ಜಗದ್ವಂದ್ಯ ರಾಷ್ಟ್ರವಾಗುವತ್ತ ಮುನ್ನಡೆದ ಭಾರತ: ನಳಿನ್ ಕುಮಾರ್ ಕಟೀಲ್
Team Udayavani, Aug 15, 2021, 3:26 PM IST
ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ ದಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ರಾಷ್ಟ್ರಧ್ವಜಾರೋಹಣ ಮಾಡಿದರು.
ಬಳಿಕ ಮಾತನಾಡಿದ ಅವರು, ದೇಶಾದ್ಯಂತ ನಡೆದ ಜನರ ಹೋರಾಟ, ಅಹಿಂಸಾತ್ಮಕ ಹೋರಾಟ, ತ್ಯಾಗ ಮತ್ತು ಬಲಿದಾನದ ಫಲವಾಗಿ ಭಾರತವು ಸ್ವಾತಂತ್ರ್ಯ ಪಡೆದಿದೆ. ಅಂಥ ಹಿರಿಯರ ಸ್ಮರಣೆ ಅನಿವಾರ್ಯ ಎಂದರು. ಜಗತ್ತಿನ ಸರ್ವಮಾನ್ಯ- ಶ್ರೇಷ್ಠ ದೇಶ ನಮ್ಮದಾಗಬೇಕು. ವಿಶ್ವಕ್ಕೇ ಮಾರ್ಗದರ್ಶನ ನೀಡುವ ಜಗದ್ವಂದ್ಯ ಭಾರತದ ಎಲ್ಲ ಮಹನೀಯರ ಕನಸು ನನಸು ಮಾಡಲು ನಾವು ಪ್ರಯತ್ನ ಮಾಡಬೇಕು ಎಂದರು.
ಹಿಂದೆ ಭಾರತವನ್ನು ಭಿಕ್ಷುಕರ ರಾಷ್ಟ್ರ, ಹಾವಾಡಿಗರ ದೇಶ ಎಂದು ಕರೆಯುತ್ತಿದ್ದರು. ಕಳೆದ ಏಳು ವರ್ಷಗಳ ನರೇಂದ್ರ ಮೋದಿ ಅವರ ಆಡಳಿತದ ಪರಿಣಾಮವಾಗಿ ಭಾರತವು ಜಗದ್ವಂದ್ಯ ರಾಷ್ಟ್ರವಾಗುವತ್ತ ಮುನ್ನಡೆದಿದೆ ಎಂದರು. ಭಾರತವು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿ ಜಗತ್ತಿನ ಅತಿ ಎತ್ತರದ ಸ್ಥಾನಕ್ಕೆ ಏರಿದೆ ಎಂದರು.
ಸ್ವಾತಂತ್ರ್ಯ ಸಂಗ್ರಾಮದ ವೇಳೆ ಇದ್ದ ಕನಸುಗಳು ಈಗ ನನಸಾಗುತ್ತಿವೆ. ವಿಶ್ವ ಯೋಗ ದಿನಾಚರಣೆಗೆ ನರೇಂದ್ರ ಮೋದಿ ಅವರ ನೇತೃತ್ವ ಕಾರಣ. ಕೋವಿಡ್ ಮೊದಲನೇ ಅಲೆಯ ನಂತರ ಸ್ವದೇಶಿ ವ್ಯಾಕ್ಸಿನ್‍ಗಳನ್ನು ಉತ್ಪಾದಿಸಿದ ಭಾರತವು ಹಲವು ಬಡ- ಇನ್ನೂ ವ್ಯಾಕ್ಸಿನ್ ಉತ್ಪಾದಿಸಲು ಸಾಧ್ಯವಾಗದ ಹತ್ತಾರು ದೇಶಗಳಿಗೆ ವ್ಯಾಕ್ಸಿನ್ ಸರಬರಾಜು ಮಾಡಿ ವಿಶ್ವನಾಯಕನಾಗಿ ಹೊರಹೊಮ್ಮಿದೆ ಎಂದು ತಿಳಿಸಿದರು.
