ಮೈಸೂರು ದಸರಾಕ್ಕೆ ನಾಳೆ ತೆರೆ
Team Udayavani, Sep 29, 2017, 8:00 AM IST
ಮೈಸೂರು: ಮಳೆ ಆತಂಕದ ನಡುವೆ ನಾಡಹಬ್ಬ 407ನೇ ದಸರಾ ಮಹೋತ್ಸವಕ್ಕೆ ಅರಮನೆ ನಗರಿ ಮೈಸೂರು ಸಜ್ಜುಗೊಂಡಿದೆ. ಶನಿವಾರ ಮಧ್ಯಾಹ್ನ 2.15ರ ಶುಭ ಮಕರ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸುವುದರೊಂದಿಗೆ ವಿಶ್ವವಿಖ್ಯಾತ ಜಂಬೂಸವಾರಿ ಮೆರವಣಿಗೆ ಹೊರಡಲಿದೆ.
ಮಧ್ಯಾಹ್ನ 4.45ರ ಶುಭ ಕುಂಭ ಲಗ್ನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಇತರ ಗಣ್ಯರು ದಸರಾ ಗಜಪಡೆ ಸಾರಥಿ ಅರ್ಜುನ ಹೊತ್ತು ತರುವ 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿನ ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿಜಯದಶಮಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಇದರೊಂದಿಗೆ ನಂದಿಧ್ವಜ, ನಿಶಾನೆ ಆನೆ ಬಲರಾಮ, ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಪ್ರತಿಬಿಂಬಿಸುವ 40 ಸ್ತಬಟಛಿಚಿತ್ರಗಳು ಹಾಗೂ 40 ಕಲಾ ತಂಡಗಳು ಮೆರವಣಿಗೆಯಲ್ಲಿ ಸಾಗಲಿವೆ. ಈ ವರ್ಷ ಜಂಬೂಸವಾರಿ ಮೆರವಣಿಗೆಯನ್ನು ದೆಹಲಿಯ ಗಣರಾಜ್ಯೋತ್ಸವ ಪರೇಡ್ ಮಾದರಿಯಲ್ಲಿ ಅತ್ಯಂತ ಶಿಸ್ತುಬದಛಿವಾಗಿ ಮಾಡಲು ಸಿದಟಛಿತೆ ನಡೆಸಲಾಗಿದೆ.
ಪಂಜಿನ ಕವಾಯತು: ರಾತ್ರಿ 8ಕ್ಕೆ ಬನ್ನಿಮಂಟಪ ಮೈದಾನದಲ್ಲಿ ಆಕರ್ಷಕ ಪಂಜಿನ ಕವಾಯತು ನಡೆಯಲಿದೆ. ರಾಜ್ಯಪಾಲ Êಜ ುಭಾಯಿ ವಾಲಾ ಕವಾಯತು ವೀಕ್ಷಿಸಿ ಗೌರವ ವಂದನೆ ಸ್ವೀಕರಿಸುವರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಚಿವ ತನ್ವೀರ್‌ಸೇs… ಮತ್ತಿತರರು ಉಪಸ್ಥಿತರಿರುವರು. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.
ಜಂಬೂಸವಾರಿ ಮೆರವಣಿಗೆ ಸಾಗುವ ಮಾರ್ಗದಲ್ಲಿ ಕಾಯಂ ಸಿಸಿ ಕ್ಯಾಮರಾಗಳ ಜತೆಗೆ ತಾತ್ಕಾಲಿಕವಾಗಿ ಇನ್ನೂ 66
ಕ್ಯಾಮರಾ ಅಳವಡಿಸಲಾಗಿದೆ. ಅಲ್ಲದೆ, ಡ್ರೋಣ್ ಕ್ಯಾಮರಾದ ಮೂಲಕ ಇಡೀ ಜಂಬೂಸವಾರಿ ಮೆರವಣಿಗೆ ಮೇಲೆ
ಹದ್ದಿನ ಕಣ್ಣಿಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.