ನಿಗಮ-ಮಂಡಳಿಗಳಿಗೆ ಜೆಡಿಎಸ್ ನೇಮಕ ;ಯಾರ್ಯಾರಿಗೆ ಏನು?
Team Udayavani, Feb 27, 2019, 12:48 AM IST
ಬೆಂಗಳೂರು: ಅಂತೂ ಇಂತೂ ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷವಾದ ಜೆಡಿಎಸ್ ತನ್ನ ಕೋಟಾದ ನಿಗಮ-ಮಂಡಳಿ ಅಧ್ಯಕ್ಷರ ಸ್ಥಾನಗಳ ಪೈಕಿ ಒಂಭತ್ತು ಭರ್ತಿ ಮಾಡಿ ಆದೇಶ ಹೊರಡಿಸಿದೆ. ನಾಲ್ವರಿಗೆ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ದೇವೇಗೌಡರ ಕುಟುಂಬದ ಆಪ್ತ ಪರಿಷತ್ ಸದಸ್ಯ ತಿಪ್ಪೇಸ್ವಾಮಿಯವರಿಗೂ ಅವಕಾಶ ಕಲ್ಪಿಸಲಾಗಿದೆ. ಮಾಜಿ ಶಾಸಕ ಕೋನರೆಡ್ಡಿ ಅವರಿಗೆ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಆಪರೇಷನ್ ಕಮಲ ಕಾರ್ಯಾಚರಣೆ ವಿಫಲವಾದ ಆಡಿಯೋ “ಬಾಂಬ್’ ರೂವಾರಿ ನಾಗನಗೌಡ ಕುಂದಕೂರು ಅವರಿಗೆ ನಿಗಮ ಮಂಡಳಿ ಕೊಡುಗೆ ನೀಡಲಾಗಿದೆ. ಒಂಭತ್ತು ನೇಮಕಾತಿಗಳ ಪೈಕಿ ಎಂಟು ಹಾಲಿ ಶಾಸಕರಿಗೆ ಒಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಅವರಿಗೆ ನೀಡಲಾಗಿದೆ. ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗಿದೆ. ಸಂಸದೀಯ ಕಾರ್ಯದರ್ಶಿಗಳಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಲಾಗಿದೆ. ಕಾಂಗ್ರೆಸ್‌ನ ಇಬ್ಬರು ಶಾಸಕರಿಗೂನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕಲ್ಪಿಸಲಾಗಿದೆ.
ಶಾಸಕರಿಗೂ ಅಧ್ಯಕ್ಷಗಿರಿ
ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ವಿರೋಧದಿಂದ ಕೆಆರ್‌ಡಿಎಲ್ ಅಧ್ಯಕ್ಷಗಿರಿ ತಪ್ಪಿಸಿಕೊಂಡಿದ್ದ ಕಾಂಗ್ರೆಸ್‌ನ ವೆಂಕಟರಮಣಯ್ಯ ಅವರನ್ನು ಅರಣ್ಯ ಕೈಗಾರಿಕೆ ನಿಗಮ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಮತ್ತೂಬ್ಬ ಶಾಸಕ ಎಸ್.ಭೀಮಾ ನಾಯಕ್ ಅವರನ್ನು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದ ನಿರೀಕ್ಷೆಯಲ್ಲಿದ್ದ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಅವರಿಗೆ ಈ ಬಾರಿಯೂ ನಿರಾಸೆಯಾಗಿದೆ.
ಯಾರ್ಯಾರಿಗೆ ಏನು?
ಬಿ.ಸತ್ಯನಾರಾಯಣ-ರಾಜ್ಯ ರಸ್ತೆ ಸಾರಿಗೆ ಸಂಸ್ಥೆ
ಶಿವಲಿಂಗೇಗೌಡ- ಕರ್ನಾಟಕ ಗೃಹ ಮಂಡಳಿ
ಕೆ.ಮಹದೇವ್- ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ದಿ ನಿಗಮ
ಡಿ.ಸಿ.ಗೌರಿ ಶಂಕರ್- ಎಂಎಸ್‌ಐಎಲ್
ಡಾ.ಕೆ.ಅನ್ನದಾನಿ- ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮ
ನಾಗನಗೌಡ ಕಂದಕೂರು-ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ
ರಾಜಾ ವೆಂಕಟಪ್ಪ ನಾಯಕ- ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ
ಜಫ್ರುಲ್ಲಾ ಖಾನ್- ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
ನಿಸರ್ಗ ನಾರಾಯಣಸ್ವಾಮಿ- ಬೆಂಗಳೂರು ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ ಸಂಸದೀಯ ಕಾರ್ಯದರ್ಶಿಗಳು
ದೇವಾನಂದ್ ಪೂಲಸಿಂಗ್ ಚವ್ಹಾಣ್ ಅವರಿಗೆ ಮುಖ್ಯಮಂತ್ರಿಯವರ ಸಂಸದೀಯ ಕಾರ್ಯದರ್ಶಿ ಹುದ್ದೆ ನೀಡಿದ್ದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ ನಿಯೋಜಿಸಲಾಗಿದೆ.
ಡಾ.ಕೆ.ಶ್ರೀನಿವಾಸಮೂರ್ತಿ (ಪಶು ಸಂಗೋಪನೆ ಮತ್ತು ಮೀನುಗಾರಿಕೆ)
ಎಂ.ಶ್ರೀನಿವಾಸ್ (ಸಹಕಾರ)
ತಿಪ್ಪೇಸ್ವಾಮಿ (ಲೋಕೋಪಯೋಗಿ )
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.