ದೇಶದ ಸುಮಾರು 54 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಏಳು ವರ್ಷಗಳಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು, ಬಡವರ ಏಳಿಗೆಗೆ ಹಾಕಿಕೊಂಡ ಕಾರ್ಯಕ್ರಮಗಳ ಮೂಲಕ 139 ಕೋಟಿ ಜನರ ಹೃದಯಗಳನ್ನು ಗೆದ್ದಿದೆ ಎಂದರು. ಭಾರತವು ಕೋವಿಡ್ ಮೊದಲನೇ ಅಲೆ, ಎರಡನೇ ಅಲೆಯನ್ನು ಅತ್ಯಂತ ಸಮರ್ಥವಾಗಿ ನಿಭಾಯಿಸಿದೆ. ಅಲ್ಲದೆ ಕೋವಿಡ್ ನಿಯಂತ್ರಣದಲ್ಲಿದ್ದು ಶಾಲೆ- ಕಾಲೇಜು ತೆರೆಯುವಂಥ ಸ್ಥಿತಿ ಬಂದಿದೆ ಎಂದರು.
ರೈತರನ್ನು ಸ್ವಾವಲಂಬಿ ಮಾಡುವ ನಿಟ್ಟಿನಲ್ಲಿ ಕೇಂದ್ರದ ಬಿಜೆಪಿ ಸರಕಾರವು ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಬಿಮಾ ಯೋಜನೆಗಳನ್ನು ಜಾರಿಗೊಳಿಸಿದೆ. ಈಚೆಗೆ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ ಸುಮಾರು 51 ಲಕ್ಷಕ್ಕೂ ಹೆಚ್ಚು ರೈತರಿಗೆ 1,023 ಕೋಟಿ ರೂಪಾಯಿ ನೆರವು ಲಭಿಸಿದೆ ಎಂದು ತಿಳಿಸಿದರು.
ಸಶಕ್ತ, ಸದೃಢ ದೇಶವಾಗಿ ಭಾರತ ಬೆಳೆಯುತ್ತಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ನೀಡುವ ಕೆಲಸವನ್ನೂ ಕೇಂದ್ರ ಸರಕಾರ ಮಾಡಿದೆ. ಸಂಕಷ್ಟದಲ್ಲಿರುವ ಜನರಿಗೆ ಪರಿಹಾರಧನವನ್ನೂ ನೀಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಪ್ರಯತ್ನದಿಂದ ವಿದ್ಯುತ್ ಸಂಪರ್ಕ ಇಲ್ಲದ 18 ಸಾವಿರ ಗ್ರಾಮಗಳಿಗೆ ವಿದ್ಯುತ್ ಸೌಕರ್ಯ ಕಲ್ಪಿಸಲಾಗಿದೆ. ಹಳ್ಳಿ ಹಳ್ಳಿಗೆ ಇಂಟರ್‍ನೆಟ್ ಸಂಪರ್ಕ ಕೊಡಲಾಗಿದೆ. ರೈತರಿಗೆ ಕ್ರೆಡಿಟ್ ಕಾರ್ಡ್, ಸೋಲಾರ್ ಪವರ್ ಸೌಕರ್ಯ ಕೊಡಲಾಗಿದೆ. ಕಿಸಾನ್ ರೈಲುಗಳ ಮೂಲಕ ರೈತರ ಉತ್ಪನ್ನ ಸಾಗಾಟದಿಂದ ರೈತರ ಆದಾಯ ಹೆಚ್ಚಾಗಿದೆ ಎಂದರು.
ಹಳ್ಳಿಗಳ ಜನರಿಗೆ ಶೌಚಾಲಯ, ಮನೆ ನೀಡುವ ಕಾರ್ಯ, ಉಜ್ವಲ ಯೋಜನೆಯಡಿ ಸಿಲಿಂಡರ್ ನೀಡುವ ಕೆಲಸ ಸೇರಿದಂತೆ ಅದ್ಭುತವಾದ ಅಭಿವೃದ್ಧಿ ಕಾರ್ಯಗಳ ಮೂಲಕ ಭಾರತ ಪ್ರಗತಿಪಧದಲ್ಲಿ ಮುನ್ನುಗ್ಗುತ್ತಿದೆ. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವು ಮನೆ ಮನೆಯ ಸಂಭ್ರಮದ ಹಬ್ಬವಾಗಿದೆ ಎಂದು ನುಡಿದರು. ಭಾರತ ಮಾತೆಯನ್ನು ಪೂಜಿಸುವ ಮತ್ತು ಬಲಿದಾನಗೈದ ಹಿರಿಯರ ಸ್ಮರಣೆಯ ದಿನ ಇದಾಗಲಿ ಎಂದು ಅವರು ಆಶಿಸಿದರು. ಸುಖ, ಶಾಂತಿ, ನೆಮ್ಮದಿಯ ರಾಮರಾಜ್ಯದ ಕನಸು ಮುಂದಿನ ದಿನಗಳಲ್ಲಿ ನನಸಾಗಲಿ ಎಂದು ಅವರು ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.