ಹೊಸ ತಾಲೂಕು ರಚನೆ: ಸರ್ಕಾರಕ್ಕೆ ನೋಟಿಸ್
Team Udayavani, Jul 18, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ ಘೋಷಣೆ ಮಾಡಲಾದ 50 ತಾಲೂಕುಗಳು ಎರಡು ವರ್ಷ ಕಳೆದರೂ ಇನ್ನೂ ಅಸ್ತಿತ್ವಕ್ಕೆ ಬಂದಿಲ್ಲ ಹಾಗೂ ಬೇಕಾದ ಅಗತ್ಯ ಮೂಲಸೌಕರ್ಯ ಒದಗಿಸಿಲ್ಲ, ಕಚೇರಿಗಳನ್ನು ನಿರ್ಮಿಸಿಲ್ಲ ಎಂದು ದೂರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತಂತೆ ಬೀದರ್ ಜಿಲ್ಲೆ ಔರಾದ್ ತಾಲೂಕಿನ ನಿವಾಸಿ ಗುರುನಾಥ ವದ್ದೆ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಹಾಗೂ ನ್ಯಾ.ಎಚ್.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿ ವಿಚಾರಣೆ ಮುಂದೂಡಿತು.
2017-18ನೇ ಸಾಲಿನ ಬಜೆಟ್ನಲ್ಲಿ 50 ಹೊಸ ತಾಲೂಕುಗಳ ರಚನೆ ಬಗ್ಗೆ ಘೋಷಣೆ ಮಾಡಲಾಗಿತ್ತು. ಅದರಂತೆ, ಕೆಲವು ನಗರ ಹಾಗೂ ಪಟ್ಟಣ ಪ್ರದೇಶಗಳನ್ನು ಹೊಸ ತಾಲೂಕುಗಳೆಂದು ಗುರುತಿಸಿ ಅಧಿಸೂಚನೆ ಹೊರಡಿಸಲಾಗಿತ್ತು.
ಹೊಸ ತಾಲೂಕುಗಳಿಗೆ ಮಿನಿ ವಿಧಾನಸೌಧ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗುವುದು ಎಂದು 2018ರ ಸೆ.20ರಂದು ಹೇಳಿಕೆ ನೀಡಿದ್ದರು. ಆದರೆ, ಈವರೆಗೆ ಅಂತಹ ಯಾವುದೇ ವ್ಯವಸ್ಥೆ ಆಗಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.