ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಒಪ್ಪಿಗೆ- ಡಾ.ಕೆ.ಸುಧಾಕರ್
Team Udayavani, Feb 18, 2022, 6:32 AM IST
ಬೆಂಗಳೂರು: ಚಿತ್ರದುರ್ಗದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ನೂತನ ಮೆಡಿಕಲ್ ಕಾಲೇಜು ಆರಂಭಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ.ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಈ ಮಹತ್ವದ ಹೆಜ್ಜೆಯಿಂದಾಗಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ಕಾರ್ಯಕ್ಕೆ ಮತ್ತಷ್ಟು ಆದ್ಯತೆ ದೊರೆತಿದೆ ಎಂದು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಈ ಶೈಕ್ಷಣಿಕ ವರ್‌ಷದಿಂದಲೇ 100 ಎಂಬಿಬಿಎಸ್ ಸೀಟುಗಳ ಕಾಲೇಜು ಆರಂಭವಾಗಲಿದ್ದು, ನೂತನ ಕಟ್ಟಡ ನಿರ್ಮಾಣ ಭರದಿಂದ ಸಾಗಿದೆ. ಈ ನಡುವೆಯೇ ಚಿತ್ರದುರ್ಗದಲ್ಲಿ 150 ಎಂಬಿಬಿಎಸ್ ಸೀಟುಗಳನ್ನು ಹೊಂದಲಿರುವ ‘ಚಿತ್ರದುರ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ’ ನಿರ್ಮಾಣಕ್ಕೆ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಿವಿಲ್ ಕಾಮಗಾರಿ ಸೇರಿ ಒಟ್ಟು 500 ಕೋಟಿ ರೂ.ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.
ಜನಸಂಖ್ಯೆಗೆ ಅನುಗುಣವಾಗಿ ಹೊಸ ವೈದ್ಯಕೀಯ ಕಾಲೇಜುಗಳ ಸ್ಥಾಪನೆಗೆ ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿರುವ 17 ಸರ್ಕಾರಿ ವೈದ್ಯಕೀಯ ಕಾಲೇಜುಗಳ ಜೊತೆ ಹೊಸದಾಗಿ 4 ಸಂಸ್ಥೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಚಿಕ್ಕಬಳ್ಳಾಪುರ ವೈದ್ಯಕೀಯ ವಿಜ್ಞಾನ ಸಂಸ್ಥಗೆ 100 ಎಂಬಿಬಿಎಸ್ ಸೀಟುಗಳ ಪ್ರವೇಶ ಮಿತಿಯೊಂದಿಗೆ 2022-23 ನೇ ಸಾಲಿಗೆ ಲೆಟರ್ ಆಫ್ ಇಂಟೆಂಟ್ ನೀಡಲಾಗಿದೆ. ಇದರ ಜೊತೆಗೆ ಈಗ ಚಿತ್ರದುರ್ಗದಲ್ಲೂ ಕಾಲೇಜು ಕಟ್ಟಡದ ನಿರ್ಮಾಣಕ್ಕೆ ಅನುಮೋದನೆ ದೊರೆತಿದೆ. ಈ ಮೂಲಕ ರಾಜ್ಯದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ವೈದ್ಯರಾಗುವ ಕನಸು ನನಸಾಗಲಿದೆ. ಅಷ್ಟೇ ಅಲ್ಲದೆ, ವೈದ್ಯಕೀಯ ಕಾಲೇಜುಗಳಿಗೆ ಹೊಂದಿಕೊಂಡ ಆಸ್ಪತ್ರೆಗಳಲ್ಲಿ ಬಡವರಿಗೆ ಉನ್ನತ ಗುಣಮಟ್ಟದ ವೈದ್ಯಕೀಯ ಸೇವೆ ಸಿಗಲಿದೆ ಎಂದು ಹೇಳಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳ ಪ್ರಕಾರ ಪ್ರತಿ 1,000 ಜನಸಂಖ್ಯೆಗೆ ಒಬ್ಬ ವೈದ್ಯರು ಇರಬೇಕು. ಆದರೆ ಕರ್ನಾಕದಲ್ಲಿ 1,800 ಜನಸಂಖ್ಯೆಗೆ ಒಬ್ಬ ವೈದ್ಯರ ಲಭ್ಯತೆ ಇದೆ. ಈ ಅಸಮತೋಲನ ಸರಿಪಡಿಸಲು ಹಾಗೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆಯಲು ಸರ್ಕಾರ ಕ್ರಮಗಳನ್ನು ಕೈಗೊಂಡಿದೆ. ಇದೇ ಪ್ರಯತ್ನದ ಭಾಗವಾಗಿ ಚಿತ್ರದುರ್ಗದಲ್ಲಿ ಹೊಸ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು ಎಂದು ು ಹೇಳಿದ್ದಾರೆ.
ಚಿತ್ರದುರ್ಗದ ಮೆಡಿಕಲ್ ಕಾಲೇಜನ್ನು 2023-24 ನೇ ಸಾಲಿನಿಂದ ಆರಂಭಿಸಲು ಅಗತ್ಯ ಪ್ರಕ್ರಿಯೆಗಳನ್ನು ನಡೆಸಬೇಕೆಂದು ರಾಜ್ಯ ಸರ್ಕಾರ ಸೂಚಿಸಿದೆ. ಇದಕ್ಕೆ ಪೂರಕವಾಗಿ ಸಿದ್ಧತೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!
MUST WATCH
ಹೊಸ ಸೇರ್ಪಡೆ
Team India: ವಿರಾಟ್ ಕೊಹ್ಲಿ ದಾಖಲೆ ಮುರಿದ ತಿಲಕ್ ವರ್ಮಾ
Master Rohit: ರಸ್ತೆ ಅಪಘಾತ ʼಕಾಟೇರʼ ಬಾಲನಟ ರೋಹಿತ್‌ಗೆ ಗಂಭೀರ ಗಾಯ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Re Release: ದರ್ಶನ್ ಮತ್ತೊಂದು ಚಿತ್ರ ಮರು ಬಿಡುಗಡೆ: ರೀರಿಲೀಸ್‌ನತ್ತ ಸಂಗೊಳ್ಳಿ ರಾಯಣ್ಣ
BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್: ಆಸೀಸ್ ಸರಣಿಗೆ ತಂಡ ಸೇರಲಿದ್ದಾರೆ ಶಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.