ನವೆಂಬರ್‌ನಿಂದ ಎನ್‌ಇಪಿ ಜಾರಿ
Team Udayavani, Aug 26, 2022, 6:55 AM IST
ಬೆಂಗಳೂರು: ಮುಂದಿನ ನವೆಂಬರ್‌ನಲ್ಲಿ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಅಧಿಕೃತವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಕ್ಕೆ ರಾಜ್ಯ ಸರಕಾರ ನಿರ್ಧರಿಸಿದೆ.
ಈ ಸಂಬಂಧ ಗುರುವಾರ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿ, ಶಾಲಾ ಶಿಕ್ಷಣದ ಮೊದಲ ಹಂತವಾದ 3ರಿಂದ 5 ವರ್ಷದ ಮಕ್ಕಳಿಗೆ ಬಾಲ್ಯ ಪೂರ್ವ ಆರೈಕೆ ಮತ್ತು ಶಿಕ್ಷಣವನ್ನು (ಇಸಿಸಿಇ) ರಾಷ್ಟ್ರೀಯ ಶಿಕ್ಷಣ ನೀತಿ-2020 ಅಡಿ ಜಾರಿಗೊಳಿಸಲು ಸಿದ್ಧತೆ ನಡೆದಿದೆ. 2022-23ನೇ ಸಾಲಿನಿಂದ ಎನ್‌ಇಪಿ ಜಾರಿಗೊಳಿಸಲು ರಾಜ್ಯದ 20 ಸಾವಿರ ಅಂಗನವಾಡಿಗಳಲ್ಲಿ ತರಬೇತಿ ನೀಡಲಾಗುತ್ತಿದೆ ಎಂದರು.
ಎನ್‌ಇಪಿ ಅನ್ನು ಅನುಷ್ಠಾನ ಮಾಡುತ್ತಿರುವ ಮೊದಲ ರಾಜ್ಯ ನಮ್ಮದು. ಈ ಸಂಬಂಧ 26 ಪೊಸಿಷನ್ ಪೇಪರ್ ಅನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ. ಬೇರೆ ರಾಜ್ಯಗಳೂ ಸಲ್ಲಿಸಿದ್ದು, ಎಲ್ಲವನ್ನೂ ಪರಿಗಣಿಸಿ ಕೇಂದ್ರ ಸರಕಾರವು ಅಕ್ಟೋಬರ್‌ನಲ್ಲಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಬಿಡುಗಡೆ ಮಾಡಲಿದೆ. ಇದನ್ನು ಆಧರಿಸಿ ಕರ್ನಾಟಕ ಪಠ್ಯಕ್ರಮ ಚೌಕಟ್ಟು (ಕೆಸಿಎಫ್) ರೂಪಿಸಲು 6 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದರು.
ಸದ್ಯ 3 ವರ್ಷದ ಮಕ್ಕಳಿಗೆ ಒದಗಿಸಲಾಗುತ್ತಿರುವ “ಚಿಲಿಪಿಲಿ ಮತ್ತು ಚಿಲಿಪಿಲಿ ಪ್ಲಸ್’ ಪಠ್ಯಕ್ರಮ ರಾಷ್ಟ್ರೀಯ ಶಿಕ್ಷಣ ನೀತಿ ಅನುಗುಣವಾಗಿದೆ. ಮತ್ತೂಮ್ಮೆ ನವೆಂಬರ್‌ನಲ್ಲಿ ಮೊದಲ ಹಂತದಲ್ಲಿ 20 ಸಾವಿರ ಅಂಗನವಾಡಿಗಳಲ್ಲಿ ಎನ್‌ಇಪಿ ಜಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.