ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗೆ ಗಡುವು ನೀಡಿಲ್ಲ: ಸಿಎಂ ಬೊಮ್ಮಾಯಿ
Team Udayavani, Dec 16, 2021, 9:56 PM IST
ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಗಡುವು ನೀಡಿಲ್ಲ. ಆದರೆ ಸಮಯಬೇಕು ಎನ್ನುವುದು ಅವರಿಗೂ ಗೊತ್ತಾಗಿದೆ.
ವರದಿ ಬಂದ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಖಾಸಗಿ ಹೊಟೇಲ್ ನಲ್ಲಿ ಗುರುವಾರ ಕೂಡಲಸಂಗಮ ಸಮಾಜದ ಮುಖಂಡರೊಂದಿಗೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಚರ್ಚಿಸಲಾಗಿದೆ. ಅವರ ಮನಸ್ಸಿನಲ್ಲಿದ್ದ ಹಲವಾರು ವಿಚಾರಗಳನ್ನು ನನಗೆ ಹೇಳಿದ್ದಾರೆ. ಸುಪ್ರೀಂ ಕೋರ್ಟ್ ತೀರ್ಪು ಸೇರಿದಂತೆ ಕಾನೂನಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಹೇಳಿದ್ದೇನೆ ಎಂದರು.
ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ವರದಿ ಪಡೆದುಕೊಳ್ಳಲು ಆಗಿಲ್ಲ. ಸಮೀಕ್ಷೆ ನಡೆಸಿ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆದುಕೊಳ್ಳಲಾಗುವುದು. ಹಿಂದುಳಿದ ವರ್ಗಗಳ ಶಿಪಾರಸು ಮಾಡಿದ್ದೇವೆ. ಆ ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿಟ್ಟು ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.