ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ: ಹೈದರಾಬಾದಿಗೆ ತೆರಳಿದ ಸಿಎಂ ಬೊಮ್ಮಾಯಿ
Team Udayavani, Jul 2, 2022, 11:04 AM IST
ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ ತೆಲಂಗಾಣ ರಾಜ್ಯದ ಹೈದರಾಬಾದಿನಲ್ಲಿ ರಾಷ್ಟ್ರೀಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯಲಿದೆ. ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಿಂದ ಹೈದರಾಬಾದಿಗೆ ತೆರಳಿದರು.
ಬಿಜೆಪಿ ರಾಷ್ಟ್ರೀಯ ಮುಖಂಡರು ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಇನ್ನು ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಇದನ್ನೂ ಓದಿ:ಮಣಿಪುರ ಭೂಕುಸಿತ- ಸಾವಿನ ಸಂಖ್ಯೆ ಏರಿಕೆ: 18 ಯೋಧರು ಸೇರಿದಂತೆ 24 ಮಂದಿ ಸಾವು
ಸಾಂದರ್ಭಿಕವಾಗಿ ಅವರನ್ನು ಭೇಟಿಯಾಗುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುದ್ದಿಗಾರರಿಗೆ ಬೆಂಗಳೂರಿನಲ್ಲಿ ತಿಳಿಸಿದರು.