ಮೈಸೂರು ಸ್ವಚ್ಛ ಸುಂದರ ನಗರಿ
Team Udayavani, May 17, 2018, 6:05 PM IST
ನವದೆಹಲಿ: ದೇಶದಲ್ಲಿ ಅತ್ಯಂತ ಸ್ವಚ್ಛ ನಗರಗಳ ಬಗ್ಗೆ ಕೇಂದ್ರ ಸರ್ಕಾರ ನಡೆಸುವ ಸಮೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ ಮಂಗಳೂರು ಮತ್ತು ಮೈಸೂರಿಗೆ ಮಾನ್ಯತೆ ಲಭಿಸಿದೆ. ಘನತ್ಯಾಜ ನಿರ್ವಹಣೆಯಲ್ಲಿ ಮಂಗಳೂರು “ಅತ್ಯುತ್ತಮ ನಗರ’ ಎಂಬ ಹೆಗ್ಗಳಿಕೆಗೆ
ಪಾತ್ರವಾಗಿದೆ. 3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ ಕಡಲ ತಟದ ನಗರಕ್ಕೆ ಈ ಹೆಗ್ಗಳಿಕೆ ಪಾತ್ರವಾಗಿದೆ.
“ಸ್ವಚ್ಛ ಸರ್ವೇಕ್ಷಣ್ 2018′ ಶಿರೋನಾಮೆ ಅಡಿಯಲ್ಲಿ ಸಮೀಕ್ಷೆ ನಡೆಸಲಾಗಿತ್ತು. ಇನ್ನು ಅರಮನೆಗಳ ನಗರ ಮೈಸೂರು 3-10 ಲಕ್ಷ ಜನಸಂಖ್ಯೆಯ ವಿಭಾಗದಲ್ಲಿ ದೇಶ ದ ಲ್ಲಿಯೇ “ಅತ್ಯಂತ ಸ್ವಚ್ಛ ನಗರ’ ಎಂದು ಘೋಷಿಸಲಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಖಾತೆ ಸಹಾಯಕ ಸಚಿವ ಹದೀìಪ್ ಸಿಂಗ್ ಪುರಿ ಬುಧವಾರ ಈ ಮಾಹಿತಿ ಬಿಡುಗಡೆ ಮಾಡಿದ್ದಾರೆ.
ದೇಶದ ಅತ್ಯಂತ ಸ್ವತ್ಛ ನಗರ ಎಂಬ ಹೆಗ್ಗಳಿಕೆ ಸಿಕ್ಕಿದ್ದು ಮಧ್ಯಪ್ರದೇಶದ ಇಂದೋರ್‌ಗೆ. ಭೋಪಾಲ್ ಮತ್ತು ಚಂಡೀಗಡ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳಲ್ಲಿವೆ. ರಾಜ್ಯಗಳ ಪೈಕಿ ಜಾರ್ಖಂಡ್ ಅತ್ಯಂತ ಉತ್ತಮ ಸಾಧನೆ ಮಾಡಿದ ರಾಜ್ಯ ಎಂಬ ಹೆಗ್ಗಳಿಕೆಗೆ
ಪಾತ್ರವಾಗಿದೆ. ಮಹಾರಾಷ್ಟ್ರ ಮತ್ತು ಛತ್ತೀಸ್‌ಗಡ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿವೆ. ನವದೆಹಲಿ ಮುನಿಸಿಪಲ್ ಕಾರ್ಪೊರೇಷನ್ (ಎನ್ ಡಿಎಂಸಿ)ಗೆ “ಕ್ಲೀನೆಸ್ಟ್ ಸ್ಮಾಲ್ ಸಿಟಿ’ ಎಂಬ ಗರಿಮೆ ಸಿಕ್ಕಿದೆ. ಇದರ ಜತೆಗೆ ಉತ್ತರ ಭಾಗದಲ್ಲಿ ಘನ ತ್ಯಾಜ್ಯ
ನಿರ್ವಹಣೆಯಲ್ಲಿ ಉತ್ತಮ ಸ್ಥಾನ ಪಡೆದಿದೆ.
ಸಮೀಕ್ಷೆ ಪ್ರಧಾನ ಅಂಶಗಳು
*ಅತ್ಯಂತ ಶುಚಿಯಾಗಿರುವ ರಾಜಧಾನಿ- ಮುಂಬೈ
*ಅತ್ಯಂತ ಹೊಸತನ ಮತ್ತು ವಿನೂತನ ಅಭ್ಯಾಸಗಳ ಜಾರಿ- ನಾಗ್ಪುರ
*ವಲಯವಾರುಗಳ ಪೈಕಿ ಅತ್ಯಂತ ಶುಚಿತ್ವದ ನಗರ- ಪಂಜಾಬ್‌ನ ಭಾಲ್ಸೊ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್
Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Vijay Hazare: ಕರ್ನಾಟಕಕ್ಕೆ ಇಂದು ನಾಗಾಲ್ಯಾಂಡ್ ಎದುರಾಳಿ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.