Mysuru Dasara; ವಹಿವಾಟು ದಾಖಲೆ: 500 ಕೋಟಿಗೂ ಅಧಿಕ!
Team Udayavani, Oct 15, 2024, 6:55 AM IST
ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಉತ್ಸವ ಹಿನ್ನೆಲೆಯಲ್ಲಿ ಈ ಬಾರಿ 16 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಮೈಸೂರಿಗೆ ಭೇಟಿ ನೀಡಿದ್ದು ಐತಿಹಾಸಿಕ ದಾಖಲೆಯಾಗಿದೆ. ಈ ಮೂಲಕ 500 ಕೋಟಿ ರೂ.ಗೂ ಅಧಿಕ ಆರ್ಥಿಕ ವಹಿವಾಟು ನಡೆದಿದೆ ಎಂದು ಅಂದಾಜಿಸಲಾಗಿದೆ.
ಅ. 3ರಂದು ಚಾಮುಂಡಿಬೆಟ್ಟದಲ್ಲಿ ದೇವಿಯ ಅಗ್ರಪೂಜೆಯೊಂದಿಗೆ ಆರಂಭವಾಗಿ ಅ. 12ರಂದು ಅಭಿಮನ್ಯು ನೇತೃತ್ವದಲ್ಲಿ ನಡೆದ ಜಂಬೂ ಸವಾರಿ ಮೆರವಣಿಗೆಯವರೆಗೆ ರಾಜ್ಯದ ವಿವಿಧ ಮೂಲೆಗಳಿಂದಷ್ಟೇ ಅಲ್ಲದೆ ದೇಶ, ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಆಗಮಿಸಿ ನವರಾತ್ರಿ ಉತ್ಸವವನ್ನು ವೀಕ್ಷಿಸಿದ್ದಾರೆ. ಇದು ಜಿಲ್ಲೆಯ ಪ್ರವಾಸೋದ್ಯಮಕ್ಕೆ ಚೈತನ್ಯ ತುಂಬಿದೆ.
ರಾಜ್ಯದವರೇ ಹೆಚ್ಚು
ಈ ಬಾರಿಯ ದಸರಾ ಉತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಶೇ. 80ರಷ್ಟು ಪ್ರವಾಸಿಗರು ಆಗಮಿಸಿದ್ದರೆ, ಹೊರ ರಾಜ್ಯ ಮತ್ತು ವಿದೇಶಗಳಿಂದ ಶೇ. 20ರಷ್ಟು ಪ್ರವಾಸಿಗರು ಭೇಟಿ ನೀಡಿದ್ದಾರೆ. ಅ. 3ರಿಂದ 8ರವರೆಗೆ ಅಂದಾಜು 6 ಲಕ್ಷ ಮಂದಿ ಮೈಸೂರಿಗೆ ಭೇಟಿ ನೀಡಿದ್ದರೆ, ಅ. 9ರಿಂದ 13ರ ವರೆಗೆ 10 ಲಕ್ಷ ಮಂದಿ ಆಗಮಿಸಿದ್ದಾರೆ. ಈ ಮೂಲಕ ದಸರಾ ಇತಿಹಾಸ
ದಲ್ಲೇ 16 ಲಕ್ಷಕ್ಕೂ ಹೆಚ್ಚು ಮಂದಿ ಭೇಟಿ ನೀಡಿದ್ದು ವಿಶೇಷ.
500 ಕೋಟಿಗೂ ಅಧಿಕ ವಹಿವಾಟು
ಈ ಬಾರಿ ದಾಖಲೆ ಪ್ರಮಾಣದಲ್ಲಿ ಮೈಸೂರಿಗೆ ಪ್ರವಾಸಿಗರು ಭೇಟಿ ನೀಡಿರುವುದು ಸಾರಿಗೆ, ಹೊಟೇಲ್ ಉದ್ಯಮ, ಪ್ರವಾಸಿ ಕೇಂದ್ರ, ವ್ಯಾಪಾರ ಚಟುವಟಿಕೆಗೆ ಶುಕ್ರದೆಸೆ ತಂದಿದೆ. ಈ ಎಲ್ಲ ವಲಯಗಳಿಂದ ಅಂದಾಜು 500 ಕೋಟಿ ರೂ.ಗಳಿಗೂ ಮೀರಿದ ವಹಿವಾಟು ನಡೆದಿದೆ ಎನ್ನಲಾಗಿದೆ. ಹೊಟೇಲ್ ಉದ್ಯಮವೊಂದರಲ್ಲೇ 110 ಕೋಟಿ ರೂ. ವಹಿವಾಟು ನಡೆದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.