ಸಂವಿಧಾನವನ್ನೇ ಗೌರವಿಸದ ಕಾಂಗ್ರೆಸ್ಸಿಗರದು ಗೂಂಡಾಗಳ ಪಕ್ಷ: ನಳಿನ್‍ಕುಮಾರ್ ಕಟೀಲ್ ಖಂಡನೆ
Team Udayavani, Jan 3, 2022, 6:21 PM IST
ಬೆಂಗಳೂರು: ಮುಖ್ಯಮಂತ್ರಿಗಳ ಎದುರೇ ವೇದಿಕೆಯಲ್ಲಿ ರಾಜ್ಯದ ಸಚಿವರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರ ಮೇಲೆ ಕಾಂಗ್ರೆಸ್ ಸಂಸದರಾದ ಡಿ.ಕೆ.ಸುರೇಶ್ ಮತ್ತು ಅದೇ ಪಕ್ಷದ ವಿಧಾನ ಪರಿಷತ್ ಸದಸ್ಯರಾದ ಎಸ್.ರವಿ ಅವರು ಹಲ್ಲೆಗೆ ಮುಂದಾಗಿರುವುದು ಅತ್ಯಂತ ಖಂಡನೀಯ. ಕಾಂಗ್ರೆಸ್ ಪಕ್ಷದವರಿಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ. ಅವರದು ಗೂಂಡಾ ರಾಜಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರಾದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಮನಗರದಲ್ಲಿ ಇಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ನಿಗದಿಯಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲೇ ಸಚಿವರ ಮೇಲೆ ಹಲ್ಲೆ ಮಾಡಲು ಕಾಂಗ್ರೆಸ್‍ನ ಸಂಸದ ಡಿ.ಕೆ.ಸುರೇಶ್ ಮುಂದಾಗಿದ್ದು, ಮೈಕ್ ಕಿತ್ತೆಸೆದಿದ್ದಾರೆ. ಕಾಂಗ್ರೆಸ್ ಎಂಎಲ್‍ಸಿ ಎಸ್.ರವಿ ಅವರು ಡಿ.ಕೆ.ಸುರೇಶ್ ಅವರಿಗೆ ಬೆಂಬಲ ನೀಡಿದ್ದಾರೆ. ಇದಲ್ಲದೇ ಕಾಂಗ್ರೆಸ್ಸಿಗರು ಪ್ರಜಾಪ್ರಭುತ್ವಕ್ಕೆ ಅವಮಾನ ಮಾಡುವ ಮಾದರಿಯಲ್ಲಿ ತಮ್ಮ ತೋಳ್ಬಲದ ರಾಜಕೀಯ ಪ್ರದರ್ಶಿಸಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಗೂಂಡಾ ಪ್ರವೃತ್ತಿಗೆ ಕೈಗನ್ನಡಿಯಂತಿದೆ ಎಂದು ಅವರು ತಿಳಿಸಿಸಿದ್ದಾರೆ.
ಇದನ್ನೂ ಓದಿ: ರಾಮನಗರ ಜಿಲ್ಲೆ ಮಾಡಿದವನು ನಾನು.. ಅವರಿಬ್ಬರು ಅಲ್ಲಿ ಕಿತ್ತಾಡುತ್ತಿದ್ದಾರೆ: ಎಚ್ ಡಿಕೆ
ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಹಿಂದಿನಿಂದಲೇ ತೋಳ್ಬಲ ಮತ್ತು ಹಣಬಲದಿಂದ ತನ್ನ ಸಾಮಥ್ರ್ಯ ತೋರಿಸುತ್ತಿತ್ತು. ಕಳೆದ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ನಗಣ್ಯ ಸ್ಥಿತಿಗೆ ಬಂದಿದೆ. ಜನಪರ ಕಾರ್ಯಕ್ರಮಗಳನ್ನು ನೀಡಿದ ಪ್ರಧಾನಿಗಳಾದ ನರೇಂದ್ರ ಮೋದಿಯವರ ಅಭಿವೃದ್ಧಿಯ ಚಿಂತನೆ ಮತ್ತು ಅನುಷ್ಠಾನವನ್ನು ಗಮನಿಸಿ ಜನರು ದೇಶದೆಲ್ಲೆಡೆ ಬಿಜೆಪಿಯತ್ತ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ರಾಜ್ಯದಲ್ಲಿ ಬಳಿಕ ನಡೆದ ವಿಧಾನಸಭಾ ಉಪ ಚುನಾವಣೆ, ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲೂ ಜನರು ಕಾಂಗ್ರೆಸ್ಸಿಗರ ವಿರುದ್ಧ ಮತ್ತು ಬಿಜೆಪಿ ಪರವಾಗಿ ಮತ ಚಲಾಯಿಸಿದ್ದಾರೆ. ಇಷ್ಟಾದರೂ ಕಾಂಗ್ರೆಸ್ ಪಕ್ಷದವರು ಬುದ್ಧಿ ಕಲಿತಿಲ್ಲ. ಕಾಂಗ್ರೆಸ್ಸಿಗರ ಈ ಮಾದರಿಯ ತೋಳ್ಬಲದ ಮತ್ತು ದರ್ಪದ ರಾಜಕಾರಣಕ್ಕೆ ಜನತೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
B. S. Yediyurappa ವಿರುದ್ಧ ಎಫ್ಐಆರ್‌ಗೆ ಸಚಿವರ ಒತ್ತಡ
BJP ಸರಕಾರ ಕಾಲದ ಕೋವಿಡ್, ಗಣಿ ತನಿಖೆಗೆ ಎಸ್‌ಐಟಿ: ಸಚಿವ ಸಂಪುಟ ನಿರ್ಧಾರ
MUST WATCH
ಹೊಸ ಸೇರ್ಪಡೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.