Nejar Case: ಒಂದೇ ಕುಟುಂಬದ ನಾಲ್ವರನ್ನು ಕೊಂದ ಹಂತಕ ಕೊನೆಗೂ ಅರೆಸ್ಟ್
Team Udayavani, Nov 14, 2023, 6:50 PM IST
ಬೆಳಗಾವಿ/ಉಡುಪಿ: ಉಡುಪಿಯ ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಉಡುಪಿ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಉಡುಪಿಯ ಡಿವೈಎಸ್ಪಿ ನೇತೃತ್ವದ ತಂಡದಿಂದ ಬೆಳಗಾವಿಯ ಕುಡಚಿಯಲ್ಲಿ ಆರೋಪಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಬಂಧಿಸಿದ್ದಾರೆ. ಈತ ಮಂಗಳೂರು ಏರ್ ಪೋರ್ಟ್ ಸೆಕ್ಯೂರಿಟಿಯಲ್ಲಿ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದವನಾಗಿದ್ದಾನೆ ಎನ್ನಲಾಗಿದೆ.
ಆರೋಪಿ ಬೆಳಗಾವಿಯಲ್ಲಿರುವ ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಇರುವ ಬಗ್ಗೆ ಉಡುಪಿಯ ಡಿವೈಎಸ್ಪಿ ನೇತೃತ್ವದ ತಂಡವು ಬೆಳಗಾವಿ ಪೊಲೀಸರಿಗೆ ಮಾಹಿತಿಯನ್ನು ನೀಡಲಾಗಿತ್ತು. ತಕ್ಷಣವೇ ಬೆಳಗಾವಿ ಪೊಲೀಸರು ಮಫ್ತಿಯಲ್ಲಿ ಮನೆ ಸುತ್ತುವರಿದಿದ್ದರು. ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿ ಅರುಣ್ ಮನೆಯೊಂದರಲ್ಲಿ ಇರುವುದು ಖಚಿತವಾಗಿತ್ತು.ಇತ್ತ ಉಡುಪಿಯಿಂದ ಹೊರಟಿದ್ದ ತಂಡವೂ ಕುಡಚಿ ತಲುಪುತ್ತಿದ್ದಂತೆ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ. ಇದೀಗ ಪೊಲೀಸರು ಉಡುಪಿಗೆ ಕರೆದೊಯ್ದಿದ್ದಾರೆ.
ನವೆಂಬರ್ 12ರಂದು ನೇಜಾರಿನ ತೃಪ್ತಿ ಲೇಔಟ್ ನಲ್ಲಿರುವ ಮನೆಗೆ ಬಂದು ತಾಯಿ ಮೂವರು ಮಕ್ಕಳನ್ನು ಕೊಲೆ ಮಾಡಿದ್ದ.
ಬುಧವಾರ ಈ ಪ್ರಕರಣದ ಬಗ್ಗೆ ಪೊಲೀಸರು ಸಂಪೂರ್ಣ ಮಾಹಿತಿ ನೀಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.