![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 2, 2022, 2:50 PM IST
ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಎಂಬ ಅಭಿಯಾನಕ್ಕೆ ಕರೆ ನೀಡಿದೆ. ಇದೀಗ ಸಾಮಾಜಿಕ ಜಾಲತಾಣದಲ್ಲೂ ಅಭಿಯಾನ ಶುರು ಮಾಡಿದೆ.
ಈ ಅಭಿಯಾನದ ಮೂಲಕ ಆ ದಿನ ಪ್ರತಿ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಾಡಲಿ ಎಂಬ ಉದ್ದೇಶ ಹೊಂದಿರುವ ಸರ್ಕಾರ ಇಂದಿನಿಂದ ಸಾಮಾಜಿಕ ಜಾಲತಾಣದಲ್ಲೂ ರಾಷ್ಟ್ರಧ್ವಜ ಅಭಿಯಾನ ಪ್ರಾರಂಭಿಸಿದೆ. ಹೌದು ಆಗಸ್ಟ್ 2 ರಿಂದ 15ರವರೆಗೆ ಸಾಮಾಜಿಕ ಜಾಲತಾಣದ ಪ್ರೊಫೈಲ್ ಫೋಟೋಗಳಾಗಿ ರಾಷ್ಟ್ರಧ್ವಜ ಬಳಸುವ ಅಭಿಯಾನಕ್ಕೆ ಮುಂದಾಗಿದೆ.
ಈ ಅಭಿಯಾನದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂ ವೇದಿಕೆಯಲ್ಲಿ ಹಂಚಿಕೊಂಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ಪ್ರೋಫೈಲ್ ಫೋಟೊಗಳಾಗಿ ನಮ್ಮ ರಾಷ್ಟ್ರಧ್ವಜವನ್ನು ಬಳಸೋಣ.ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ “ಮನೆ ಮನೆಯಲ್ಲೂ ರಾಷ್ಟ್ರದ್ವಜ” ಅಭಿಯಾನದ ಬಗ್ಗೆ ಜಾಗೃತಿ ಮೂಡಿಸೋಣ ಎಂದು ಹೇಳಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೀಡಿದ ಕರೆಯಂತೆ ಆಗಸ್ಟ್ 2 ರಿಂದ 15ರವರೆಗೆ ನಾವೆಲ್ಲರೂ ನಮ್ಮ ಸಾಮಾಜಿಕ ಜಾಲತಾಣಗಳ ಪ್ರೊಫೈಲ್ ಪಿಕ್ ಗಳಾಗಿ ಭಾರತದ ರಾಷ್ಟ್ರಧ್ವಜದ ಚಿತ್ರವನ್ನು ಹಾಕೋಣ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ನೀಡಿದ ಕರೆಯನ್ನು ಯಶಸ್ವಿಗೊಳಿಸೋಣ ಎಂದು ಹೇಳಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.