ಕೆಂಡದಂತ ಬಿಸಿಲಿಗೆ ನಾರಾಯಣಪುರ ಡ್ಯಾಂ ಬರಿದು
Team Udayavani, Mar 21, 2017, 12:00 PM IST
ಯಾದಗಿರಿ: ಬರಗಾಲ ಹಾಗೂ ಕೆಂಡದಂತಹ ಬಿಸಿಲಿಗೆ ನಾರಾಯಣಪುರ ಜಲಾಶಯ ತಳಕಂಡಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದೆ. ಇನ್ನೊಂದೆಡೆ ಕೃಷಿ ಚಟುವಟಿಕೆಗೂ ನೀರಿಲ್ಲದೆ ರೈತರು ಆತಂಕ
ಎದುರಿಸುತ್ತಿದ್ದಾರೆ. ಕೃಷ್ಣಾ ನದಿಗೆ ನಾರಾಯಣಪುರದ ಬಸವಸಾಗರ ಜಲಾಶಯ ನಿರ್ಮಿಸಲಾಗಿದೆ. ಯಾದಗಿರಿ,
ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಯ ಸುಮಾರು 5.50 ಲಕ್ಷ ಹೆಕ್ಟೇರ್ ಕೃಷಿ ಪ್ರದೇಶಕ್ಕೆ ನೀರು ಒದಗಿಸುವ ಜಲಾಶಯ ಈಗ ಬಹುತೇಕ ಬರಿದಾಗಿದ್ದು, ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ರೈತರು ಕಂಗಲಾಗಿದ್ದಾರೆ.
ಅರ್ಧಕ್ಕಿಂತ ಕಡಿಮೆ: ಬಸವಸಾಗರ ಜಲಾಶಯ 33.313 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದೆ. ಆದರೆ ಈಗ ಜಲಾಶಯದಲ್ಲಿ 15.593 ಟಿಎಂಸಿ ನೀರು ಸಂಗ್ರಹವಿದೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ 14.942 ಟಿಎಂಸಿ ನೀರಿನ ಸಂಗ್ರಹವಿತ್ತು. ಕಳೆದ ವರ್ಷಕ್ಕೆ ಹೋಲಿಸಿದಲ್ಲಿ ನೀರಿನ ಪ್ರಮಾಣ ಕೊಂಚ ಜಾಸ್ತಿಯಿದ್ದರೂ ಸದ್ಯ ಜಲಾಶಯದಲ್ಲಿ ಸಂಗ್ರಹವಿರುವ ನೀರನ್ನು ಕುಡಿಯಲು ಹಾಗೂ ರಾಯಚೂರಿನಲ್ಲಿರುವ ಶಾಖೋತ್ಪನ್ನ ಕೇಂದ್ರಕ್ಕೆ
(ಆರ್‌ಟಿಪಿಎಸ್) ವಿದ್ಯುತ್ ಉತ್ಪಾದನೆಗಷ್ಟೇ ಬಳಸಲು ನಿರ್ಧರಿಸಲಾಗಿದೆ. ನಾರಾಯಣಪುರ ಜಲಾಶಯದಲ್ಲಿ ಈಗ ಅರ್ಧಕ್ಕಿಂತ ಹೆಚ್ಚು ನೀರು ಖಾಲಿಯಾಗಿದೆ. ಹೀಗಾಗಿ, ಕಾಲುವೆಗಳಿಗೆ ನೀರು ಹರಿಸುವುದನ್ನು ಸ್ಥಗಿತಗೊಳಿಸಲಾಗಿದೆ.
ಕೃಷ್ಣೆ ಮತ್ತು ಭೀಮಾ ನದಿಗಳೂ ಬತ್ತಿದ್ದು, ಕೃಷಿ ಚಟುವಟಿಕೆಗೆ ನೀರು ಲಭ್ಯವಾಗದೆ ರೈತರು ಪರಿತಪಿಸುತ್ತಿದ್ದಾರೆ.
ಜನ ಹಾಗೂ ಜಾನುವಾರುಗಳೂ ನೀರಿಗಾಗಿ ಅಲೆದಾಡುವ ಸ್ಥಿತಿ ಉದ್ಭವಿಸಿದೆ. ಪ್ರತಿ ವರ್ಷ ಬರಗಾಲದಿಂದ ತತ್ತರಿಸುವ
ಈ ಭಾಗದ ಜಿಲ್ಲೆಗಳು ನೀರಿನ ಸಮಸ್ಯೆಯನ್ನು ನಿರಂತರವಾಗಿ ಎದುರಿಸುತ್ತಿವೆ. ಆದರೆ ಯಾವುದೇ ಸರ್ಕಾರ ಸಮಸ್ಯೆಯ ಶಾಶ್ವತ ನಿವಾರಣೆಗೆ ಗಮನ ಹರಿಸುತ್ತಿಲ್ಲ. ಕಾಲುವೆಗಳಲ್ಲಿ ನೀರು ಹರಿಯಲು ಬೇಕಾದ ವ್ಯವಸ್ಥೆ ಮಾಡುತ್ತಿಲ್ಲ.
