ಮುತ್ತಪ್ಪ ರೈ ವಿರುದ್ಧ ಎನ್ಸಿಆರ್ ದಾಖಲು
Team Udayavani, Mar 3, 2020, 3:04 AM IST
ಬೆಂಗಳೂರು: ಜೀವ ಬೆದರಿಕೆ ಮತ್ತು ವಂಚನೆ ಆರೋಪದಡಿ ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಹಾಗೂ ಇತರರ ವಿರುದ್ಧ ಸದಾಶಿವನಗರ ಠಾಣೆಯಲ್ಲಿ ಗಂಭೀರ ಸ್ವರೂಪವಲ್ಲದ ಪ್ರಕರಣ (ಎನ್ಸಿಆರ್) ದಾಖಲಾಗಿದೆ. ಕಾಂಗ್ರೆಸ್ ಮುಖಂಡ ರಾಕೇಶ್ ಮಲ್ಲಿ ಎಂಬವರು ನೀಡಿದ್ದ ದೂರಿನ ಮೇರೆಗೆ ಎನ್ಸಿಆರ್ ದಾಖಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹತ್ತು ವರ್ಷಗಳ ಹಿಂದೆ ನಾನೂ ಹಾಗೂ ಮುತ್ತಪ್ಪ ರೈ ಜತೆಗೂಡಿ ಬಂಟ್ವಾಳದಲ್ಲಿ 17.5 ಎಕರೆ ಜಮೀನು ಖರೀದಿಸಿ ನಿವೇಶನಗಳಾಗಿ ಪರಿವರ್ತಿಸಿದ್ದೆವು.
180 ನಿವೇಶನಗಳ ಪೈಕಿ ಸುಮಾರು 70 ನಿವೇಶನಗಳು ಮಾರಾಟವಾಗಿದೆ. ನಿವೇಶನ ಮಾರಾಟದ ಹಣ ಕೊಡದೆ ಮುತ್ತಪ್ಪ ರೈ ವಂಚಿಸಿದ್ದಾರೆ. ಹಣ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಲ್ಲಿ ಸಿಸಿಬಿಗೆ ದೂರು ನೀಡಲು ಮುಂದಾಗಿದ್ದರು. ಆದರೆ, ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದು, ಸದಾಶಿವನಗರ ಠಾಣೆಯಲ್ಲಿ ಮುತ್ತಪ್ಪ ರೈ ವಿರುದ್ಧ ದೂರು ದಾಖಲಿಸಿದ್ದಾರೆ. ಹೀಗಾಗಿ ಸದ್ಯ ಎನ್ಸಿಆರ್ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.