ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ

Team Udayavani, Mar 5, 2022, 1:15 PM IST

ಅಂತಾರಾಜ್ಯ ಜಲವಿವಾದ ಕಾಯ್ದೆಗೆ ತಿದ್ದುಪಡಿ ಅಗತ್ಯ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತಾರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಗಳ ಕುರಿತಂತೆ ದಕ್ಷಿಣ ಭಾರತದ ರಾಜ್ಯಗಳ ಪ್ರಾದೇಶಿಕ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.

ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ನಿರ್ವಹಣೆ ಮಾತ್ರ ಇದಕ್ಕೆ ಪರಿಹಾರ ಎಂದರು.

ಜನರಿಗೆ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ವಿಚಾರದಲ್ಲಿ ಎಲ್ಲರೂ ಒಮ್ಮತದಿಂದ ಕಾರ್ಯನಿರ್ವಹಿಸಬೇಕು. ನೀರು ಸರಬರಾಜಿನ ಮೂಲಕ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಲು ಸಾಧ್ಯ ಎನ್ನುವುದು ನಮ್ಮ ಪ್ರಧಾನಿಗಳ ಗುರಿಯಾಗಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕು ಎಂದರು.

ನೀರಾವರಿಯಲ್ಲಿ ಉನ್ನತ ಗುಣಮಟ್ಟದ ದಕ್ಷತೆಯನ್ನು ತರಲು ಪ್ರಯತ್ನ ಮಾಡಬೇಕು. ಸಾಕಷ್ಟು ಜಲಮಾರ್ಗಗಳಲ್ಲಿ ನೀರು ದುರುಪಯೋಗವಾಗುತ್ತಿದೆ. ರಾಷ್ಟ್ರ ಮಟ್ಟದಲ್ಲಿ ನಮ್ಮ ಕಾಲುವೆಗಳ ಸಾಮರ್ಥ್ಯ ಶೇ 45 ರಷ್ಟಿದೆ. ಕಾಲುವೆಗಳಲ್ಲಿ ನೀರು ಹರಿಸುವ ಸಾಮರ್ಥ್ಯದಲ್ಲಿ ಶೇ. 55% ರಷ್ಟು ಅಂತರವಿದೆ. ಇವುಗಳನ್ನು ಸರಿಪಡಿಸಿದರೆ ಹೆಚ್ಚಿನ ನೀರು ಲಭ್ಯವಾಗಲಿದೆ ಎಂದರು.

ಜಲಾನಯನ ಯೋಜನೆಗಳು: ನೀರಿನ ಝರಿಗಳನ್ನು ಜೀವಂತವಾಗಿಡುವ ಜಲಾನಯನ ಯೋಜನೆಗಳು ಸೂಕ್ತವಾಗಿ ಯೋಜಿಸಲ್ಪಡದೆ, ನೀರಿನ ಹರಿವಿಗೆ ತಡೆಯೊಡ್ಡುತ್ತಿವೆ. ನೀರು ವ್ಯರ್ಥವಾಗಿ ಸಮುದ್ರ ಸೇರುತ್ತದೆ ಎನ್ನುತ್ತೇವೆ. ಆದರೆ ನಾವು ವಿಜ್ಞಾನವನ್ನು ಮರೆಯುತ್ತಿದ್ದೇವೆ. ಕನಿಷ್ಠ ಶೇ.30 ರಷ್ಟು ಸಿಹಿ ನೀರು ಸಮುದ್ರ ಸೇರಿದರೆ ಮಾತ್ರ ಶೇ 60 ರಷ್ಟು ಉಪ್ಪು ನೀರು ಆವಿಯಾಗಳು ಸಾಧ್ಯವಾಗಿ ಮಳೆಯಾಗುತ್ತದೆ. ಈ ಸರಳ ಸತ್ಯದ ಅರಿವು ಯೋಜನೆ ರೂಪಿಸುವ ಎಲ್ಲರಿಗೂ ಅರಿವಾಗಬೇಕು. ಪರಿಸರದ ಸವಾಲುಗಳನ್ನು ನಾವು ಎದುರಿಸಬೇಕಿದೆ. ನದಿಗಳು ಈಗ ಋತುಕಾಲಿಕವಾಗಿವೆ. ಸದಾ ಹರಿಯುವ ನದಿಗಳು ಈಗಿಲ್ಲದಂತಾಗಿದೆ. ನದಿಗಳು ಸಮುದ್ರವನ್ನೇ ಸೇರುತ್ತಿಲ್ಲ. ಮಧ್ಯದಲ್ಲಿಯೇ ಒಣಗುತ್ತಿವೆ. ಈ ರೀತಿಯ ಸವಾಲುಗಳಿವೆ ಎಂದರು.

