ಜೇಬು ಖಾಲಿಯಾದಾಗಲೆಲ್ಲ ಮೈಸೂರಿಗೆ ಬರುತ್ತಿದ್ದರು
Team Udayavani, Aug 31, 2021, 6:23 AM IST
ಮೈಸೂರು: ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳು ತಮ್ಮ ಜೇಬು ಖಾಲಿಯಾದಾಗಲೆಲ್ಲ ಮೈಸೂರಿನ ಕಡೆಗೆ ಬಂದು ಜೋಡಿಗಳನ್ನು ದರೋಡೆ ಮಾಡು ತ್ತಿದ್ದರು ಎಂಬ ಮಾಹಿತಿ ಪೊಲೀಸರ ವಿಚಾರಣೆ ವೇಳೆ ಲಭ್ಯವಾಗಿದೆ.
ಆರೋಪಿಗಳು 3 ವರ್ಷಗಳಿಂದ ಮೈಸೂರಿಗೆ ಬರುತ್ತಿದ್ದು, ಜಿಲ್ಲೆಯಲ್ಲಿ 20ಕ್ಕೂ ಹೆಚ್ಚು ದರೋಡೆ, ಲೈಂಗಿಕ ಕೃತ್ಯಗಳಲ್ಲಿ ಭಾಗಿಯಾಗಿ ರುವ ಬಗ್ಗೆ ಮಾಹಿತಿ ಸಿಕ್ಕಿದೆ. 10ಕ್ಕೂ ಹೆಚ್ಚು ಶ್ರೀಗಂಧದ ಮರ ಪ್ರಕರಣಗಳಲ್ಲಿ ಭಾಗಿಯಾಗಿರುವುದಲ್ಲದೆ, ಒಡವೆ, ಹಣ ಮೊಬೈಲ್‌ಗಳನ್ನ ದೋಚಿದ್ದರು. ನಿರ್ಜನ ಪ್ರದೇಶದಲ್ಲಿ ಸಿಗುವ ಮಹಿಳೆಯರನ್ನು ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳ ಪ್ರಕಾರ, ಮೈಸೂರು ಅವರ ಅಪರಾಧ ಕೃತ್ಯಗಳಿಗೆ ಹೇಳಿ ಮಾಡಿಸಿದಂತಹ ಸ್ಥಳ ವಾಗಿದ್ದು, ಹೊರವಲಯದ ನಿರ್ಜನ ಪ್ರದೇಶಗಳಲ್ಲಿ ಕುಳಿತು ಕೊಳ್ಳುವ ಜೋಡಿಗಳೇ ಇವರ ಟಾರ್ಗೆಟ್ ಆಗಿತ್ತು ಎಂಬ ಮಾಹಿತಿ ವಿಚಾರಣೆಯಲ್ಲಿ ಹೊರಬಿದ್ದಿದೆ.
ಸ್ಥಳ ಮಹಜರು:
ಲಲಿತಾದ್ರಿಪುರ ಸಮೀಪದಲ್ಲಿ ಸಾಮೂಹಿಕ ಅತ್ಯಾಚಾರ ಘಟನೆ ನಡೆದ ಸ್ಥಳಕ್ಕೆ ಸೋಮವಾರ ಸಾಯಂಕಾಲ ಡಿಸಿಪಿ ಪ್ರದೀಪ್ ಗುಂಟಿ ನೇತೃತ್ವದ ಪೊಲೀಸ್ ತಂಡ ಆರೋಪಿಗಳನ್ನು ಕರೆ ತಂದು ಸ್ಥಳ ಮಹಜರು ನಡೆಸಿದರು.
ಅವಕಾಶ ಸಿಕ್ಕಾಗಲೆಲ್ಲ ಲೈಂಗಿಕ ದೌರ್ಜನ್ಯ :
ಆರೋಪಿಗಳ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಲಭ್ಯವಾಗಿದ್ದು, ಆರೋಪಿಗಳ ಪೈಕಿ ಓರ್ವ ಭಗ್ನ ಪ್ರೇಮಿಯಾಗಿದ್ದಾನೆ. ಮೂವರು ಯುವತಿಯರು ಆರೋಪಿಯನ್ನು ಪ್ರೀತಿಸಿ ಕೈಕೊಟ್ಟಿದ್ದರಿಂದ ವಿಕೃತನಾಗಿದ್ದ. ಈತ ಅವಕಾಶ ಸಿಕ್ಕಾಗಲೆಲ್ಲ ಯುವತಿಯರು ಮತ್ತು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಹೇಳಲಾಗಿದೆ. ಯಾವಾಗಲೂ ಜೇಬಿನಲ್ಲಿ ಕಾಂಡೋಮ್ ಇಟ್ಟುಕೊಂಡಿರುತ್ತಿದ್ದ ಮತ್ತು ಮಹಿಳೆಯರನ್ನು ವಿಕೃತವಾಗಿ ಹಿಂಸಿಸುವುದನ್ನು ರೂಢಿ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.