ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ನರಗುಂದ ಬಂದ್ ; ಆಕ್ರೋಶ
Team Udayavani, Jan 3, 2018, 9:18 AM IST
ನರಗುಂದ: ಮಹದಾಯಿ ಹಾಗೂ ಕಳಸಾ-ಬಂಡೂರಿ ನಾಲಾ ಜೋಡಣೆ ಕುರಿತು ಗೋವಾ ಕಾಂಗ್ರೆಸ್ ನಿಲುವು ಖಂಡಿಸಿ ಬಿಜೆಪಿ ಸ್ಥಳೀಯ ಘಟಕ ಬುಧವಾರ ನರಗುಂದ ಬಂದ್‌ಗೆ ಕರೆ ನೀಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗಲ್ಲಿಗಲ್ಲಿಗಳಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಿಜೆಪಿ ಪರವಿರುವ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.
ಸತತ ಬಂದ್ ಹೋರಾಟಗಳಿಂದ ಬಸವಳಿದ ನರಗುಂದದಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ವಾಹನ ಸಂಚಾರ, ಸರ್ಕಾರಿ ಬಸ್‌ಗಳ ಸಂಚಾರ ಸ್ತಬ್ಧಗೊಂಡಿದ್ದು , ಶಾಲಾ ಕಾಲೇಜುಗಳಿಗೆ ರಜೆ ಸಾರಲಾಗಿದೆ.
ಮಹದಾಯಿ ನೀರು ತರಲು ಶತಾಯಗತಾಯ ಪಟ್ಟು ಬಿಡದೇ ಹೋರಾಡುತ್ತಿರುವಮಲಪ್ರಭೆ ತಟದ ರೈತರು 903ನೇ ದಿನದ ನಿರಂತರಧರಣಿ ಮುಂದುವರಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಪುರಸಭೆ ಆವರಣದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಪ್ರಾರಂಭಿಸಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. ಬಳಿಕ ಹುತಾತ್ಮರೈತನ ವೀರಗಲ್ಲು ಬಳಿ ನಿರ್ಮಿಸಿರುವ ವೇದಿಕೆ ಬಳಿ ಸಮಾವೇಶಗೊಳ್ಳಲಿದ್ದಾರೆ.
ವಿಧಾನಸಭೆವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ, ಶಾಸಕರಾದ ಬಸವರಾಜ ಬೊಮ್ಮಾಯಿ, ಆನಂದ ಮಾಮನಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಸಿ.ಪಾಟೀಲ, ಮಾಜಿ ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಕಳಕಪ್ಪ ಬಂಡಿ, ಶ್ರೀಶೈಲಪ್ಪಬಿದರೂರ, ಮಹಾದೇವಪ್ಪ ಯಾದವಾಡ, ಎನ್.ಕೆ. ಪಟ್ಟಣಶೆಟ್ಟಿ, ರಾಮಣ್ಣ ಲಮಾಣಿ
ಪಾಲ್ಗೊಳ್ಳಲಿದ್ದಾರೆ ಎಂದು ನರಗುಂದ ಬಿಜೆಪಿ ಮಂಡಳ ಅಧ್ಯಕ್ಷ ಮಲ್ಲಪ್ಪ ಮೇಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್‌ಐಆರ್ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.