ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದಲ್ಲಿ ಸರ್ವ ಸಮ್ಮತಿ ನಾಯಕರು : ನಳೀನಕುಮಾರ ಕಟೀಲು
Team Udayavani, Jun 7, 2021, 6:23 PM IST
ಹುಬ್ಬಳ್ಳಿ: ಬಿಜೆಪಿಯಲ್ಲಿ ಸಹಿ ಸಂಗ್ರಹ, ಒತ್ತಡ, ಒತ್ತಾಯದಂತಹ ವಿಷಯಗಳಿಲ್ಲ. ನಮ್ಮದು ಶಾಸನಬದ್ಧ ಪಕ್ಷವಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದಲ್ಲಿ ಸರ್ವ ಸಮ್ಮತಿ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಕುರಿತು ಮಾಧ್ಯಮಗಳಿಂದ ಮಾಹಿತಿ ಗೊತ್ತಾಗಿದೆ. ಅವರನ್ನು ಕರೆದು ಮಾತನಾಡುತ್ತೇನೆ. ಸಹಿ ಸಂಗ್ರಹ ಯಾವುದೇ ವಿಷಯಗಳು, ಚರ್ಚೆಗಳು ಇಲ್ಲ.ಇದಕ್ಕೆ ನಮ್ಮ ಪಕ್ಷದಲ್ಲಿ ಆಸ್ಪದವಿಲ್ಲ ಎಂದರು.
ರಾಷ್ಟ್ರೀಯ ನಾಯಕು, ಹೈಕಮಾಂಡ್ ಸೂಚನೆಯನ್ನು ಪಾಲನೆ ಮಾಡುವ ಆದರ್ಶದ ಪಕ್ಷವಾಗಿದೆ. ಹೀಗಾಗಿಯೇ ಮುಖ್ಯಮಂತ್ರಿಗಳು ಈ ಅರ್ಥದಲ್ಲಿ ಹೇಳಿದ್ದಾರೆ. ಇದನ್ನು ಪಕ್ಷದ ನಾಯಕರು, ಶಾಸಕರು ಅರ್ಥ ಮಾಡಿಕೊಳ್ಳಬೇಕು. ಇದೀಗ ಮುಖ್ಯಮಂತ್ರಿ ಹುದ್ದೆ ಖಾಲಿಯಿಲ್ಲ. ಈ ಬಗ್ಗೆ ಚರ್ಚೆ ಅಪ್ರಸ್ತುತವಾಗಿವೆ. ಹೀಗಾಗಿ ಸಹಿ ಸಂಗ್ರಹ, ಒತ್ತಡದ ವಿಚಾರಗಳು ಇಲ್ಲ. ಇಂತಹ ಕೆಲಸಕ್ಕೆ ಯಾರೇ ಮುಂದಾದರೂ ಕರೆದು ಮಾತನಾಡುತ್ತೇನೆ.
ಕೋವಿಡ್ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕೆ ಶಾಸಕರು ಮುಂದಾಗಬೇಕು. ಯಾವುದೇ ಕಾರಣಕ್ಕೂ ತಮ್ಮ ಕ್ಷೇತ್ರ ಬಿಟ್ಟು ಹೋಗುವಂತಿಲ್ಲ. ಅಗತ್ಯವಿದ್ದರೆ ಬೆಂಗಳೂರಿಗೆ ಮಾತ್ರ ಹೋಗಬಹುದು. ಜನರು ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ಶಾಸಕರ ಕಾರ್ಯವನ್ನು ಪಕ್ಷ ಗಮನಿಸುತ್ತಿದೆ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.