ಸಿಂಧೂರಿ v/s ಶಿಲ್ಪಾನಾಗ್ : ಇನ್ನೂ ಮುಗಿದಿಲ್ಲ ಐಎಎಸ್ ಅಧಿಕಾರಿಗಳ ಸಮರ..!
ಜಾಲತಾಣದಲ್ಲಿ ಪರವಿರೋಧ ಅಭಿಯಾನ
Team Udayavani, Jun 4, 2021, 9:41 PM IST
ಮೈಸೂರು: ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟ ಬೀದಿಗೆ ಬೀಳುತ್ತಿದ್ದಂತೆ ಪರವಿರೋಧ‘ಚರ್ಚೆಗಳು ಶುರುವಾಗಿದ್ದು, ಇಬ್ಬರು ಅಧಿಕಾರಿಗಳು ಮಾಧ್ಯಮಗಳ ಮೂಲಕ ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿರುವುದು ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ತಿರುಗಿದೆ.
ಇಂದು(ಶುಕ್ರವಾರ, ಜೂನ್ 4) ನಡೆದ ಕೆಲ ವಿದ್ಯಾಮಾನಗಳಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಆಯುಕ್ತರ ಆರೋಪಕ್ಕೆ ಸಿಡಿಮಿಡಿಗೊಂಡು ಕೊರೊನಾ ನಿರ್ವಹಣೆ ಸಂಬಂಧ‘ ಜಿಲ್ಲಾಡಳಿತಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದರು.
ಇತ್ತ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಜೆ ಎಸ್ ಎಸ್ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮುಂದೆಯೇ ತಮ್ಮ ನೋವು ತೋಡಿಕೊಂಡಿದ್ದಲ್ಲದೇ, ಕೋವಿಡ್ ವಾರ್ ರೂಂ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.
ಇದರ ಲೋಪಗಳನ್ನು ನಾನು ಎಂದಿಗೂ ಎತ್ತಿ ಆಡಿಲ್ಲ. ಪಾಲಿಕೆಯ ವಾರ್ಡ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸಕ್ಕೆ ಶ್ಲಾಘನೆ ವ್ಯಕ್ತವಾಗಿದ್ದು, ಜಿಲ್ಲಾಧಿಕಾರಿಗೆ ಇದು ಸಹಿಸಿಕೊಳ್ಳಲಾಗಿಲ್ಲ. ಆದ್ದರಿಂದ ಈ ರೀತಿ ಮಾಡುತ್ತಿದ್ದಾಾರೆ ಎಂದು ಜಿಲ್ಲಾಧಿಕಾರಿ ವಿರುದ್ಧ ಮತ್ತೊಂದು ಸುತ್ತಿನ ಅಸಮಾಧಾನ ಹೊರಹಾಕಿದರು. ಈ ಇಬ್ಬರು ಅಧಿಕಾರಿಗಳ ಜಗಳ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದರೆ, ಇತ್ತ ಜಿಲ್ಲಾ ಉಸ್ತುವಾರಿ ಸಚಿವರು ಇಬ್ಬರ ಗಲಾಟೆ ನಮ್ಮ ವ್ಯಾಾಪ್ತಿ ಮೀರಿದೆ ಎಂದು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ರಾಜೀನಾಮೆ ವಾಪಸ್ ಗೆ ಆಗ್ರಹ: ನಗರದಲ್ಲಿ ಪಾಲಿಕೆ ಆಯುಕ್ತರು ರಾಜೀನಾಮೆ ವಾಪಸ್ ಪಡೆಯಬೇಕೆಂಬ ಒಕ್ಕೊರಲ ಆಗ್ರಹ ವ್ಯಕ್ತವಾಗಿದ್ದು, ರಾಜ್ಯ ಸರ್ಕಾರ ರಾಜೀನಾಮೆ ಅಂಗೀಕರಿಸಬಾರದೆಂದು ಒತ್ತಾಯಿಸಿ ಪಾಲಿಕೆ ಸದಸ್ಯರು ಹಂಗಾಮಿ ಮೇಯರ್ ಅನ್ವರ್ ಬೇಗ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಚಿವ ಎಸ್.ಟಿ.ಸೋಮಶೇಖರ್ ಗೆ ಮನವಿ ಸಲ್ಲಿಸಿದ್ದಾಾರೆ. ಇತ್ತ ಪೌರಕಾರ್ಮಿಕರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ನಡೆಯನ್ನು ಖಂಡಿಸಿದ್ದಾಾರೆ.
