಕು. ಸ್ತಬ್ಧ ಚಿತ್ರ ಗಳ ಆಯ್ಕೆ ವೇಳೆ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟéಗಳ ಜತೆಗೆ 5 ಗ್ಯಾರಂಟಿ ಗಳನ್ನು ಬಿಂಬಿಸಿ ಜನರಿಗೆ ಸಂದೇಶ ನೀಡು ವಂತಿರಬೇಕು ಎಂದು ಸಿಎಂ ಸೂಚಿಸಿದರು.
ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ
ದಸರಾ ಉದ್ಘಾಟನೆಯಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, ವಸ್ತು ಪ್ರದರ್ಶನದಲ್ಲಿ ಸರಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಭರ್ತಿಯಾಗಿರಬೇಕು. ಎಲ್ಲ ಪ್ರಕಾರಗಳಲ್ಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು. ಸ್ಥಳೀಯ ಕಲಾವಿದರಿಗೆ ಪ್ರಾಶಸ್ತ್ಯ ನೀಡಬೇಕು. ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದರು.
ಸುತ್ತೂರು ಶ್ರೀಗಳಿಂದ ಉದ್ಘಾಟನೆ?
ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀ ಕೇಂದ್ರ ಸ್ವಾಮೀಜಿ ಅವರಿಂದ ಉದ್ಘಾ ಟಿಸುವ ಸಂಬಂಧ ಸಭೆಯಲ್ಲಿ ಚರ್ಚೆಯಾಗಿದ್ದು, ಉದ್ಘಾಟಕರ ಆಯ್ಕೆ ಯನ್ನು ಮುಖ್ಯಮಂತ್ರಿ ಸಿದ್ದ ರಾಮಯ್ಯ ವಿವೇಚನೆಗೆ ಬಿಡಲಾಗಿದೆ. ಸಭೆಯಲ್ಲಿದ್ದ ಶಾಸಕ ರೊಬ್ಬರು ಸುತ್ತೂರು ಶ್ರೀಗಳ ಹೆಸರು ಪ್ರಸ್ತಾವಿಸಿದ್ದು, ಈ ಬಾರಿಯ ದಸರಾ ಉತ್ಸವಕ್ಕೆ ಅವರಿಂದಲೇ ಚಾಲನೆ ಕೊಡಿ ಸುವುದು ಉತ್ತಮ ಆಯ್ಕೆ ಯಾಗಿರ ಲಿದೆ ಎಂದು ಸಲಹೆ ನೀಡಿದರು. ಈ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ಹೇಳಿದ್ದಾರೆ.
ಏರ್ ಶೋ ಆಯೋಜನೆಗೆ ಚಿಂತನೆ
ಪ್ರಸ್ತುತ ರಾಜ್ಯ ಸರಕಾರವು ಜಾರಿಗೊಳಿಸಿರುವ ಶಕ್ತಿ ಯೋಜನೆಯಿಂದಾಗಿ ದಸರಾ ಉತ್ಸವದಲ್ಲಿ ಪಾಲ್ಗೊಳುವ ಮಹಿಳೆಯರ ಸಂಖ್ಯೆ ಹೆಚ್ಚಾಗಬಹುದು ಎಂಬ ನಿರೀಕ್ಷೆ ಇದೆ. ಜನರ ದಸರಾ ಇದಾಗಬೇಕಿರುವುರಿಂದ ಮೂಲ ಸೌಕರ್ಯ ಕೊರತೆ ಆಗದಂತೆ ನೋಡಿಕೊಳ್ಳಿ ಎಂದ ಸಿಎಂ, ಈ ಬಾರಿಯ ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳುವ ಉದ್ದೇಶವಿದ್ದು, ಈ ಕುರಿತು ರಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Legislative House: ಶಾಸನಸಭೆಯೊಳಗೆ ಪೊಲೀಸ್ ಪ್ರವೇಶಕ್ಕಿಲ್ಲ ಅವಕಾಶ: ತಜ್ಞರು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
ಶೀಘ್ರವೇ ದೇಶದ ಬುಲೆಟ್; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್ ಬುಲೆಟ್ ರೈಲು ಯೋಜನೆ
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.