ದಸರೆಗೆ 400 ಜನಮಿತಿ; ಮೈಸೂರು ಹೊರತುಪಡಿಸಿ ಇತರೆಡೆ ಹೆಚ್ಚು ಜನ ಸೇರುವಂತಿಲ್ಲ
ಈ ಬಾರಿಯೂ ಸರಳ ಆಚರಣೆ; ಜಿಲ್ಲಾಡಳಿತಗಳಿಗೆ ಸೂಚನೆ
Team Udayavani, Oct 6, 2021, 6:40 AM IST
ಬೆಂಗಳೂರು: ಇನ್ನೆರಡು ದಿನಗಳಲ್ಲಿ ರಾಜ್ಯಾದ್ಯಂತ ನವರಾತ್ರಿ ಸಡಗರ ಆರಂಭವಾಗಲಿದೆ. ಈ ಬಾರಿಯೂ ಮೈಸೂರಿನಲ್ಲಿ ಸರಳ ದಸರಾ ನಡೆಯಲಿದ್ದು, ರಾಜ್ಯದ ಇತರೆಡೆಗಳಲ್ಲೂ ಕೋವಿಡ್ ನಿಯಂತ್ರಣ ಕ್ರಮಗಳನ್ನು ಪಾಲನೆ ಮಾಡಲು ರಾಜ್ಯ ಸರಕಾರ ಸೂಚನೆ ನೀಡಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಿರುವ ಸರಕಾರ, ಮೈಸೂರು ಹೊರತುಪಡಿಸಿ ಬೇರೆಡೆ ದಸರಾ ಕಾರ್ಯಕ್ರಮಗಳಲ್ಲಿ 400ಕ್ಕಿಂತ ಹೆಚ್ಚು ಜನ ಸೇರಬಾರದು ಎಂದು ಸೂಚನೆ ನೀಡಿದೆ.
ಸೋಂಕಿನ ಮೂರನೇ ಅಲೆಯ ಆತಂಕವನ್ನು ಗಮನದಲ್ಲಿ ಇರಿಸಿಕೊಂಡು ಮಾರ್ಗಸೂಚಿ ರೂಪಿಸಲಾಗಿದೆ. ಅ. 7ರಿಂದ 15ರ ವರೆಗೆ ಈ ನಿರ್ಬಂಧಗಳು ಜಾರಿಯಲ್ಲಿ ಇರಲಿವೆ. ಹೆಚ್ಚು ಜನ ಸೇರದೆ, ಸಾಮಾಜಿಕ ಅಂತರ ಕಾಪಾಡಿಕೊಂಡು ಹಬ್ಬ ಆಚರಿಸಬೇಕು. ಹಬ್ಬವನ್ನು ಸರಳವಾಗಿ ಆಚರಿಸುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು, ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಲು ಜಿಲ್ಲಾಡಳಿತ, ಪ್ರಾಧಿಕಾರಗಳು ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಕೂಡ ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಸ್ಥಳೀಯ ಆಡಳಿಯ ಸಂಸ್ಥೆಗಳು ನೀಡುವ ಸೂಚನೆಯನ್ನು ಪಾಲನೆ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಮೈಸೂರಿಗೆ ಪ್ರತ್ಯೇಕ
ಮೈಸೂರಿಗೆ ಪ್ರತ್ಯೇಕ ಮಾರ್ಗಸೂಚಿ ನೀಡಲಾಗಿದೆ. ಅರಮನೆ ಆವರಣದಲ್ಲಿ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಸ್ಯಾನಿಟೈಸರ್ ಕಡ್ಡಾಯಗೊಳಿಸಲಾಗಿದೆ.
