ಮೈತ್ರಿ ಸರ್ಕಾರಕ್ಕೆ ಧಕ್ಕೆ ಇಲ್ಲ: ಭೀಮಾ ನಾಯ್ಕ
Team Udayavani, May 26, 2019, 3:00 AM IST
ಬಳ್ಳಾರಿ: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ 5 ವರ್ಷಗಳ ಕಾಲ ಸುಭದ್ರವಾಗಿ ಇರಲಿದೆ. ಲೋಕಸಭಾ ಚುನಾವಣೆ ಫಲಿತಾಂಶ ರಾಜ್ಯ ಸರಕಾರದ ಮೇಲೆ ಯಾವ ಪರಿಣಾಮವನ್ನೂ ಬೀರಲ್ಲ ಎಂದು ರಾಯಚೂರು, ಬಳ್ಳಾರಿ, ಕೊಪ್ಪಳ ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಹಗರಿಬೊಮ್ಮನಹಳ್ಳಿ ಶಾಸಕ ಭೀಮಾನಾಯ್ಕ ಹೇಳಿದರು.
ರಾಬಕೊ ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಅವರು ಶನಿವಾರ ಸುದ್ದಿಗಾರರ ಜತೆ ಮಾತನಾಡಿದರು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಿರ್ದೇಶನದ ಮೇರೆಗೆ ಎಚ್.ಡಿ. ಕುಮಾರಸ್ವಾಮಿಯವರೇ 5 ವರ್ಷಗಳ ಕಾಲ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ ಎಂದರು.
ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿಲ್ಲ. ಯಾವುದೇ ಭಿನ್ನಮತೀಯ ಚಟುವಟಿಕೆಯಲ್ಲೂ ನಾನು ತೊಡಗಿಸಿಕೊಂಡಿಲ್ಲ. ಬಳ್ಳಾರಿ ಜಿಲ್ಲೆಗೆ ಸಚಿವ ಸ್ಥಾನ ಕೊಡಬೇಕು ಎಂದು ಒತ್ತಾಯಿಸಿದಾಗ ಪಕ್ಷದ ನಾಯಕರು, ಹಿರಿಯರಾದ ಪಿ.ಟಿ.ಪರಮೇಶ್ವರ ನಾಯ್ಕ, ತುಕಾರಾಂ ಅವರಿಗೆ ಸಚಿವ ಸ್ಥಾನ ದೊರಕಿತು. ನನಗೆ ಬಂಜಾರಾ ಅಭಿವೃದ್ಧಿ ನಿಗಮ ನೀಡಿದರು. ಇದರಿಂದ ನಾನು ಅಸಮಾಧಾನಗೊಂಡಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.