ಆಡಳಿತ ನಡೆಸುವುದು ಹೇಗೆಂದು ನಮಗೆ ಗೊತ್ತಿದೆ, ಕಾಂಗ್ರೆಸ್‌ ವಿರುದ್ಧ ನಳಿನ್ ಕುಮಾರ್ ವಾಗ್ದಾಳಿ


Team Udayavani, Jun 25, 2022, 12:50 PM IST

ಆಡಳಿತ ನಡೆಸುವುದು ಹೇಗೆಂದು ನಮಗೆ ಗೊತ್ತಿದೆ, ಕಾಂಗ್ರೆಸ್‌ ವಿರುದ್ಧ ನಳಿನ್ ಕುಮಾರ್ ವಾಗ್ದಾಳಿ

ಮಂಗಳೂರು :  ದೇಶದಲ್ಲಿ 2014ರ ಅನಂತರ ಎನ್‌ಡಿಎ ಸರಕಾರ ಬಂದ ಮೇಲೆ ಪರಿವರ್ತನೆಯ ಹಾದಿ ಆರಂಭವಾಗಿದೆ. ರಾಷ್ಟ್ರಕ್ಕೆ ಉಪಯುಕ್ತವಾದ ಹತ್ತಾರು ಯೋಜನೆಗಳನ್ನು ಸರಕಾರ ತರುತ್ತಿದೆ. ದೇಶಕ್ಕೆ ಒಳ್ಳೆಯದಾಗುವ ಯೋಜನೆಗಳನ್ನು ವಿರೋಧಿಸುವುದು ಕಾಂಗ್ರೆಸ್‌ನ ಮಾನಸಿಕತೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ನಗರದಲ್ಲಿ ಮಾತಾನಾಡಿದ ಅವರು, ಅಗ್ನಿಪಥ ಸೇನೆಯಲ್ಲಿ ಯುವಜನತೆ ಬರಬೇಕು, ಯುವಸೈನ್ಯ ಇರಬೇಕು ಎಂಬುದು ಉದ್ದೇಶದ ಯೋಜನೆ. ಎಲ್ಲರಿಗೂ ಮಿಲಿಟರಿ ಸಂಸ್ಕಾರ, ಶಿಕ್ಷಣ ಸಿಗಬೇಕು. ರಾಷ್ಟ್ರಭಕ್ತಿ ಜಾಗೃತವಾಗಬೇಕು. ಆಗ ಅವರ ಜೀವನದಲ್ಲಿ ಒಳ್ಳೆಯದಾಗುತ್ತದೆ. ರಾಷ್ಟ್ರಕ್ಕೂ ಒಳ್ಳೆಯದಾಗುತ್ತದೆ. ಇದನ್ನು ಕಾಂಗ್ರೆಸ್‌ನವರಲ್ಲಿ ಕೇಳಿಲ್ಲ. ಉದ್ಯೋಗ ಬಯಸುವವರಿಗೆ, ಸೇನೆ ಸೇರಲು ಬಯಸುವವರಿಗೆ, ರಾಷ್ಟ್ರಕ್ಕಾಗಿ ದುಡಿಯುವವರಿಗೆ ಅವಕಾಶವನ್ನು ಮಾಡಿಕೊಡಲಾಗುತ್ತಿದೆ. ಅಗ್ನಿಪಥ ಯುವಜನತೆಯ ಭವಿಷ್ಯಕ್ಕಾಗಿ. ಮುಂದೆಯೂ ಅವರಿಗೆ ಉದ್ಯೋಗ ದೊರೆಯುವ ಅವಕಾಶವಿದೆ. ಕಾಂಗ್ರೆಸ್‌ನದ್ದು ವಿರೋಧದ ಮಾನಸಿಕತೆ ಎಂದರು.

ಇದನ್ನೂ ಓದಿ: ಬಿಸಿಸಿಐ ದೆಸೆಯಿಂದ ಸೆಕಂಡ್ ಹ್ಯಾಂಡ್ ವಸ್ತುಗಳ ಅಂಗಡಿ ನಡೆಸ್ತಿದ್ದಾರೆ ಮಾಜಿ ಐಸಿಸಿ ಅಂಪೈರ್!

ಕಾಂಗ್ರೆಸ್ ದ್ವೇಷದ ಭಾವನೆ ಮೂಡಿಸುತ್ತಿದೆ. ರಾಜ್ಯದಲ್ಲಿ ಸರಕಾರ ಇರುವಾಗಲೂ ನಿರಂತರವಾಗಿ ಗಲಭೆಗೆ ಪ್ರಚೋದನೆ ನೀಡುತ್ತಾ ಬಂದಿದೆ. ಘಟನೆಗಳಲ್ಲಿ ಸೂತ್ರಧಾರಿಯಾಗಿ ಇರುವುದನ್ನು ಕಂಡಿದ್ದೇವೆ. ಡಿಜೆ ಹಳ್ಳಿ, ಕೆಜೆ ಹಳ್ಳಿ, ಶಿವಮೊಗ್ಗ ಹುಬ್ಬಳ್ಳಿ ಗಲಭೆಯ ಹಿಂದೆ ಕಾಂಗ್ರೆಸ್ ಇದೆ. ಕಾಂಗ್ರೆಸ್ ದ್ವೇಷದ ರಾಜಕಾರಣ ಹರಡುತ್ತದೆ. ಪಠ್ಯ ಪುಸ್ತಕದಲ್ಲಿ ಏನಿದೆ ಎಂದು ಓದದೆ ಮೂರ್ಖತನದ ಪರಮಾವಧಿ ತೋರಿಸುತ್ತಿದೆ ಎಂದು ವಾಗ್ದಾಲಿ ನಡೆಸಿದರು.

ಬಿಜೆಪಿ ಯಾವುದಕ್ಕೂ ಕ್ಷಮೆ ಕೇಳುವುದಿಲ್ಲ. ಆಡಳಿತ ನಡೆಸುವುದು ಹೇಗೆಂದು ಗೊತ್ತಿದೆ. ಸಾಹಿತಿಗಳು ಕೂಡ ಯೋಚನೆ ಮಾಡಲಿ. ಯಾವ ಕಾಲಘಟ್ಟದಲ್ಲಿ ಯಾವ ಹೋರಾಟ ಮಾಡಿದ್ದಾರೆಂದು. ಯಾರೇ ಆದರೂ ಕೂಡ ಪುಸ್ತಕದಲ್ಲಿರುವ ವಿಷಯಗಳನ್ನು ಮೊದಲು ತಿಳಿದುಕೊಳ್ಳಲಿ ಎಂದು ಹೇಳಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Dinesh-Gundurao

Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್‌

CT-Ravi-BJP

Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ

BJP 2

BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

dw

Kundapura: ಮಲಗಿದಲ್ಲೇ ವ್ಯಕ್ತಿ ಸಾವು

death

Puttur: ಎಲೆಕ್ಟ್ರಿಕ್‌ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.