ಬೊಮ್ಮಾಯಿ ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ: ಮುರುಗೇಶ್ ನಿರಾಣಿ
Team Udayavani, Sep 6, 2021, 3:10 PM IST
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ನಾಯಕತ್ವ ವಹಿಸಿದ ಒಂದೇ ತಿಂಗಳಲ್ಲಿ ಸಿಕ್ಸರ್ ಹೊಡೆದಿದ್ದಾರೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದರು.
ಪಾಲಿಕೆ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿ ಮಹಾನಗರ ಫಲಿತಾಂಶ ಸಂಪೂರ್ಣ ಬಹುಮತ ಬಂದಿದೆ. ಕಲಬುರ್ಗಿಯಲ್ಲಿ 23 ಸ್ಥಾನ ಬಿಜೆಪಿ ಗೆದ್ದಿದೆ. ಸಂಸದರು ಹಾಗೂ ಶಾಸಕರು ಇರುವುದರಿಂದ ಮೊದಲ ಬಾರಿಗೆ ಕಲಬುರ್ಗಿ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯುತ್ತೇವೆ ಎಂದರು.
ರಾಜ್ಯದಲ್ಲಿ ಯಡಿಯೂರಪ್ಪ ಅವರ ಮಾರ್ಗದರ್ಶನ, ಬೊಮ್ಮಾಯಿ ನಾಯಕತ್ವ ಕೇಂದ್ರದ ಮೋದಿ ನಾಯಕತ್ವದ ಬಗ್ಗೆ ರಾಜ್ಯದ ಜನರು ವಿಶ್ವಾಸ ಇಟ್ಟು ಬೆಂಬಲ ನೀಡಿದ್ದಾರೆ. ಮುಂಬರುವ ಎರಡು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ ಎಂದರು.
ಇದನ್ನೂ ಓದಿ:ಪಾಲಿಕೆ ಚುನಾವಣೆಯಲ್ಲಿ ನಮಗೆ ಪ್ರಥಮ ಸೂಚನೆ ಸಿಕ್ಕಿದೆ: ಸಿಎಂ ಬೊಮ್ಮಾಯಿ
ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಇನ್ನೂ ಚರ್ಚೆ ನಡೆಯಾಗಿಲ್ಲ. ಯಡಿಯೂರಪ್ಪ ನಮ್ಮ ನಾಯಕರು ಅವರ ಮಾರ್ಗದರ್ಶನದಲ್ಲಿಯೆ ನಾವು ಚುನಾವಣೆ ಎದುರಿಸುತ್ತಿದ್ದೇವೆ. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಚುನಾವಣೆ ಪ್ರಚಾರದಲ್ಲಿ ಪಾಲ್ಗಳ್ಳದಿದ್ದರೂ ನಾವು ಎರಡನೇ ಹಂತದ ನಾಯಕರು ಪ್ರಚಾರ ಮಾಡಿ ಗೆದ್ದಿದ್ಸೇವೆ. ಇದರಿಂದ ನಮ್ಮ ಶಕ್ತಿ ಎಷ್ಟಿದೆ ಅಂತ ನೋಡಿ. ಕಾಂಗ್ರೆಸ್ ನ ಎಲ್ಲ ಹಂತದ ನಾಯಕರು ಪ್ರಚಾರ ಮಾಡಿದ್ದರೂ ಅವರ ಪರಿಸ್ಥಿತಿ ಈ ರೀತಿ ಇದೆ ಎಂದು ನಿರಾಣಿ ಹೇಳಿದರು.
ಕರ್ನಾಟಕದಲ್ಲಿ ಯಡಿಯೂರಪ್ಪ ಅವರನ್ನು ಅಮಿತ್ ಶಾ ಹೊಗಳಿದ್ದಾರೆ. ಅವರನ್ನು ಎಲ್ಲಿಯೂ ಬಿಟ್ಟು ಕೊಟ್ಟಿಲ್ಲ. ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ ಸಹಜವಾಗಿ ಅವರ ನಾಯಕತ್ವದಲ್ಲಿ ಅಂತ ಹೇಳಿದ್ದಾರೆ ಎಂದು ಶಾ ಹೇಳಿಕೆ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.