ಡಿ.ಸಿಗೆ ಸ್ವಿಮಿಂಗ್‌ಪೂಲ್ ತೂಗುಗತ್ತಿ : ಇತ್ತೀಚೆಗೆ ಜಿಲ್ಲಾಧಿಕಾರಿಗಳ ಅಧಿಕೃತ ಅತಿಥಿಗೃಹವಾದ ಪಾರಂಪರಿಕ ಕಟ್ಟದಲ್ಲಿ ಡಿ.ಸಿ ನಿಯಮ ಬಾಹಿರವಾಗಿ ಸರ್ಕಾರದ ಹಣದಲ್ಲಿ ಸ್ವಿಮಿಂಗ್ ಪೂಲ್ ಹಾಗೂ ವ್ಯಾಯಾಮ ಶಾಲೆಯನ್ನು ಮಾಡಿಸಿದ್ದಾಾರೆ ಎಂದು ಶಾಸಕ ಸಾ.ರಾ. ಮಹೇಶ್ ಆರೋಪಿಸಿ ತನಿಖೆಗೆ ಆಗ್ರಹಿಸಿ ಮುಖ್ಯಮಂತ್ರಿಗೆ ಪತ್ರ ಬರೆದಿದ್ದರು. ಈ ನಡುವೆ ಡಿ.ಸಿ-ಆಯುಕ್ತರ ಒಳ ಜಗಳ ಜಗಜ್ಜಾಹೀರಾಗಿರುವ ಬೆನ್ನಲ್ಲೆ ರಾಜ್ಯ ಸರ್ಕಾರ ಪಾರಂಪರಿಕ ಕಟ್ಟಡವಾದ ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದಲ್ಲಿ 50 ಲಕ್ಷ ರೂ. ವೆಚ್ಚದಲ್ಲಿ ಇನ್ ಡೋರ್ ಸ್ವಿಮಿಂಗ್ ಪೂಲ್ ಮತ್ತು ವ್ಯಾಯಾಮ ಶಾಲೆ ನಿರ್ಮಾಣ ಮಾಡಿರುವ ಸಂಬಂಧ ತನಿಖೆ ನಡೆಸಿ, ಏಳು ದಿನಗಳಲ್ಲಿ ವರದಿ ನೀಡುವಂತೆ ಪ್ರಾದೇಶಿಕ ಆಯುಕ್ತರಿಗೆ ಆದೇಶಿಸಿದೆ.
ಈ ವಿಚಾರದಲ್ಲಿ ಜಿಲ್ಲಾಧಿಕಾರಿಗಳ ತಪ್ಪು ಮೇಲ್ನೋಟಕ್ಕೆ ಕಂಡುಬಂದರೂ ಅದು ಸಾಬೀತಾದರೆ ಡಿ.ಸಿ ತಲೆದಂಡ ನಿಶ್ಚಿತ ಎಂದು ಕೆಲ ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಜಾಲತಾಣದಲ್ಲಿ ಪರವಿರೋಧ ಅಭಿಯಾನ : ಡಿ.ಸಿ-ಆಯುಕ್ತರ ಜಗಳ ಬೀದಿಗೆ ಬರುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಡಿ.ಸಿ ಮತ್ತು ಆಯುಕ್ತರನ್ನು ಬೆಂಬಲಿಸಿ ಸಾವಿರಾರು ಮಂದಿ ಪೋಸ್ಟ್, ಪ್ರತಿಕ್ರಿಯೆ ನೀಡುವ ಮೂಲಕ ತಮ್ಮ ನೆಚ್ಚಿನ ಅಧಿಕಾರಿಗಳನ್ನು ಸಮರ್ಥಿಸಿಕೊಳ್ಳುತ್ತಿರುವುದು ಕಂಡುಬಂದಿದೆ. ಈ ನಡುವೆ ಇನ್ನೂ ಕೆಲವರು ಡಿ.ಸಿ ವರ್ಗಾವಣೆಗೆ ಆಗ್ರಹಿಸಿದ್ದರೆ, ಆಯುಕ್ತರು ರಾಜೀನಾಮೆ ವಾಪಾಸ್ ಪಡೆಯುವಂತೆ ಆಗ್ರಹಿಸಿದ್ದಾಾರೆ.
