ಅದ್ಧೂರಿ ಜಂಬೂ ಸವಾರಿ ಮೆರವಣಿಗೆ; ಮೈಸೂರಿನಲ್ಲಿ ಕಳೆಗಟ್ಟಿದ ಸಂಭ್ರಮ
Team Udayavani, Oct 19, 2018, 4:58 PM IST
ಮೈಸೂರು:ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ, ಜಂಬೂ ಸವಾರಿ ಅರಮನೆ ನಗರಿಯಲ್ಲಿ ಶುಕ್ರವಾರ ವೈಭವೋಪೇತವಾಗಿ ನಡೆಯಿತು.
ಶುಕ್ರವಾರ ಮಧ್ಯಾಹ್ನ ಅರಮನೆ ಬಲರಾಮದ್ವಾರದಲ್ಲಿ ಶುಭ ಕುಂಭ ಲಗ್ನದಲ್ಲಿ ನಂದೀಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಜಯದಶಮಿ ಮೆರವಣಿಗೆ ಉದ್ಘಾಟಿಸಿದರು.
ದಸರಾ ಗಜಪಡೆಯ ಕ್ಯಾಪ್ಟನ್ ಅರ್ಜುನ 750 ಕೆ.ಜಿ. ತೂಕದ ಚಿನ್ನದ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿಯ ಉತ್ಸವಮೂರ್ತಿಯನ್ನು ಹೊತ್ತು ಗಾಂಭೀರ್ಯದಲ್ಲಿ ಇತರ ಸಾಲಂಕೃತ ಆನೆಗಳೊಂದಿಗೆ ಗಾಂಭೀರ್ಯದಲ್ಲಿ ಹೆಜ್ಜೆ ಹಾಕಿದ. ಮುಖ್ಯಮಂತ್ರಿ ಎಚ್‌ಡಿಕೆ ಅವರು ಚಾಮುಂಡೇಶ್ವರಿ ಮೂರ್ತಿಗೆ ಪುಷ್ಪಾರ್ಚನೆ ಮಾಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್, ನಗರ ಪೊಲೀಸ್ ಆಯುಕ್ತ ಡಾ. ಎ.ಸುಬ್ರಹ್ಮಣ್ಯೇಶ್ವರ ರಾವ್ ಹಾಜರಿದ್ದರು.
ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ, ಪ್ರಾಕೃತಿಕ ಶ್ರೀಮಂತಿಕೆಗಳನ್ನು ಬಿಂಬಿಸುವ ನಾಡಿನ ಮೂಲೆ ಮೂಲೆಯಿಂದ ಆಗಮಿಸುವ 100ಕ್ಕೂ ಹೆಚ್ಚು ಕಲಾ ತಂಡಗಳು, ರಾಜ್ಯದ ಎಲ್ಲಾ ಜಿಪಂ ಹಾಗೂ ವಿವಿಧ ಇಲಾಖೆ, ನಿಗಮಗಳ ಒಟ್ಟು 42 ಸ್ತಬ್ಧಚಿತ್ರಗಳು ಮೆರವಣಿಗೆಯಲ್ಲಿ ಗಮನ ಸೆಳೆದವು.
ದೇಶವಿದೇಶ ಗಳಿಂದ ಆಗಮಿಸಿದ ಲಕ್ಷಾಂತರ ಪ್ರವಾಸಿಗರು ಅದ್ಧೂರಿ ಜಂಬೂ ಸವಾರಿ ಮೆರವಣಿಗೆಯನ್ನು ಕಣ್‌ತುಂಬಿಕೊಂಡರು.
ಅರ್ಜುನ ಸೇರಿದಂತೆ ದಸರಾ ಗಜಪಡೆಯ 12 ಆನೆ, ಅಶ್ವಾರೋಹಿ ಪಡೆ, ಎನ್‌ಸಿಸಿ ಕೆಡೆಟ್ಸ್ ಅರಮನೆ ಆವರಣ ದಿಂದ 5 ಕಿ.ಮೀ ದೂರದ ಬನ್ನಿಮಂಟಪ ಮೈದಾನದವರೆಗೆ ಜಂಬೂಸವಾರಿ ಮೆರವಣಿಗೆ ಸಾಗಿತು.
ರಾಜಮಾತೆ ಪ್ರಮೋದಾ ದೇವಿ ಅವರಿಗೆ ಮಾತೃ ವಿಯೋಗವಾದ ಹಿನ್ನಲೆಯಲ್ಲಿ ಯುವರಾಜ ಯದುವೀರ್ ಒಡೆಯರ್ ಸೇರಿದಂತೆ ರಾಜಮನೆತನದವರು ಜಂಬೂ ಸವಾರಿ ಮೆರವಣಿಗೆ ಮತ್ತು ಧಾರ್ಮಿಕ ವಿಧಿ ವಿಧಾನಗಳಲ್ಲಿ ಪಾಲ್ಗೊಳ್ಳಲ್ಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.