ರಾತ್ರಿ ಕರ್ಫ್ಯೂ ಕಟ್ಟುನಿಟ್ಟು: ಬೊಮ್ಮಾಯಿ
Team Udayavani, Jul 2, 2020, 7:34 AM IST
ಬೆಂಗಳೂರು: ಕೋವಿಡ್ 19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ ಹಾಗೂ ಜನ, ವಾಹನ ಸಂಚಾರ ಕಟ್ಟುನಿಟ್ಟಾಗಿ ನಿಯಂತ್ರಿಸಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಂಟೈನ್ಮೆಂಟ್ ವಲಯ, ಸೀಲ್‌ಡೌನ್ ಪ್ರದೇಶಗಳಲ್ಲಿ ಕಟ್ಟು ನಿಟ್ಟಿನ ಲಾಕ್‌ಡೌನ್ ಜಾರಿ ಹೊಣೆಗಾರಿಕೆ ಆಯಾ ಡಿಸಿಪಿಗಳಿಗೆ ನೀಡಲಾಗುವುದು.
ವಿದೇಶದಿಂದ ಬಂದವರನ್ನು ಕ್ವಾರಂಟೈನ್ ಮಾಡುವ ಮಾದರಿಯಲ್ಲೇ ಆ ಪ್ರದೇಶಗಳಲ್ಲಿ ನೋಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ನೇತೃತ್ವದಲ್ಲಿ ಸಭೆಯ ನಂತರ ಮಾತನಾಡಿ, ಬೆಂಗಳೂರು ನಗರದಲ್ಲಿ ಬಿಬಿಎಂಪಿ, ಪೊಲೀಸ್ ಇಲಾಖೆ, ಗೃಹರಕ್ಷಕ ದಳ, ಸ್ವಯಂ ಸೇವಕರು ಸಮನ್ವಯತೆಯಿಂದ ಕೆಲಸ ಮಾಡುವ ಸಂಬಂಧ ರೂಪುರೇಷೆ ಸಿದ್ಧಪಡಿಸಲಾಗಿದೆ ಎಂದರು.
ಕಂಟೈನ್‌ಮೆಂಟ್ ವಲಯಗಳು, ಸೀಲ್‌ಡೌನ್ ಪ್ರದೇಶಗಳಲ್ಲಿ ಬಿಬಿಎಂಪಿ, ಪೊಲೀಸ್ ಇಲಾಖೆ ಸಿಬ್ಬಂದಿ ಜತೆಗೆ ಗೃಹ ರಕ್ಷಕರನ್ನೂ ತೆಗೆದುಕೊಳ್ಳುತ್ತೇವೆ. ಮುಂಬರುವ ದಿನಗಳಲ್ಲಿ ಹೋಂ ಕ್ವಾರಂಟೈನ್ ಮಹತ್ವ ಪಡೆದುಕೊಳ್ಳುವುದರಿಂದ ಹೋಂ ಕ್ವಾರಂಟೈನ್ ವ್ಯವಸ್ಥೆಯಲ್ಲಿ ಸಮುದಾ ಯ ವನ್ನು ಭಾಗಿಯಾಗಿಸಬೇಕು. ವಾರ್ಡ್‌ವಾರು ಬಿಬಿಎಂಪಿ, ಪೊಲೀಸ್, ಗೃಹರಕ್ಷಕ ದಳ, ಸ್ವಯಂ ಸೇವಕರು ಸಮನ್ವಯತೆ ಯಿಂದ ಕೆಲಸ ಮಾಡಬೇಕು.
ಹೋಂ ಕ್ವಾರಂಟೈನ್ ಆಗಿರುವವರಿಗೆ ಆ್ಯಪ್ ಜೋಡಣೆಯಾಗಿರುತ್ತದೆ. ಅದರ ಮಾಹಿತಿಯೂ ಪೊಲೀಸರಿಗೆ ಇರಬೇಕೆಂದು ಹೇಳಿದರು. ರಾತ್ರಿ ಕರ್ಫ್ಯೂ ವೇಳೆ ವಾಹನ ಸಂಚಾರ ನಿಲ್ಲಿಸಬೇಕು. ಈ ಬಗ್ಗೆ ಜನರಲ್ಲೂ ಜಾಗೃತಿ ಮೂಡಿಸಲಾಗುವುದು. 600 ಆಟೋ ರಿಕ್ಷಾದಲ್ಲಿ ರಾತ್ರಿ ಕರ್ಫ್ಯೂ ಜಾರಿ, ಮಾಸ್ಕ್ ಧರಿಸದಿದ್ದರೆ ದಂಡ, ಸೀಲ್‌ಡೌನ್ ಪ್ರದೇಶಗಳಲ್ಲಿ ಹೇಗೆ ನಡೆದುಕೊಳ್ಳ ಬೇಕೆಂಬ ಬಗ್ಗೆ ತಿಳಿಸಲಾಗುವುದು ಎಂದರು. ಬೆಂಗಳೂರಿನಲ್ಲಿ ಲಾಕ್‌ಡೌನ್ ಅಗತ್ಯವೇ ಎಂಬ ಪ್ರಶ್ನೆಗೆ ಸೀಲ್‌ಡೌನ್ ಎಂದರೆ ಲಾಕ್‌ಡೌನ್ ಅಲ್ಲ ಎಂದು ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.