ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿ ಲಾಂಛನ, ಜಾಲತಾಣ ಉದ್ಘಾಟನೆ
Team Udayavani, Jun 10, 2020, 11:57 AM IST
ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನೂತನ ಕಚೇರಿಯ ಲಾಂಛನ ಮತ್ತು ಜಾಲತಾಣವನ್ನು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯಾವುದೇ ಒಂದು ಸಮುದಾಯವನ್ನು ಸಾರಾಸಗಟಾಗಿ ಮುಂದುವರೆದ ಸಮುದಾಯ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲ ಸಮುದಾಯಗಳಲ್ಲೂ ಮುಂದುವರೆದವರು ಮತ್ತು ಹಿಂದುಳಿದವರು ಇರುತ್ತಾರೆ. ಅದೇ ರೀತಿ ಪಾರಂಪರಿಕವಾಗಿ ಬ್ರಾಹ್ಮಣ ಸಮುದಾಯವನ್ನು ಮುಂದುವರೆದ ಸಮುದಾಯ ಎಂದು ಗುರುತಿಸಿದ್ದರೂ, ಆರ್ಥಿಕವಾಗಿ ಅಶಕ್ತರಾಗಿರುವ ಹಲವಾರು ಮಂದಿ ಈ ಸಮುದಾಯದಲ್ಲಿದ್ದಾರೆ. ಅಂತಹವರ ಭ್ಯುದಯಕ್ಕಾಗಿ ಬ್ರಾಹ್ಮಣರ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಯಿತು ಎಂದರು.
ದೇಶದ ಇತಿಹಾಸದಲ್ಲಿ ಬ್ರಾಹ್ಮಣ ಸಮುದಾಯದವರ ಕೊಡುಗೆ ಉಲ್ಲೇಖಾರ್ಹವಾದುದು. ವಿಶೇಷವಾಗಿ ಶಿಕ್ಷಣ ಹಾಗೂ ಸಾಂಸ್ಕೃತಿಕ ಪರಂಪರೆಯ ರಕ್ಷಣೆಯಲ್ಲಿ ಈ ಸಮುದಾಯದ ಸಾಧನೆ ಅದ್ವಿತೀಯವಾದುದು. ಶಂಕರಾಚಾರ್ಯರು, ರಾಮಾನುಜಾಚಾರ್ಯರು, ಮಧ್ವಾಚಾರ್ಯರಂತಹ ಗುರುಶ್ರೇಷ್ಠರ ತತ್ವ ಹಾಗೂ ಆದರ್ಶಗಳ ಹಾದಿಯಲ್ಲಿ ನಡೆದು ಸಮಾಜ ಒಳಿತನ್ನು ಕಂಡಿದೆ. ವೇದೋಪನಿಷತ್ತುಗಳನ್ನು ಅಭ್ಯಸಿಸುವ ಮೂಲಕ ಆಧ್ಯಾತ್ಮಿಕತೆಯನ್ನು ಮನುಕುಲಕ್ಕೆ ವಿಪ್ರ ಸಮಾಜ ಭೋದಿಸುತ್ತಾ ಬಂದಿದೆ ಎಂದರು.
ಬ್ರಾಹ್ಮಣ ಸಮುದಾಯವು ಸಾವಿರಾರು ವರ್ಷಗಳ ಇತಿಹಾಸ ಹಾಗೂ ಪರಂಪರೆಯನ್ನು ಹೊಂದಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಅಪೂರ್ವ ಕೊಡುಗೆ ನೀಡಿದೆ. ಬ್ರಾಹ್ಮಣ ಸಮುದಾಯ ಹಣ, ಆಸ್ತಿ, ಸಂಪತ್ತಿಗಿಂತ ಶಿಕ್ಷಣಕ್ಕೆ ಪ್ರಾಮುಖ್ಯತೆ ನೀಡುವ ಮೂಲಕ ಸಂಸ್ಕಾರಯುತ ಸಮಾಜದ ನಿರ್ಮಾಣಕ್ಕೆ ಶ್ರಮಿಸುತ್ತಿದೆ. ಅಶಕ್ತರಾದ ಬ್ರಾಹ್ಮಣರು ಆರ್ಥಿಕವಾಗಿ ಸಶಕ್ತರಾಗಲು ಮಂಡಳಿಯ ವತಿಯಿಂದ ಅನೇಕ ವಿಭಿನ್ನ ಯೋಜನೆಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಸಿಎಂ ಬಿಎಸ್ ವೈ ಹೇಳಿದರು.
ಈ ಸಂದರ್ಭದಲ್ಲಿ ಮಂಡಳಿಯ ಅಧ್ಯಕ್ಷ ಸಚ್ಚಿದಾನಂದಮೂರ್ತಿ, ಸಚಿವರಾದ ಆರ್ ಅಶೋಕ್, ರಮೇಶ್ ಜಾರಕಿಹೊಳಿ, ಅಶ್ವಥ್ ನಾರಾಯಣ್, ಸಂಸದ ತೇಜಸ್ವಿ ಸೂರ್ಯ, ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಶಂಕರ್ ಗೌಡ ಪಾಟೀಲ್, ಶಾಸಕರಾದ ರಾಜು ಗೌಡ, ರಾಮದಾಸ್, ರವಿಸುಬ್ರಮಣ್ಯ, ಅರ್.ವಿ ದೇಶಪಾಂಡೆ ಮುಖಂಡರಾದ ಎಂಟಿಬಿ ನಾಗರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Snuff: ನಶ್ಯ ತಂದಿಟ್ಟ ಸಮಸ್ಯೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.