ಮೂಲಭೂತ ಹಕ್ಕು ಕಿತ್ತುಕೊಳ್ಳುವಂತಿಲ್ಲ: ಹೈಕೋರ್ಟ್
Team Udayavani, Feb 3, 2018, 7:53 AM IST
ಬೆಂಗಳೂರು: ಬಂದ್ ಆಚರಣೆ ಅಸಾಂವಿಧಾನಿಕ ಕ್ರಮ ಎಂದಿರುವ ಹೈಕೋರ್ಟ್, ಬಂದ್ ಹೆಸರಲ್ಲಿ ಸಾರ್ವಜನಿಕರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳುವಂತಿಲ್ಲ ಎಂದು ತೀರ್ಪು ನೀಡಿದೆ. ಮಹದಾಯಿ ವಿಚಾರದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷ ಫೆ.4ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಪ್ರಶ್ನಿಸಿ ರಾಜಾಜಿನಗರದ ಶ್ರದ್ಧಾ ಪೋಷಕರ ಸಂಘದ ಅಧ್ಯಕ್ಷ ಸಿ. ರಾಜಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್.ಜಿ ರಮೇಶ್ ಹಾಗೂ ನ್ಯಾ. ಪಿ.ಎಸ್ ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ಪೀಠ, ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖೀಸಿ ಬಂದ್ ಆಚರಣೆ ಅಸಾಂವಿಧಾನಿಕ ಎಂದು ತೀರ್ಪು ನೀಡಿತು.
ಸುಪ್ರೀಂಕೋರ್ಟ್ ಬಂದ್ ಆಚರಣೆ ಸಂವಿಧಾನ ಹಾಗೂ ಕಾನೂನು ಬಾಹಿರ ಕ್ರಮ ಎಂದು ಸ್ಪಷ್ಟವಾಗಿ ತಿಳಿಸಿದೆ. ಹೀಗಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷ ಫೆ.4ರಂದು ಕರೆ ನೀಡಿರುವ ಬೆಂಗಳೂರು ಬಂದ್ ಅಸಾಂವಿಧಾನಿಕವಾಗಿದ್ದು, ಬಂದ್‌ಗೆ ಸಂಬಂಧಿಸಿದ ಮುಂದಿನ ಯಾವುದೇ ಕ್ರಮಗಳನ್ನು ಕೈಗೊಳ್ಳಬಾರದು. ಜನಸಾಮಾನ್ಯರು, ವ್ಯಾಪಾರ – ವಹಿವಾಟು ಉದ್ಯಮಗಳಿಗೆ ಯಾವುದೇ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತು.
ಶಾಂತಿಯುತ ಪ್ರತಿಭಟನೆ, ಹರತಾಳಗಳನ್ನು ಯಾರು ಬೇಕಾದರೂ ಶಾಂತಿಯುತವಾಗಿ ನಡೆಸಲಿ. ಆದರೆ ಬಂದ್ ಹೆಸರಿನಲ್ಲಿ ಜನಸಾಮಾನ್ಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಳ್ಳದಂತೆ ಕ್ರಮಗಳನ್ನು ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ ನ್ಯಾಯಪೀಠ, ವಿಚಾರಣೆಯನ್ನು ಮುಂದೂಡಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದಿಸಿದ ಸುನೀಲ್. ಆರ್. ರಾವ್ ವಾದಿಸಿ, ಕೇವಲ ಹತ್ತುದಿನಗಳ ಅಂತರದಲ್ಲಿ ಕನ್ನಡಪರ ಸಂಘಟನೆಗಳು ಕರೆದಿರುವ ಬಂದ್ ಇದಾಗಿದ್ದು, ಜನಸಾಮಾನ್ಯರಿಗೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆ ಯಾಗಲಿದೆ. ಜನರ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಲಿದೆ. ಈಗಾಗಲೇ ಬಂದ್ ನಡೆಸುವುದು ಸಂವಿಧಾನ ಬಾಹಿರ ಎಂದು ಸುಪ್ರೀಂಕೋರ್ಟ್ ಹಾಗೂ ಹಲವು ಹೈಕೋರ್ಟ್‌ಗಳು ತೀರ್ಪು ನೀಡಿವೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ತೀರ್ಪು ಉಲ್ಲೇಖಾರ್ಹ: ಬಂದ್ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಉಲ್ಲೇಖೀಸಿ ಹೈಕೋರ್ಟ್ ನೀಡಿರುವ ಈ ತೀರ್ಪು ಇನ್ನು ಮುಂದೆ ದೇಶದ ಯಾವುದೇ ರಾಜ್ಯಗಳಲ್ಲಿ ನಡೆಸುವ ಬಂದ್ ಸಂದರ್ಭದ ಅರ್ಜಿಗಳಿಗೆ ಉಲ್ಲೇಖವಾಗಲಿದೆ. ಜತೆಗೆ ರಾಜ್ಯದಲ್ಲಿಯೂ
ಮುಂದಿನ ದಿನಗಳಲ್ಲಿ ಬಂದ್‌ಗೆ ಕರೆ ನೀಡಿದರೆ ಅದನ್ನು ವಿರೋಧಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲು ತೀರ್ಪಿನ “ಆಧಾರ’ ಸಿಕ್ಕಂತಾಗಿದೆ. ಮೊದಲಿನಿಂದಲೂ ಬಂದ್ ಕರೆ ವಿಚಾರದಲ್ಲಿ ರಾಜ್ಯದಲ್ಲಿ ವಾಣಿಜ್ಯೋದ್ಯಮ ಹಾಗೂ ಸಾರ್ವಜನಿಕ ಸಂಘ-ಸಂಸ್ಥೆಗಳಿಂದ ಪರ-ವಿರೋಧ ಅಭಿಪ್ರಾಯಗಳಿತ್ತು. ಇದೀಗ ಹೈಕೋರ್ಟ್‌ನ ತೀರ್ಪು “ಬಂದ್’ ಕರೆ ನೀಡುವವರಿಗೆ ಎಚ್ಚರಿಕೆಗಂಟೆಯಾಗಿದೆ.
ನಾಳೆ ಬಂದ್ ಇರಲ್ಲ
ಈ ಆದೇಶ ಹಿನ್ನೆಲೆಯಲ್ಲಿ ಫೆ.4 ರಂದು ಕರೆ ನೀಡಿದ್ದ ಬಂದ್ ವಾಪಸ್ ಪಡೆಯಲಾಗಿದೆ ಎಂದು ವಾಟಾಳ್ ನಾಗರಾಜ್ ಪ್ರಕಟಿಸಿದ್ದಾರೆ. ಬಂದ್ ಬದಲಿಗೆ ಕರಾಳ ದಿನಾಚರಣೆ ಆಚರಿಸಲಾ ಗುವುದು ಎಂದು ತಿಳಿಸಿದ್ದಾರೆ. ಫೆ.4 ರಂದು ಬಿಜೆಪಿ ಪರಿವರ್ತನಾ ಯಾತ್ರೆ ಸಮಾ ರೋಪಕ್ಕೆ ಪ್ರಧಾನಿ ನರೇಂದ್ರಮೋದಿ ಪಾಲ್ಗೊಳ್ಳಲಿದ್ದ ಕಾರಣ ಬಂದ್ ಕರೆ ಹಿನ್ನೆಲೆಯಲ್ಲಿ ನಗರದ ಪೊಲೀ
ಸರಿಗೂ ಕಾನೂನು -ಸುವ್ಯವಸ್ಥೆ ಪಾಲನೆ ಹಾಗೂ ಬಂದೋ ಬಸ್ತ್ ತಲೆನೋವಾಗಿತ್ತು.
ಬಂದ್ ಆಚರಣೆ ಸಂವಿಧಾನ ಬಾಹಿರ ಎಂದ ಹೈಕೋರ್ಟ್
ಫೆ.4ರ ಬೆಂಗಳೂರು ಬಂದ್‌ಗೆ ನಿರ್ಬಂಧ
ಮುಂಜಾಗ್ರತಾ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಆದೇಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.