Valmiki corporation scam: ಯಾವುದೇ ಕ್ಷಣದಲ್ಲಿ ನಾಗೇಂದ್ರ, ದದ್ದಲ್‌ ಬಂಧನ?

ಹಗರಣದಲ್ಲಿ ಪ್ರಮುಖ ಸಾಕ್ಷ್ಯಕ್ಕಾಗಿ ಇ.ಡಿ. ಹುಡುಕಾಟ; ನಾಗೇಂದ್ರ ಮತ್ತು ದದ್ದಲ್‌ ಆಪ್ತ ಸಹಾಯಕರ ವಿಚಾರಣೆ ತೀವ್ರ

Team Udayavani, Jul 12, 2024, 6:50 AM IST

Valmiki corporation scam: ಯಾವುದೇ ಕ್ಷಣದಲ್ಲಿ ನಾಗೇಂದ್ರ, ದದ್ದಲ್‌ ಬಂಧನ?

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಪರಿಶಿಷ್ಟ ವರ್ಗಗಳ ಕಲಾಣ್ಯ ಇಲಾಖೆಯ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸವನಗೌಡ ದದ್ದಲ್‌ ನಿವಾಸದ ಮೇಲಿನ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಗುರುವಾರವೂ ಮುಂದುವರಿದಿದ್ದು, ಹಗರಣದಲ್ಲಿ ಶಾಮೀಲಾಗಿರುವುದಕ್ಕೆ ಬಲವಾದ ಸಾಕ್ಷ್ಯ ಸಿಕ್ಕಿದರೆ ಯಾವುದೇ ಕ್ಷಣದಲ್ಲೂ ಇಬ್ಬರನ್ನೂ ಬಂಧಿಸುವ ಸಾಧ್ಯತೆಗಳಿವೆ.

ಬುಧವಾರ ನಾಗೇಂದ್ರ ಹಾಗೂ ದದ್ದಲ್‌ ನಿವಾಸಗಳಲ್ಲಿ ಶೋಧ ನಡೆಸಿದ್ದ ಇ.ಡಿ. ಗುರುವಾರವೂ ಮುಂದುವರಿಸಿತು. ಇಬ್ಬರನ್ನೂ 6 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದು, ಪ್ರಶ್ನೆಗಳ ಸುರಿಮಳೆ ಹರಿಸಿದೆ. ನಾಗೇಂದ್ರ ಹಾಗೂ ದದ್ದಲ್‌ ಹಗರಣದಲ್ಲಿ ಶಾಮೀಲಾಗಿರುವುದಕ್ಕೆ ಇನ್ನಷ್ಟು ಸಾಕ್ಷ್ಯಕ್ಕಾಗಿ ಇ.ಡಿ. ತಡಕಾಡುತ್ತಿದೆ. ನಾಗೇಂದ್ರ ಅವರ ಪಿ.ಎ. ಹರೀಶ್‌ ಹಾಗೂ ಮತ್ತೋರ್ವ ಆಪ್ತ, ದದ್ದಲ್‌ ಆಪ್ತ ಪಂಪಣ್ಣ ಹಾಗೂ ದದ್ದಲ್‌ ಬಾವಮೈದುನನ್ನು ಗುರುವಾರ ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಅವರ ಮೂಲಕವೇ ದದ್ದಲ್‌ ಹಾಗೂ ನಾಗೇಂದ್ರ ಹಗರಣದ ವ್ಯವಹಾರ ಕುದುರಿಸಿರುವ ಶಂಕೆ ವ್ಯಕ್ತವಾಗಿದೆ.

200 ಖಾತೆಗಳಿಗೆ ನಿಗಮದ ದುಡ್ಡು ?
ವಾಲ್ಮೀಕಿ ನಿಗಮಕ್ಕೆ ಸೇರಿದ ದುಡ್ಡು ಅಕ್ರಮವಾಗಿ ಆಂಧ್ರದ ಫ‌ಸ್ಟ್‌ ಫೈನಾನ್ಸ್‌ ಸೊಸೈಟಿಗೆ ವರ್ಗವಾಗಿದೆ. ಅಲ್ಲಿಂದ ಐಟಿ ಕಂಪೆನಿ, ಸೆಕ್ಯೂರಿಟಿ ಏಜೆನ್ಸಿ, ಡಿಟೆಕ್ಟಿವ್‌ ಕಂಪೆನಿ, ಚಿನ್ನದಂಗಡಿ, ಬಾರ್‌, ಖಾಸಗಿ ವ್ಯಕ್ತಿಗಳ ಖಾತೆ ಸೇರಿದಂತೆ ಒಟ್ಟಾರೆ 200 ಖಾತೆಗಳಿಗೆ ತಲಾ 10ರಿಂದ 20 ಲಕ್ಷ ರೂ. ವರೆಗೆ ವರ್ಗಾವಣೆ ಮಾಡಲಾಗಿದೆ.

ಬ್ಯಾಂಕ್‌ ಸಿಬಂದಿಯನ್ನು ಮನೆಗೆ ಕರೆಸಿದ ಇ.ಡಿ.
ಮತ್ತಿಕೆರೆಯ ಐಸಿಐಸಿಐ ಬ್ಯಾಂಕ್‌ನಲ್ಲಿ ನಾಗೇಂದ್ರ ಖಾತೆ ಹೊಂದಿದ್ದರು ಎನ್ನಲಾಗಿದೆ.ಹೀಗಾಗಿ ಇ.ಡಿ.ಯ ಮತ್ತೊಂದು ತಂಡ 2 ವಾಹನಗಳಲ್ಲಿ ಬ್ಯಾಂಕ್‌ ಅಧಿಕಾರಿಗಳನ್ನೇ ನಾಗೇಂದ್ರ ಫ್ಲ್ಯಾಟ್‌ಗೆ ಕರೆತಂದಿತ್ತು. ಅವರ ಮೂಲಕ ಹಗರಣದಲ್ಲಿ ವರ್ಗ ಮಾಡಲಾದ ದುಡ್ಡು ನಾಗೇಂದ್ರ ಬ್ಯಾಂಕ್‌ ಖಾತೆಗೆ ಸಂದಾಯವಾಗಿದೆಯೇ ಎಂಬುದನ್ನು ಪರಿಶೀಲಿಸಿದೆ.

ಗೌಪ್ಯವಾಗಿ ನಿಗಮದ ದುಡ್ಡನ್ನು ಹವಾಲಾ ರೂಪದಲ್ಲಿ ಲಪಟಾಯಿಸುವ ಮಧ್ಯವರ್ತಿಗಳ ಗ್ಯಾಂಗ್‌ನ ಸಹಾಯದಿಂದ ಕೃತ್ಯ ಎಸಗಲಾಗಿರುವ ಸುಳಿವು ಸಿಕ್ಕಿದೆ. ಮಧ್ಯವರ್ತಿಗಳನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ನಾಗೇಂದ್ರ ಡೀಲ್‌ ಕುದುರಿಸಿದ್ದರೇ ಎಂಬ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಹುಟ್ಟಿಕೊಂಡಿದೆ.

ನಾಗೇಂದ್ರಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರಿನ ಡಾಲರ್ಸ್‌ ಕಾಲನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್‌ನಲ್ಲಿ ಗುರುವಾರ ಮಾಜಿ ಸಚಿವರಿಗೆ ಹಗರಣಕ್ಕೆ ಸಂಬಂಧಿಸಿದಂತೆ ನೂರಾರು ಪ್ರಶ್ನೆಗಳನ್ನು ಕೇಳಿದ್ದಾರೆ. ವಾಲ್ಮೀಕಿ ನಿಗಮದಿಂದ 187 ಕೋಟಿ ರೂ. ವರ್ಗಾವಣೆಯಾಗಿರುವುದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ನಿಮಗೆ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರ್‌ ಡೆತ್‌ ನೋಟ್‌ನಲ್ಲಿ ನಿಮ್ಮ ಹೆಸರನ್ನು ಬರೆದಿಟ್ಟಿದ್ದರಲ್ಲ ಇದಕ್ಕೆ ಏನು ಹೇಳುತ್ತೀರಿ? ನಿಮ್ಮ ಗಮನಕ್ಕೆ ಬಂದರೆ ಏಕೆ ದೂರು ನೀಡಲಿಲ್ಲ ಎಂದು ಅಧಿಕಾರಿಗಳು ಪ್ರಶ್ನೆಗಳನ್ನು ಇಟ್ಟಿದ್ದರು. ಆದರೆ ನಾಗೇಂದ್ರ ಇದ್ಯಾವುದಕ್ಕೂ ಸಮರ್ಪಕವಾದ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನು ಹೇಳಿ ಸುಮ್ಮನಾಗಿದ್ದಾರೆಂದು ತಿಳಿದು ಬಂದಿದೆ.

ದದ್ದಲ್‌ ಗೂ ಬಿಸಿ
ಯಲಹಂಕದಲ್ಲಿರುವ ಶಾಸಕ ಬಸವನಗೌಡ ದದ್ದಲ್‌ ನಿವಾಸದಲ್ಲಿ ಇ.ಡಿ. ಅಧಿಕಾರಿಗಳು ನಿಗಮಕ್ಕೆ ಸಂಬಂಧಿಸಿದ ದಾಖಲೆಗಾಗಿ ಇಂಚಿಂಚೂ ಹುಡುಕಿದ್ದಾರೆ. ಬಂಧಿತ ಆರೊಪಿ ಸತ್ಯನಾರಾಯಣ ವರ್ಮನಿಂದ ಶೇಷಾದ್ರಿಪುರ ಸ್ಲಂ ಬೋರ್ಡ್‌ ಬಳಿ ಬಸವನಗೌಡ ದದ್ದಲ್‌ ಆಪ್ತ ಪಂಪಣ್ಣ ನಿಗಮಕ್ಕೆ ಸಂಬಂಧಿಸಿದ 55 ಲಕ್ಷ ರೂ. ಪಡೆದಿದ್ದ ಎನ್ನಲಾಗಿದೆ. ಸತ್ಯನಾರಾಯಣ ವರ್ಮಾನನ್ನು ಇ.ಡಿ. ಈ ಹಿಂದೆ ವಿಚಾರಣೆ ನಡೆಸಿದ್ದ ಸಂದರ್ಭದಲ್ಲಿ ಆತ ಈ ವಿಚಾರವನ್ನು ಬಾಯ್ಬಿಟ್ಟಿದ್ದ. ಇದೀಗ ಅಧಿಕಾರಿಗಳು ಈ ಬಗ್ಗೆ ದದ್ದಲ್‌ಗೆ ಪ್ರಶ್ನಿಸಿದ್ದಾರೆ.

ಆದರೆ ದದ್ದಲ್‌ ತನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನನ್ನ ಪಿ.ಎ. ಬಳಿಯೇ ಕೇಳಿ. ನಾನು ಹಗರಣದಲ್ಲಿ ಶಾಮೀಲಾಗಲಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಪಂಪಣ್ಣನನ್ನು ತೀವ್ರ ವಿಚಾರಣೆಗೆ ಒಳಪಡಿಸಿರುವ ಇ.ಡಿ. ಅಧಿಕಾರಿಗಳು ನಿಗಮದ ದುಡ್ಡು ಪಡೆದ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.

ಟಾಪ್ ನ್ಯೂಸ್

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Kalaburagi: Shigavi result unexpected; We do not agree: C.T. Ravi

Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lakxmi

Belagavi: ಗ್ಯಾರಂಟಿ ವಿರೋಧಿಸಿದ ವಿಪಕ್ಷಗಳಿಗೆ ಸ್ಪಷ್ಟ ಉತ್ತರ ನೀಡಿದ ಮತದಾರ: ಹೆಬ್ಬಾಳ್ಕರ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

16-uv-fusion

Discipline: ಬದುಕಿನಲ್ಲಿ ಶಿಸ್ತಿರಲಿ

15-

Chikkamagaluru: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಗುಡಿಸಲು

Eye Surgeries: ಪದವಿ ಪೂರ್ಣಗೊಳಿಸದೆ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ…

Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

Perth test: ಜೈಸ್ವಾಲ್-ರಾಹುಲ್‌ ಅಜೇಯ ಆಟ; ಪರ್ತ್‌ ನಲ್ಲಿ ಭಾರತದ ಮೇಲಾಟ

14-uv-fusion

Mother: ಅಮ್ಮನ ಜೀವನವೇ ಆದರ್ಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.