ಜಲಾಶಯದ ನೀರನ್ನು ನಂಬಿ ರೈತರು ಬೆಳೆದ ಬೆಳೆಗಳು ಒಣಗುತ್ತಿವೆ. ಪ್ರತಿ ವರ್ಷ ಇದೇ ಸಮಸ್ಯೆ ಎದುರಾಗುತ್ತಿದ್ದು, ಸರ್ಕಾರ ಈಗಲಾದರೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಕ್ರಮ ಕೈಗೊಳ್ಳುವುದೇ ಎಂಬುದು ಸ್ಥಳೀಯರ ನಿರೀಕ್ಷೆ.
ಏ. 15ರ ವರೆಗೆ ನೀರು ಕೊಡಿ
ನಾರಾಯಣಪುರ ಜಲಾಶಯದಿಂದ ಎಡದಂಡೆ ಕಾಲುವೆಗೆ ಏ.15ರ ವರೆಗೆ ನೀರು ಹರಿಸುವಂತೆ ಆಗ್ರಹಿಸಿ ಶಾಸಕ ರಾಜಾ ವೆಂಕಟಪ್ಪ ನಾಯಕ ನೇತೃತ್ವದ ನಿಯೋಗದಲ್ಲಿ ರೈತರು ಬೆಂಗಳೂರಿನಲ್ಲಿ ಕೆಬಿಜೆಎನ್ನೆಲ್ ವ್ಯವಸ್ಥಾಪಕ ನಿರ್ದೇಶಕ ಅಂಜುಮ್ ಪರ್ವೆಜ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ನೀರು ಗುಂಡಿಗೆ ವನ್ಯಪ್ರಾಣಿಗಳ ದಂಡು
ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೂ ಬರದ ಬಿಸಿ ತಟ್ಟಿದ್ದು, ದಟ್ಟಾರಣ್ಯವಿರುವ ಕೆಲವೆಡೆ ನೀರಿಗೆ ತತ್ವಾರವಿರುವ ಕಡೆಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ತೋಡಿದ್ದ ಗುಂಡಿಯಲ್ಲಿ ಅಂತರ್ಜಲ ಹೊರಚಿಮ್ಮಿದ್ದು,
ದಣಿವಾರಿಸಿಕೊಳ್ಳಲು ಇದೀಗ ವನ್ಯಪ್ರಾಣಿಗಳು ಧಾವಿಸುತ್ತಿವೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಕಲ್ಲಹಳ್ಳ(ಮೂರ್ಕಲ್) ವಲಯದ ಈರನ ಹಡ್ಲುಪಾರೆ ತೋಡು ಎಂಬಲ್ಲಿ ಕುಡಿಯುವ ನೀರಿಗಾಗಿ ಪ್ರಾಣಿಗಳು
ಬರುತ್ತಿರುವುದನ್ನು ಮನಗಂಡಿದ್ದ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಸಿಬ್ಬಂದಿ ತೋಡಿದ್ದ ಗುಂಡಿಯಲ್ಲಿ ಸಾಕಷ್ಟು ನೀರು ಶೇಖರಣೆಯಾಗಿದ್ದು, ಹುಲಿ, ನವಿಲು, ಚಿರತೆ, ಕಾಟಿ, ಜಿಂಕೆಗಳು ನೀರು ಕುಡಿದಿರುವ ಬಗ್ಗೆ ಕ್ಯಾಮರಾದಲ್ಲಿ ಚಿತ್ರಗಳು ಸೆರೆಯಾಗಿವೆ.
ಶುಕ್ರವಾರ ಚಿರತೆಯೊಂದು ನೀರು ಕುಡಿದು ತೆರಳುತ್ತಿದ್ದರೆ, ಅದೇ ಹಳ್ಳಕ್ಕೆ ಬೆಳಗ್ಗೆ ನೀರು ಕುಡಿಯಲು ಭಾರೀ
ಗಾತ್ರದ ಹುಲಿ ಆಗಮಿಸಿರುವುದು ಅರಣ್ಯ ಇಲಾಖೆ ಅಳವಡಿಸಿದ್ದ ಕ್ಯಾಮರಾದಲ್ಲಿ ಸೆರೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.