ಮಹಾಮಾರಿ ಕೋವಿಡ್ ಕಟ್ಟಿ ಹಾಕಲು ರಾಜ್ಯಾದ್ಯಂತ ನಾಳೆಯಿಂದಲೇ ಟಫ್ ರೂಲ್ಸ್ ಜಾರಿ
Team Udayavani, Jan 11, 2022, 5:56 PM IST
ಬೆಂಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರರ ಸಿಎಂ ಜತೆಗಿನ ಸಭೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಸಭೆಯ ಬಳಿಕ ಮಾತಾನಾಡಿದ ಅವರು, ಮಾಸ್ಕ್ ಧರಿಸುವುದು, ದೈಹಿಕ ಅಂತರವನ್ನು ಪಾಲಿಸುವುದರ ಜೊತೆಗೆ, ಜಾತ್ರೆ, ಸಮಾವೇಶ, ಪ್ರತಿಭಟನೆಯಲ್ಲಿ ಜನಸಂದಣಿ ಸೇರುವಂತಿಲ್ಲ ಎಂದು ಹೇಳಿದ್ದಾರೆ.
ಶಾಲೆ ನಡೆಸುವುದು ಅಥವಾ ಬಂದ್ ಮಾಡುವ ಬಗ್ಗೆ ಆಯಾ ಡಿಸಿಗಳಿಗೆ ಅಧಿಕಾರ ನೀಡಿದ್ದೇವೆ. ವೈಕುಂಠ ಏಕಾದಶಿಯೆಂದು ದೇವಸ್ಥಾನದಲ್ಲಿ ಸಂಪ್ರದಾಯದಂತೆ ಮಾತ್ರ ಪೂಜೆ ನಡೆಸಬೇಕು. ಯಾವುದೇ ಬಗೆಯಲ್ಲಿ ಜನ ಸೇರಬಾರದು. ಮಕ್ಕಳ ವಾರ್ಡ್ ಮತ್ತು ಬೆಡ್ ಗಳನ್ನು ಮೀಸಲಿಡಲು ಸೂಚಿಸಲಾಗಿದೆ ಎಂದವರು ಹೇಳಿದರು.
ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಕೋವಿಡ್ ಪರೀಕ್ಷೆ ಹೆಚ್ಚಿಸಬೇಕೆಂದು ಈಗಾಗಲೇ ಸೂಚಿಸಲಾಗಿದೆ. ನಾಳೆಯಿಂದ ಮಾರುಕಟ್ಟೆಗಳನ್ನು ವೀಕೆಂದ್ರೀಕರಣ ಮಾಡಲಾಗುವುದು. ವೀಕೆಂಡ್ ಕರ್ಫ್ಯೂ ಮುಂದುವರೆಸುವ ಬಗ್ಗೆ ಸದ್ಯ ನಿರ್ಧಾರ ಮಾಡಿಲ್ಲ, ಪ್ರಧಾನಿ ಸಭೆ ಬಳಿಕವೇ ಸೂಕ್ತ ನಿರ್ಣಯವನ್ನು ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ರಾಜ್ಯದ ಕೋವಿಡ್ ಸ್ಥಿತಿ ಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಭೆಗಳ ಮುಖ್ಯಾಂಶಗಳು:
ಕೋವಿಡ್ ಸೋಂಕಿತ ಮಕ್ಕಳ ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳನ್ನು ಸಾಕಷ್ಟು ಪ್ರಮಾಣದಲ್ಲಿ ದಾಸ್ತಾನು ಮಾಡಿಕೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಲು ನಿರ್ಧರಿಸಲಾಯಿತು. ಕೋವಿಡ್ ಲಸಿಕೆಯ ಎರಡೂ ಡೋಸ್ ಗಳನ್ನು ಪಡೆದು 9 ತಿಂಗಳು ಪೂರೈಸಿದ ಮುಂಚೂಣಿಯ ಕಾರ್ಯಕರ್ತರಿಗೆ 3ನೇ ಡೋಸ್ ಅನ್ನು ಆದ್ಯತೆಯ ಮೇರೆಗೆ ನೀಡಲು ಸೂಚಿಸಿದರು.
ಮೂರನೇ ಅಲೆಯಲ್ಲಿ ಹೋಮ್ ಐಸೋಲೇಷನ್ ನಲ್ಲಿ ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರ ಆರೋಗ್ಯ ಸ್ಥಿತಿಯ ಮೇಲ್ವಿಚಾರಣೆಯನ್ನು ನಿಯಮಿತವಾಗಿ ಮಾಡುವಂತೆ ಹಾಗೂ ಸೂಕ್ತ ಔಷಧಿಗಳ ಕಿಟ್ ಅನ್ನು ಒದಗಿಸುವಂತೆ ಸೂಚಿಸಿದರು.
ಪರೀಕ್ಷಾ ವರದಿ ಬಂದ ಕೂಡಲೇ ಸೋಂಕಿತರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸಿ, ಆಸ್ಪತ್ರೆಗೆ ದಾಖಲಿಸುವ ಅಗತ್ಯವಿದೆಯೇ ಇಲ್ಲವೇ ಎಂದು ನಿರ್ಧರಿಸುವ ಟ್ರಯಾಜಿಂಗ್ ವ್ಯವಸ್ಥೆಯನ್ನು ಬಲಪಡಿಸುವಂತೆ ಸೂಚಿಸಿದರು.
ಹೋಮ್ ಐಸೊಲೇಷನ್ ಮತ್ತು ಟ್ರಯಾಜಿಂಗ್ ಪ್ರಕ್ರಿಯೆಯಲ್ಲಿ ಹೌಸ್ ಸರ್ಜನ್ ವೈದ್ಯರು ಹಾಗೂ ಅಂತಿಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳನ್ನು ಬಳಸಿಕೊಳ್ಳಲು ನಿರ್ಧರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.