ಪ್ರಮುಖ ಸ್ಥಳಗಳಲ್ಲಿ ಜನದಟ್ಟಣೆ ತಪ್ಪಿಸಬೇಕು ಮತ್ತು ಮಾಸ್ಕ್ ಧರಿಸಿರುವ ಕುರಿತು ಪೊಲೀಸರು ಪರಿಶೀಲನೆ ನಡೆಸಬೇಕು. ಮೈಸೂರಿನ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯ ಜನರನ್ನು ನಿಷೇಧಿಸಿದ್ದು, ದೃಶ್ಯ ಮಾಧ್ಯಮದ ಮೂಲಕ ಸಾರ್ವಜನಿಕರು ವೀಕ್ಷಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ.
ಇದನ್ನೂ ಓದಿ:ಐಪಿಎಲ್: ಯೋಜನೆಯಂತೆ ಗೆದ್ದ ಮುಂಬೈ ಇಂಡಿಯನ್ಸ್
ನೆಗೆಟಿವ್ ವರದಿ/ಲಸಿಕೆ ಪ್ರಮಾಣ ಪತ್ರ ಕಡ್ಡಾಯ
ಮೈಸೂರಿನ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬ ಅಧಿಕಾರಿ, ಸಿಬಂದಿ, ಕಲಾವಿದರು, ರಕ್ಷಣ ಸಿಬಂದಿ ಮತ್ತು ಮಾಧ್ಯಮದವರಿಗೆ ಅ. 4ರ ಅನಂತರ ಪಡೆದ ಕೊರೊನಾ ನೆಗೆಟಿವ್ ವರದಿ ಮತ್ತು ಕನಿಷ್ಠ ಒಂದು ಡೋಸ್ ಲಸಿಕೆ ಕಡ್ಡಾಯಗೊಳಿಸಲಾಗಿದೆ. ಕಲಾವಿದರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ತಂಡಗಳಲ್ಲಿ ಕಡ್ಡಾಯವಾಗಿ ಮೈಸೂರಿನವರಿಗೆ ಮತ್ತು ರಾಜ್ಯದ ಇತರ ಜಿಲ್ಲೆಗಳಿಂದ ಬಂದವರಿಗೆ ಮಾತ್ರ ಆದ್ಯತೆ ನೀಡಬೇಕು. ಮಾಸ್ಕ್ ಧರಿಸದಿದ್ದರೆ ಅಥವಾ ಸರಕಾರದ ನಿಯಮ ಪಾಲನೆ ಮಾಡದಿದ್ದರೆ ದಂಡ ವಿಧಿಸಬೇಕು.
ಮೈಸೂರಿಗೆ ಮಾರ್ಗಸೂಚಿ
ಅ.7- ನಾಡಹಬ್ಬ ಉದ್ಘಾಟನೆ – 100 ಜನ ಮಿತಿ.
ಅ.7-15ರ ಸಂಜೆ – ಸಾಂಸ್ಕೃತಿಕ ಕಾರ್ಯಕ್ರಮ – 500 ಜನ ಮಿತಿ.
ಅ.15 -ಜಂಬೂ ಸವಾರಿ/ಪಂಜಿನ ಕವಾಯತು – 500 ಜನ ಮಿತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
Waqf Issue: ಜಾತಿ ಜಾತಿ ಎನ್ನುವ ಹಿಂದೂಗಳು ಉದ್ಧಾರ ಆಗೋದು ಯಾವಾಗ?: ಬಸನಗೌಡ ಯತ್ನಾಳ್
Ticket Price Hike: ನಾಲ್ಕು ನಿಗಮಗಳ ಬಸ್ ಪ್ರಯಾಣ ದರ ಇಂದು ಮಧ್ಯರಾತ್ರಿಯಿಂದಲೇ ಹೆಚ್ಚಳ
Shivamogga: ಭದ್ರಾ ಜಲಾಶಯದ ಎಡದಂಡೆ ನಾಲೆಗೆ ಇಂದಿನಿಂದಲೇ ನೀರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Election: ಆಪ್ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್ ಮೈತ್ರಿ: ಕೇಜ್ರಿವಾಲ್
ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ
Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.