ಗಂಗಾವತಿಗೂ ಕಾಲಿಟ್ಟ ನೋ ಸಿಎಎ ಬರಹ
Team Udayavani, Jan 16, 2020, 3:00 AM IST
ಗಂಗಾವತಿ: ಗೋಡೆ ಬರಹ ಹಾವಳಿ ಗಂಗಾವತಿಗೂ ಕಾಲಿಟ್ಟಿದ್ದು, ಎನ್ಆರ್ಸಿ, ಸಿಎಎ ಮತ್ತು ಎನ್ಪಿಆರ್ ವಿರೋಧಿಸಿ ನಗರದ ಜ್ಯೂನಿಯರ್ ಕಾಲೇಜು ಮೈದಾನದ ಗೋಡೆಗಳ ಮೇಲೆ ಬರೆಯಲಾಗಿದೆ. ಜೂನಿಯರ್ ಕಾಲೇಜಿನ ಮೈದಾನಕ್ಕೆ ಹೊಂದಿಕೊಂಡಿರುವ ಪಿಎಲ್ಡಿ ಬ್ಯಾಂಕ್ ಮತ್ತು ಬಿಇಒ ಕಚೇರಿ ಗೋಡೆಗಳ ಮೇಲೂ ನೋ ಎನ್ಆರ್ಸಿ, ಸಿಎಎ ಮತ್ತು ಎನ್ಪಿಆರ್ ಎಂದು ಬರೆಯಲಾಗಿದೆ.
ಕಳೆದ ಮೂರು ದಿನಗಳ ಹಿಂದೆ ನಗರದ ಕಿಲ್ಲಾ ಏರಿಯಾದಲ್ಲಿ ಬಿಜೆಪಿ ಮುಖಂಡರು ಪೌರತ್ವ ಕಾಯ್ದೆ ಕುರಿತು ಜಾಗೃತಿ ಮೂಡಿಸಲು ಸ್ಥಳೀಯ ಯುವಕರು ಬಿಟ್ಟಿರಲಿಲ್ಲ. ಈ ವೇಳೆ ಬಿಜೆಪಿ ಮುಖಂಡರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಪೌರತ್ವ ಕಾಯ್ದೆ ವಿರುದ್ಧ ಹಾಗೂ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಪೊಲೀಸರು ಮಧ್ಯೆ ಪ್ರವೇಶಿಸಿ ಬಿಜೆಪಿ ಮುಖಂಡರನ್ನು ಸ್ಥಳದಿಂದ ಕರೆದುಕೊಂಡು ಹೋಗಿದ್ದರು. ಈ ಮಧ್ಯೆ ನೋ ಎನ್ಆರ್ಸಿ, ಸಿಎಎ ಎಂದು ಬರೆದು ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.