ಇದನ್ನೂ ಓದಿ:ಮಣಿಪುರ ಚುನಾವಣೆ: ಮತದಾನದ ವೇಳೆ ಹಿಂಸಾಚಾರ, ಭದ್ರತಾ ಪಡೆ ಗುಂಡಿಗೆ ಓರ್ವ ಸಾವು

ಜಲಜೀವನ್ ಮಿಷನ್- ಕಾಲಮಿತಿಯಲ್ಲಿ ಗುರಿ ಮುಟ್ಟಲು ಶ್ರಮ: ಕರ್ನಾಟಕದಲ್ಲಿ ಜಲಜೀವನ್ ಮಿಷನ್ ಯೋಜನೆಯನ್ನು ಅನುಷ್ಠಾನ ಮಾಡಲು ಅವಿರತವಾಗಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. 97.91 ಲಕ್ಷ ಗ್ರಾಮೀಣ ಮನೆಗಳಿವೆ. ಪ್ರಾರಂಭದಲ್ಲಿ 25 ಲಕ್ಷ ಮನೆಗಳಿಗೆ ನಲ್ಲಿ ಅಳವಡಿಸಲು ಯೋಜಿಸಲಾಗಿತ್ತು. ಸಾಧನೆ 18 ಲಕ್ಷವಾಗಿದೆ. ಕೆಲವೇ ತಿಂಗಳುಗಳಲ್ಲಿ ಗುರಿ ಮುಟ್ಟಲಾಗುವುದು. ಜಲಜೀವನ್ ಮಿಷನ್ ಪ್ರಾರಂಭಗೊಂಡ ನಂತರ 22 ಲಕ್ಷ ಮನೆಗಳಿಗೆ ನೀರಿನ ಸಂಪರ್ಕ ಒದಗಿಸಲಾಗಿದೆ. 46.2 ಲಕ್ಷ ಒಟ್ಟು ವ್ಯಾಪ್ತಿ ಇದ್ದು, ಉಳಿದ 50 ಲಕ್ಷ ಮನೆಗಳಿಗೆ ಸಂಪರ್ಕ ಒಡಗಿಸಬೇಕಿದೆ. ಮುಂದಿನ ವರ್ಷ ಇದರ ಅನುಷ್ಠಾನಕ್ಕೆ ಆಯವ್ಯಯದಲ್ಲಿ ಅನುದಾನವನ್ನು ಮೀಸಲಿರಿಸಿದೆ.  ಅನುಷ್ಠಾನದಲ್ಲಿ ಕೆಲವು ತೊಡಕುಗಳಿದ್ದು, ಅವುಗಳನ್ನು ನಿವಾರಿಸಲಾಗಿದೆ. ಈ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನಕ್ಕೆ ತರಲು ತಾವು ಖುದ್ದು ಯೋಜನೆಯ ಪ್ರಗತಿಯ ಮೇಲ್ವಿಚಾರಣೆ ಮಾಡುತ್ತಿರುವುದಾಗಿ ತಿಳಿಸಿದರು.

ನಿಗದಿತ ಸಮಯದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ವೇಗವನ್ನು ಹೆಚ್ಚಿಸಿ 25 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು 2-3 ತಿಂಗಳೂಳಗೆ ಸಾಧಿಸಲಾಗುವುದು ಎಂದರು. ಮುಂದಿನ ವರ್ಷದ ಗುರಿಯನ್ನು ಶೇ 100 ರಷ್ಟು ಮುಟ್ಟಲು ಸಹ ಈಗಾಗಲೇ ಕಾರ್ಯತಂತ್ರ ರೂಪಿಸಲಾಗಿದೆ ಎಂದರು.

ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ನೀರು ಸರಬರಾಜಿಗೆ ಸೂಕ್ತ ವ್ಯವಸ್ಥೆಗಳಿಲ್ಲ. ಜಲ ನಿರ್ವಹಣೆಯನ್ನು ಪುನರ್ ಪರಿಶೀಲಿಸುವ ಅಗತ್ಯವಿದೆ. ನಮ್ಮ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಈ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿರುವ ಪ್ರಥಮ ಪ್ರಧಾನಿಗಳು. ಜಲಜೀವನ್ ಮಿಷನ್ ಯೋಜನೆಯಲ್ಲ. ಇದೊಂದು ಗುರಿ. ಈ ಗುರಿಯನ್ನು ಮುಟ್ಟಲು ಸಮರೋಪಾದಿಯಲ್ಲಿ ಕೆಲಸ ಮಾಡಬೇಕು. ಇತರೆ ಯೋಜನೆಗಳ ಅನುಷ್ಠಾನಕ್ಕೆ ತನ್ನದೇ ನಿಯಮಗಳಿವೆ.  ಮಿಷನ್ ಮಾದರಿಯಲ್ಲಿ ಕಟ್ಟಕಡೆಯ ವ್ಯಕ್ತಿಗೆ ನೀರು ತಲುಪಿಸುವ ಹೊಣೆ ನಮ್ಮ ಮೇಲಿದೆ ಎಂದರು.

ಟಾಪ್ ನ್ಯೂಸ್

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

Rangavaibhava

Golden Jubliee: ಕರುನಾಡ ರಂಗವೈಭವ ಮತ್ತೆ ಮರಳಿ ತರಬೇಕಿದೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

School-Chikki

Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!

HC-Mahadevappa

Incentive: ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ

Sathish-sail–court

Mining Case: ಶಿಕ್ಷೆ ರದ್ದು ಕೋರಿ ಶಾಸಕ ಸೈಲ್‌ ಸೇರಿ ನಾಲ್ವರು ಹೈಕೋರ್ಟ್‌ಗೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್‌ ಸೃಷ್ಟಿ!

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Canada-India: ಕಾನ್ಸುಲರ್‌ ಕ್ಯಾಂಪ್‌ ರದ್ದು; ಕೆನಡಾಗೆ ಭಾರತ ತಿರುಗೇಟು

Price-Hike

Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್‌ ದರ ಏರಿಕೆ ಶಾಕ್‌?

JPC-Pal–BJP

Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್‌ ರಾಜ್ಯ ಭೇಟಿ: ಕಾಂಗ್ರೆಸ್‌ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.