ರಾಜ್ಯದಲ್ಲಿ ನಾಳೆ ನೀಟ್ ಪರೀಕ್ಷೆ
Team Udayavani, May 6, 2017, 11:54 AM IST
ಬೆಂಗಳೂರು: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ (ಸಿಬಿಎಸ್‌ಇ)ವತಿಯಿಂದ ವೈದ್ಯಕೀಯ ಸೀಟುಗಳ ಪ್ರವೇಶಕ್ಕೆ ಮೇ 7ರಂದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(ನೀಟ್) ನಡೆಯಲಿದೆ.
ಆನ್‌ಲೈನ್‌ನಲ್ಲಿ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವ ಸಂದರ್ಭದಲ್ಲಿ ಪ್ರವೇಶ ಪತ್ರದಲ್ಲಿ ಮುದ್ರಿತವಾಗಿರುವ ಫೋಟೋ ಹಾಗೂ ಸಹಿ ಸ್ಪಷ್ಟವಾಗಿ ಕಾಣುತ್ತಿಲ್ಲ ಎಂಬ ಬಗ್ಗೆ ಹಲವು ದೂರು ಸಿಬಿಎಸ್‌ಇಗೆ ಬಂದಿದೆ. ಈ ಹಿನ್ನೆಲೆಯಲ್ಲಿ, ನೀಟ್ ಬರೆಯುವ ಅಭ್ಯರ್ಥಿಗಳು ಪ್ರವೇಶ ಪತ್ರದ ಜತೆಗೆ ಆಧಾರ್ ಕಾರ್ಡ್ ಅಥವಾ ಫೋಟೋ ಹೊಂದಿರುವ ಸರ್ಕಾರದ ಯಾವುದೇ ಗುರುತಿನ ಚೀಟಿಯನ್ನು ತೆಗೆದುಕೊಂಡು ಹೋಗುವಂತೆ ಸಿಬಿಎಸ್‌ಇ ಸುತ್ತೋಲೆಯಲ್ಲಿ ತಿಳಿಸಿದೆ.
ದೇಶಾದ್ಯಂತ 104 ನಗರಗಳ ಪರೀಕ್ಷಾ ಕೇಂದ್ರದಲ್ಲಿ 11,35,104 ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದಾರೆ. ನೀಟ್‌ನಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ರಾಷ್ಟ್ರಮಟ್ಟದಲ್ಲಿ ವೈದ್ಯಕೀಯ ಸೀಟು ಪಡೆಯುತ್ತಾರೆ. ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲಿದ್ದು, ದೇಶದ ಪ್ರತಿಷ್ಠಿತ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆಯಲು ಅನುಕೂಲ ಆಗಲಿದೆ. ರಾಜ್ಯದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗುವ ಸಂಬಂಧ ಕೆಲವು ತಿಂಗಳ ಹಿಂದೆಯೇ ಅನೇಕ ರೀತಿಯ ಗೊಂದಲ ನಿರ್ಮಾಣವಾಗಿತ್ತು. ರಾಜ್ಯ ಸರ್ಕಾರದ ಮಟ್ಟದಲ್ಲೂ ತೀವ್ರ ಚರ್ಚೆಗೆ ಕಾರಣವಾಗಿತ್ತು.
ದೇಶಾದ್ಯಂತ ಏಕರೂಪ ಪರೀಕ್ಷಾ ವಿಧಾನ ಅಳವಡಿಸಿರುವುದರಿಂದ ಕರ್ನಾಟಕದ ವಿದ್ಯಾರ್ಥಿಗಳಿಗೆ ಇದು ಅನಿವಾರ್ಯವಾಗಿದೆ.
ವಿದ್ಯಾರ್ಥಿಗಳ ಗಮನಕ್ಕೆ: ಮೇ 7ರ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1ರ ತನಕ ನೀಟ್ ನಡೆಯಲಿದ್ದು, ಕ್ಯಾಲ್ಕುಲೇಟರ್, ಮೊಬೈಲ್, ಈಯರ್‌ಫೋನ್, ಮೈಕ್ರೋ ಫೋನ್ ಇತ್ಯಾದಿ ಯಾವುದೇ ಪರಿಕರವನ್ನು ಪರೀಕ್ಷಾ ಕೇಂದ್ರದ ಒಳಗೆ ಕೊಂಡೊಯ್ಯುವಂತಿಲ್ಲ. ಪರೀಕ್ಷಾ ಸಮಯಕ್ಕೂ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರ ತಲುಪಿರಬೇಕು. ಹೇರ್ ಪಿನ್, ಹೇರ್ ಬ್ಯಾಂಡ್ ಧರಿಸುವಂತಿಲ್ಲ, ಬ್ಲೂ ಅಥವಾ ಬ್ಲಾಕ್ ಬಾಲ್ ಪೆನ್ ಬಳಸುವಂತೆ ಸಿಬಿಎಸ್‌ಇ ಸೂಚನೆ ನೀಡಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.