ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆಗೆ ಆದೇಶಿಸಿ, 50 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ
Team Udayavani, Aug 21, 2020, 11:59 AM IST
ಬೆಂಗಳೂರು: ಮೈಸೂರಿನ ನಂಜನಗೂಡಿನ ವೈದ್ಯಾಧಿಕಾರಿ ಡಾ. ಎಸ್. ಆರ್ ನಾಗೇಂದ್ರ ಅವರ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಬಿ ಎಸ್ ಯಡಿಯೂರಪ್ಪ ಸೂಚಿಸಿದ್ದಾರೆ. ಇದಲ್ಲದೆ ಮೃತ ವೈದ್ಯಾಧಿಕಾರಿಯ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನೂ ಘೋಷಿಸಿದ್ದಾರೆ.
ಕರ್ನಾಟಕ ನೌಕರರ ಸಂಘದ ಮನವಿ ಮೇರೆಗೆ ವೈದ್ಯಾಧಿಕಾರಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಸಿಎಂ ಆದೇಶ ಮಾಡಿದ್ದಾರೆ. ಪ್ರಕರಣದ ತನಿಖೆ ನಡೆಸಿ ಏಳು ದಿನದೊಳಗೆ ವರದಿ ನೀಡುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.
ನಂಜನಗೂಡಿನ ವೈದ್ಯಾಧಿಕಾರಿ ಡಾ.ನಾಗೇಂದ್ರ ಅವರು ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ನಾಗೇಂದ್ರ ಆತ್ಮಹತ್ಯೆಗೆ ಜಿಪಂ ಸಿಇಒ ಕಾರಣ ಎಂದು ಆರೋಪಿಸಿದ ವೈದ್ಯರು ಹಾಗೂ ಇತರೆ ಸಿಬ್ಬಂದಿ ಗುರುವಾರ ರಾತ್ರಿಯಿಡೀ ಪ್ರತಿಭಟನೆಯಲ್ಲಿ ತೊಡಗಿದ್ದರು.
ನಿನ್ನೆ ದೈವಾಧೀನರಾದ ನಂಜನಗೂಡಿನ ಆರೋಗ್ಯಾಧಿಕಾರಿ ಶ್ರೀ ನಾಗೇಂದ್ರ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಧನ ಹಾಗು ಮೃತರ ಶ್ರೀಮತಿಯವರಿಗೆ ಸಬ್ ರಿಜಿಸ್ಟ್ರಾರ್ ಉದ್ಯೋಗವನ್ನು ನೀಡಲು ಒಪ್ಪಿಗೆ ಸೂಚಿಸಿರುವ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @BSYBJP ರವರಿಗೆ ಅಭಿನಂದನೆಗಳು. ಪ್ರಕರಣದ ಸಂಪೂರ್ಣ ತನಿಖೆಯನ್ನು ಪಾರದರ್ಶಕವಾಗಿ ನಡೆಸಲಾಗುವುದು. pic.twitter.com/7OgjzrFqXv
— Dr Sudhakar K (@mla_sudhakar) August 21, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.