ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯಾ? ನಳಿನ್ ಕಟೀಲ್ ಪ್ರಶ್ನೆ
Team Udayavani, Oct 5, 2020, 4:40 PM IST
ಬೆಂಗಳೂರು: ಸಿಬಿಐ ದಾಳಿಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್, ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ತನ್ನ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಟೀಲ್, ಸಿಬಿಐ ಯಾವುದೇ ದಾಳಿ ಮಾಡುವ ಮೊದಲು ಸಾಕಷ್ಟು ಸಾಕ್ಷ್ಯಗಳನ್ನು ಸಂಗ್ರಹಿಸುತ್ತದೆ. 70 ವರ್ಷ ಆಳಿದ ಕಾಂಗ್ರೆಸ್ಸಿಗೆ ಅದು ಗೊತ್ತಿಲ್ಲ ಎಂದರೆ ಇಷ್ಟು ವರ್ಷ ಸಿಬಿಐಯನ್ನು ರಾಜಕೀಯ ವಿರೋಧಿಗಳನ್ನು ಹಣಿಯಲು ಕಾಂಗ್ರೆಸ್ ಬಳಸುತ್ತಿತ್ತು ಎನ್ನುವುದನ್ನು ಅವರೇ ಒಪ್ಪಿಕೊಂಡಂತೆ ಆಗಿದೆ ಎಂದು ಟೀಕಿಸಿದ್ದಾರೆ.
ಇದಕ್ಕೆ ಕಾಂಗ್ರೆಸ್ಸಿನ ರಾಷ್ಟ್ರೀಯ ನಾಯಕರು ಕುಮ್ಮಕ್ಕು ನೀಡುತ್ತಿರುವುದು ಅವರು ಪರೋಕ್ಷವಾಗಿ ಡಿಕೆ ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆಗೆ ಬೆಂಬಲ ಇದೆಯೆಂದು ಸಾಬೀತುಪಡಿಸಿದಂತೆ ಆಗಿದೆ. ಡಿಕೆಶಿ ಅಕ್ರಮ ಹಣ ಗಳಿಕೆಯಲ್ಲಿ ಕಾಂಗ್ರೆಸ್ ನಾಯಕರಿಗೂ ಪಾಲು ಇದೆಯೆಂದು ತೋರಿಸಿದಂತೆ ಆಗಿದೆ ಎಂದರು.
ಇದನ್ನೂ ಓದಿ:ಬಿಜೆಪಿಯ ಗೊಡ್ಡು ಬೆದರಿಕೆಗಳಿಗೆ ಜಗ್ಗುವುದಿಲ್ಲ: ಸಿಬಿಐ ದಾಳಿ ಬಳಿಕ ಕಿಡಿಕಾರಿದ ಡಿಕೆ ಸುರೇಶ್
ಡಿಕೆಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಮೇಲೆ ಈಡಿ, ಐಟಿ ಸ್ವಾಯತ್ತ ಸಂಸ್ಥೆಗಳು ಈಗಾಗಲೇ ತನಿಖೆ ಮಾಡುತ್ತಿದ್ದು, ಅದು ವಿವಿಧ ಹಂತಗಳಲ್ಲಿ ವಿಚಾರಣೆಯಲ್ಲಿದೆ. ಮಹೀಗಿರುವಾಗ ಸಿಬಿಐ ತನ್ನ ಕೆಲಸ ಮಾಡುತ್ತಿದ್ದು, ಅದಕ್ಕೆ ಸಹಕಾರ ನೀಡುವ ಬದಲು ಸಿಬಿಐ ಅಧಿಕಾರಿಗಳ ವಾಹನಗಳ ಮೇಲೆ ಬೆಂಬಲಿಗರನ್ನು ಬಿಟ್ಟು ದಾಳಿ ಮಾಡಿದ್ದು ಸರಿಯಾ ಎಂದು ನಳಿನ್ ಕಟೀಲ್ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.