ರಾಜ್ಯದಲ್ಲಿ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ: ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟನೆ
Team Udayavani, Aug 6, 2022, 12:07 PM IST
ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಮಂಕಿಪಾಕ್ಸ್ ಪ್ರಕರಣ ಕಂಡುಬಂದಿಲ್ಲ. ಆರಂಭದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದರು.
ವಿಶ್ವ ವ್ಯಾಸ್ಕ್ಯುಲರ್ ದಿನ ಪ್ರಯುಕ್ತ, ವ್ಯಾಸ್ಕ್ಯುಲರ್ ಸರ್ಜನ್ಸ್ ಅಸೋಸಿಯೇಶನ್ ವತಿಯಿಂದ ಆಯೋಜಿಸಿದ್ದ, ಟೌನ್‌ಹಾಲ್‌ನಿಂದ ಕಂಠೀರವ ಸ್ಟೇಡಿಯಂವರೆಗಿನ ಜಾಗೃತಿ ನಡಿಗೆ ಕಾರ್ಯಕ್ರಮದಲ್ಲಿ ಸಚಿವರು ಪಾಲ್ಗೊಂಡರು. ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಂಕಿಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿಪಾಕ್ಸ್ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿಪಾಕ್ಸ್ ಅಲ್ಲ, ಸ್ಮಾಲ್ ಪಾಕ್ಸ್ ಎಂದು ದೃಢಪಟ್ಟಿದೆ ಎಂದರು.
ಇದನ್ನೂ ಓದಿ:ಮಂಗಳೂರು ವಿಶ್ವವಿದ್ಯಾನಿಲಯ : ತುರ್ತಾಗಿ ಫಲಿತಾಂಶ ನೀಡಲು “ಆದ್ಯತೆ ಪರೀಕ್ಷೆ’ ಸೂತ್ರ!
ವಿಮಾನ ನಿಲ್ದಾಣ ಹಾಗೂ ಬಂದರುಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು 24 ಗಂಟೆಯೂ ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೂರು ಬಗೆಯ ಪಾಳಿಯನ್ನು ನಿಗದಿ ಮಾಡಲಾಗಿದೆ. ಬೇರೆ ರಾಜ್ಯಗಳಲ್ಲೂ ಈ ಪ್ರಕರಣ ಕಂಡುಬಂದರೂ, ರಾಜ್ಯದಲ್ಲಿ ಈವರೆಗೆ ಪ್ರಕರಣ ಕಂಡುಬಂದಿಲ್ಲ. ಸ್ಕಿನ್ ರಾಶಸ್ ಸೇರಿದಂತೆ ಹಲವಾರು ಲಕ್ಷಣಗಳಿಂದ ಮಂಕಿ ಪಾಕ್ಸ್ ಗೊತ್ತಾಗುತ್ತದೆ. ಆದರೂ ಕೋವಿಡ್‌ನಂತೆಯೇ ಇದು ಕೂಡ ಮೂರು ನಾಲ್ಕು ದಿನಗಳಾದ ನಂತರ ಪತ್ತೆಯಾಗುತ್ತದೆ. ಇದು ಒಂದು ಚಿಂತಿಸುವ ವಿಷಯ ಎಂದರು.
ಅರಿವು ಅಗತ್ಯ: ದೇಶದಲ್ಲಿ ವ್ಯಾಸ್ಕ್ಯುಲರ್ ತಜ್ಞರು ಬಹಳ ಕಡಿಮೆ ಇದ್ದಾರೆ. ಈ ಆರೋಗ್ಯದ ಸಮಸ್ಯೆ ಬಗ್ಗೆ ನಗರ ಪ್ರದೇಶಗಳಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕಿದೆ. ವ್ಯಾಸ್ಕ್ಯುಲರ್ ಸಮಸ್ಯೆಗಳು ಬೇರೆ ಅನಾರೋಗ್ಯಕ್ಕೂ ದಾರಿ ಮಾಡಿಕೊಡುತ್ತವೆ. ಯುವಜನರಲ್ಲಿ ಹಾಗೂ ವೃತ್ತಿಪರರಿಗೆ ಈ ವಿಚಾರದಲ್ಲಿ ನೆರವಾಗಬೇಕಿದೆ. ಟ್ರಾಫಿಕ್ ಪೊಲೀಸರು ಸಾಮಾನ್ಯ ಜನರಿಗಿಂತ ಹೆಚ್ಚು ಕಾಲ ನಿಂತುಕೊಳ್ಳುತ್ತಾರೆ. ಹಾಗೆಯೇ ಶಿಕ್ಷಕರು, ಸರ್ಜನ್‌ಗಳು ಮತ್ತಿತರರು ಕೂಡ ಹೆಚ್ಚು ಸಮಯ ನಿಂತುಕೊಳ್ಳುತ್ತಾರೆ. ಇದರಿಂದಾಗಿ ವ್ಯಾಸ್ಕ್ಯುಲರ್ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಜಗತ್ತಿನಲ್ಲಿ ಪ್ರತಿ 6 ಸೆಕೆಂಡ್‌ಗೆ ಒಬ್ಬ ವ್ಯಕ್ತಿ ಕಾಲನ್ನು ಕಳೆದುಕೊಳ್ಳುವ ಸ್ಥಿತಿ ಇದೆ ಎಂದು ಅಂದಾಜಿಸಲಾಗಿದೆ. ರಕ್ತನಾಳದ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕು. ಲಘು ವ್ಯಾಯಾಮವನ್ನು ಮಾಡುವಂತೆ ಎಲ್ಲರಿಗೂ ಉತ್ತೇಜಿಸಬೇಕು. ವಿಶೇಷವಾಗಿ ಮಧುಮೇಹಿಗಳು ಈ ಬಗ್ಗೆ ಗಮನಹರಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Arrested: ಹೊಯ್ಸಳ ಪೊಲೀಸ್ ಮೇಲೆ ಹಲ್ಲೆ; ಬಂಧನ
Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.