ಒಟ್ಟಾರೆ ಮೈಸೂರಿನ ಇಬ್ಬರೂ ಮಹಿಳಾ ಐಎಎಸ್ ಅಧಿಕಾರಿಗಳ ತಿಕ್ಕಾಟ ರಾಜ್ಯದ ಗಮನ ಸೆಳೆದಿದೆ. ಮೈಸೂರು ಡಿ.ಸಿ, ಪಾಲಿಕೆ ಆಯುಕ್ತೆ ನಡುವಿನ ಗುದ್ದಾಟಕ್ಕೆ ಸರ್ಕಾರ ಯಾವಾಗ ಪೂರ್ಣವಿರಾಮ ಹಾಕಲಿದೆ ಎಂಬುದನ್ನು ಕಾದುನೋಡಬೇಕಿದೆ.
ರಾಜೀನಾಮೆ ನಿರ್ಧಾರವನ್ನು ನಾನು ದುಡುಕಿ ತೆಗೆದುಕೊಂಡಿದ್ದಲ್ಲ, ಬಹಳ ಯೋಚಿಸಿ ಈ ನಿರ್ಧಾರಕ್ಕೆ ಬಂದಿದ್ದೇನೆ. ಜಿಲ್ಲಾಧಿಕಾರಿ ಇಂತಹ ಸಮಯದಲ್ಲಿ ಜನರ ಜೀವ ಉಳಿಸಲು ಶ್ರಮಿಸುವ ಬದಲು, ಸ್ವಹಿತಾಸಕ್ತಿ ಹಾಗೂ ಅಹಂಕಾರದಿಂದ ಜಿಲ್ಲೆಯ ಪರಿಸ್ಥಿತಿಯನ್ನು ಹಾಳು ಮಾಡುತ್ತಿದ್ದಾಾರೆ.
– ಶಿಲ್ಪಾನಾಗ್, ಪಾಲಿಕೆ ಆಯುಕ್ತೆ.
ಅಧಿಕಾರಿಗಳಿಗೆ ಒಂದು ವ್ಯವಸ್ಥೆ ಮತ್ತು ನಿಯಮವಿದೆ. ಅದನ್ನು ಪಾಲಿಸಬೇಕು. ಗುರುವಾರವೇ ಪಾಲಿಕೆ ಆಯುಕ್ತರ ಆರೋಪಗಳಿಗೆ ಸ್ಪಷ್ಟವಾಗಿ ಉತ್ತರ ಕೊಟ್ಟಿದ್ದೇನೆ. ಈ ಸಂಬಂಧ‘ಸರ್ಕಾರಕ್ಕೆ ಮಾಹಿತಿ ಸಲ್ಲಿಸಲಾಗಿದೆ ಮತ್ತು ಮುಖ್ಯ ಕಾರ್ಯದರ್ಶಿಗೆ ವರದಿ ಮಾಡಲಾಗಿದೆ.
– ರೋಹಿಣಿ ಸಿಂಧೂರಿ, ಜಿಲ್ಲಾಧಿಕಾರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.