ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಮೊಳಗಿದ ನಾಡಗೀತೆ!; ಇತಿಹಾಸ ಸೃಷ್ಟಿ
Team Udayavani, Jun 24, 2017, 3:40 PM IST
ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮಿತಿಯ ಹಿಡಿತದಲ್ಲಿರುವ ಸದಾ ಕನ್ನಡ ವಿರೋಧಿ ಚಟುವಟಿಕೆಗಳಿಗೆ ಸಾಕ್ಷಿಯಾಗುತ್ತಿದ್ದ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಶನಿವಾರ ನಾಡಗೀತೆ ಮೊಳಗಿದ್ದು ಎಂಇಎಸ್ ಶಾಸಕರು , ಪಾಲಿಕೆ ಸದಸ್ಯರು ಎದ್ದು ನಿಂತು ಗೌರವ ಸೂಚಿಸಿದ್ದು ವಿಶೇಷವಾಗಿತ್ತು.
ಜಿಲ್ಲಾಧಿಕಾರಿ ಮತ್ತು ಪ್ರಾದೇಶಿಕ ಆಯುಕ್ತ ಎನ್.ಜಯರಾಂ ಅವರು ಕಾರ್ಯಕ್ರಮದ ಆರಂಭಕ್ಕೂ ಮುನ್ನ ನಾಡಗೀತೆ ಹಾಡುವಂತೆ ಆದೇಶಿಸಿದ್ದರು.
ಜೈ ಭಾರತ ಜನನಿಯ ತನುಜಾತೆ…ಹಾಡು ಮೊಳಗಿದಾಗ ಎಂಇಎಸ್ ಶಾಸಕರು, ಪಾಲಿಕೆ ಸದಸ್ಯರೆಲ್ಲರು ಎದ್ದು ನಿಂತು ಗೌರವ ಸೂಚಿಸಿದರು.
ಅಗೌರವ ತೋರಿದರೆ ಸದಸ್ಯತ್ವ ಅನರ್ಹವಾಗಬಹುದು, ಪಾಲಿಕೆ ಸೂಪರ್ ಸೀಡ್ ಆಗುವ ಭೀತಿಯಿಂದ ಗೌರವ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ.
ಕನ್ನಡ ಪರ ಸಂಘಟನೆಗಳ ಹೋರಾಟಗಾರರು ಈ ವಿದ್ಯಮಾನವನ್ನು ಬಹಳ ಸಂಭ್ರಮಿಸಿದ್ದು, ಜಿಲ್ಲಾಧಿಕಾರಿ ಜಯರಾಂ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು