ನಳಿನ್ ಕುಮಾರ್ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರ್ಣ: ಶುಭ ಹಾರೈಸಿದ ನಾಯಕರು
Team Udayavani, Aug 27, 2020, 9:38 AM IST
ಸಂಗ್ರಹ ಚಿತ್ರ
ಬೆಂಗಳೂರು: ಸಂಸದ ನಳೀನ್ ಕುಮಾರ್ ಕಟೀಲ್ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದೆ. ಈ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ರಾಜ್ಯಧಕ್ಷರಿಗೆ ಶುಬ ಹಾರೈಸಿ ಟ್ವೀಟ್ ಮಾಡಿದ್ದು, ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿ, ಪಕ್ಷ ಹಾಗು ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ ನಿಮಗೆ ನನ್ನ ಶುಭಹಾರೈಕೆಗಳು ಎಂದಿದ್ದಾರೆ.
ಲೋಕಸಭಾ ಸದಸ್ಯರಾಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಕಟೀಲ್ ರು, ಜನಸಂಘದ ಮೂಲ ಆಶಯವಾದ ಸಂಘಟನೆಯನ್ನು ಬೆಳೆಸುವತ್ತ ಗಮನ ಹರಿಸಿರುವುದು ಸಂತಸದ ವಿಷಯ. ಅಧಿಕಾರ ಗೌಣ, ಸಂಘಟನೆಯೇ ಮುಖ್ಯ ಎಂಬ ಧ್ಯೇಯದಂತೆ ರಾಜ್ಯದೆಲ್ಲೆಡೆ ಪಕ್ಷದ ಚಟುವಟಿಕೆಗಳನ್ನು ವಿಸ್ತರಿಸುತ್ತಾ, ರಾಷ್ಟ್ರದ ಅಭಿವೃದ್ಧಿಯೇ ಪರಮೋಚ್ಚ ಗುರಿ ಎಂಬುದನ್ನು ಅರಿತು ಕೆಲಸ ಮಾಡುತ್ತಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಶುಭವಾಗಲಿ, ಅವರ ನೇತೃತ್ವದಲ್ಲಿ ಪಕ್ಷ ಇನ್ನಷ್ಟು ಸದೃಢವಾಗಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ: ಹೊಸ ಟ್ವಿಸ್ಟ್: ಸುಶಾಂತ್- ರಿಯಾ ಬ್ರೇಕ್ ಅಪ್ ಮೊದಲು ಡಿಲೀಟ್ ಆಗಿತ್ತು 8 ಹಾರ್ಡ್ ಡ್ರೈವ್
ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ವಹಿಸಿಕೊಂಡು ಒಂದು ವರ್ಷ ಪೂರೈಸಿರುವ ನಳೀನ್ ಕುಮಾರ್ ಕಟೀಲ್ ತಳಮಟ್ಟದಿಂದ ಪಕ್ಷ ಸಂಘಟನೆ ಮಾಡುತ್ತಿರುವ ನಿಮಗೆ ಇನ್ನಷ್ಟು ಯಶಸ್ಸು ಸಿಗಲಿ. ಭಗವಂತ ನಿಮಗೆ ಆಯುರಾರೋಗ್ಯ ಕರುಣಿಸಲಿ. ನಿಮ್ಮ ನೇತೃತ್ವದಲ್ಲಿ ಬಿಜೆಪಿ ಪಕ್ಷ ಸಂಘಟನೆಯಾಗಿ ಮತ್ತಷ್ಟು ಬಲಗೊಳ್ಳಲಿ ಎಂದು ಶುಭ ಹಾರೈಸುತ್ತೇನೆ ಎಂದು ಸಚಿವ ಡಾ| ನಾರಾಯಣ ಗೌಡ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.