ನಳಿನ್ ಕುಮಾರ್ ಕಟೀಲ್ ವಿರುದ್ಧದ ಪ್ರಕರಣ ವಜಾ
Team Udayavani, Aug 28, 2019, 3:00 AM IST
ಬೆಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲ್ ಅವರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ವಜಾಗೊಳಿಸಿರುವ ಹೈಕೋರ್ಟ್ ಆ ಸಂಬಂಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಯನ್ನು ರದ್ದುಗೊಳಿಸಿದೆ.
ಪ್ರಕರಣ ರದ್ದು ಕೋರಿ ನಳಿನ್ ಕುಮಾರ್ ಕಟೀಲ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರಕರಣವನ್ನು ರದ್ದುಗೊಳಿಸಿ ಆದೇಶಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ, ಎಫ್ಐಆರ್ ದಾಖಲಿಸುವಾಗ ಪೊಲೀಸರು ಸೂಕ್ತ ಕಾನೂನು ಪ್ರಕ್ರಿಯೆ ಪಾಲಿಸಿಲ್ಲ.
ದೂರಿನಲ್ಲಿ ಆರೋಪಿಸಿದಂತೆ ಯಾವುದೇ ಅಪರಾಧ ಕೃತ್ಯವನ್ನು ಅರ್ಜಿದಾರರು ಎಸಗಿಲ್ಲ. ಅಲ್ಲದೇ ಘಟನೆ ನಡೆದ ಒಂದು ದಿನದ ಬಳಿಕ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ವಿಳಂಬಕ್ಕೆ ಕಾರಣಗಳನ್ನು ಕೊಟ್ಟಿಲ್ಲ. ಇದೊಂದು ವಜಾಗೊಳ್ಳಲು ಅರ್ಹವಾದ ಪ್ರಕರಣ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಈ ವಾದ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧ ಕೋಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್, ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಹಾಗೂ ಪ್ರಕರಣ ಸಂಬಂಧ ಬೆಂಗಳೂರಿನ ಜನಪ್ರತಿ ನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸಿ ಆದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
Davanagere: ದೇವಸ್ಥಾನಗಳ ಆಸ್ತಿಗಳ ರಕ್ಷಣೆಗೆ ರಾಜ್ಯ ಸರ್ಕಾರ ಮುಂದಾಗಬೇಕು: ಪೇಜಾವರ ಶ್ರೀ
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.