ಬಿಎಸ್ವೈಗೆ ನಳಿನ್ ಕುಮಾರ್ ಕಟೀಲ್ ಅಭಿನಂದನೆ
Team Udayavani, May 16, 2020, 8:18 AM IST
ಬೆಂಗಳೂರು: ಯಡಿಯೂರಪ್ಪ ಅವರು ನಾಡಿನ ರೈತ, ಕಾರ್ಮಿಕ, ಶ್ರಮಿಕ ಸಮುದಾಯದವರಿಗೆ ಎರಡನೇ ವಿಶೇಷ ಪ್ಯಾಕೇಜ್ ಘೋಷಿಸಿರುವುದನ್ನು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸ್ವಾಗತಿಸಿದ್ದಾರೆ. ಮೆಕ್ಕೆ ಜೋಳ ಬೆಳೆಯುವ 10 ಲಕ್ಷ ರೈತರಿಗೆ ತಲಾ 5000 ರೂ. ಪ್ರಕಟಿಸಲಾಗಿದೆ.
ಹಾಗೆಯೇ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ 137 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಆ ಮೂಲಕ ಬಾಳೆ, ಪಪ್ಪಾಯ, ದ್ರಾಕ್ಷಿ, ಅಂಜೂರ, ಅನಾನಸ್, ಕಲ್ಲಂಗಡಿ, ಖರ್ಜೂರ, ಬೋರೆಯಂತಹ 7 ಹಣ್ಣು ಬೆಳೆಗಾರರು, ಟೊಮೊಟೊ, ಈರುಳ್ಳಿ, ದಪ್ಪ ಮೆಣಸಿನಕಾಯಿ, ಸೊಪ್ಪು, ಈರೇಕಾಯಿ, ತೊಂಡೆಕಾಯಿಯಂತಹ 10 ಬಗೆಯ ತರಕಾರಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 15,000 ರೂ. ಪರಿಹಾರ ನೀಡುತ್ತಿರುವುದು ಸಂಕಷ್ಟದಲ್ಲಿರುವವರಿಗೆ ವರದಾನವಾಗಲಿ ದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
42,250 ಆಶಾ ಕಾರ್ಯಕರ್ತೆಯರಿಗೆ ತಲಾ 3000 ರೂ. ಪ್ರೋತ್ಸಾಹ ಧನ ನೀಡಿರುವುದು. ರಾಜ್ಯದ 1.25 ಲಕ್ಷ ಪವರ್ಲೂಮ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರತಿ ಕಾರ್ಮಿಕರಿಗೆ 2000 ರೂ. ಪರಿಹಾರ ಧನ ಘೋಷಿಸುವ ಮೂಲಕ ಸಿಎಂ ಎಲ್ಲ ಸಮುದಾಯಕ್ಕೆ ಸಾಮಾಜಿಕ ನ್ಯಾಯ ಒದಗಿಸಿ ಜನತೆಯ ಹಿತ ಕಾಪಾಡುವಲ್ಲಿ ಯಶಸ್ವಿಯಾಗಿ ದ್ದಾರೆ. ಇದಕ್ಕಾಗಿ ಅವರಿಗೆ ಅಭಿನಂದಿಸಲಾಗುವುದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.