Nikhil Kumaraswamy: “ಅಧಿಕಾರ ದುರುಪಯೋಗ ಬಿಟ್ಟು ನ್ಯಾಯಯುತ ಆಡಳಿತ ನಡೆಸಲಿ’: ನಿಖಿಲ್
Team Udayavani, May 23, 2024, 10:45 PM IST
ಬೆಂಗಳೂರು: ರಾಜ್ಯ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಬಿಟ್ಟು ನ್ಯಾಯಯುತವಾಗಿ ಆಡಳಿತ ನಡೆಸಲಿ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದರು.
ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರ ಕುಟುಂಬವನ್ನು ಈ ಸರಕಾರ ಗುರಿ ಮಾಡುತ್ತಿದೆ ಎಂದು ನಾವು ಹೇಳುತ್ತಿಲ್ಲ. ಪ್ರತಿ ಹಳ್ಳಿಯಲ್ಲೂ ಜನರೇ ಮಾತನಾಡುತ್ತಿದ್ದಾರೆ ಎಂದರು.
ಎಚ್.ಡಿ.ರೇವಣ್ಣ ಅವರನ್ನು ಜೈಲಿಗೆ ಕಳುಹಿಸಲೇಬೇಕೆಂದು ನಿರ್ಧರಿಸಿ ಬಂಧಿಸಿದಂತಿದೆ. ಅಧಿಕಾರ ಶಾಶ್ವತ ಅಲ್ಲ, ಹೀಗಾಗಿ ರಾಜ್ಯ ಸರಕಾರ ಅಧಿಕಾರ ದುರುಪಯೋಗ ಮಾಡಿಕೊಳ್ಳುವುದನ್ನು ಬಿಟ್ಟು ಕಾನೂನಾತ್ಮಕವಾಗಿ ಆಡಳಿತ ನಡೆಸಲಿ ಎಂದು ಹೇಳಿದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರಕಾರದ ವಿರುದ್ಧ ದೂರವಾಣಿ ಕದ್ದಾಲಿಕೆ ಆರೋಪ ಮಾಡುತ್ತಿರುವುದು ಪ್ರಜ್ವಲ್ ಪ್ರಕರಣದಿಂದ ಜನರ ಗಮನ ಬೇರೆಡೆ ಸೆಳೆಯಲು ಎಂಬ ಆರೋಪ ಸುಳ್ಳು. ತಪ್ಪು ಮಾಡಿದ್ದರೆ ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಆಗಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
MUST WATCH
ಹೊಸ ಸೇರ್ಪಡೆ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Olympics; 2036ರ ಒಲಿಂಪಿಕ್ಸ್‌ಗೆ ಬಿಡ್: ಭಾರತದಿಂದ ಐಒಸಿಗೆ ಅಧಿಕೃತ ಅರ್ಜಿ
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.