ಪರಿಷತ್‌ ಸ್ಥಾನಕ್ಕೆ ಚುನಾವಣೆ ಇಲ್ಲ , ಅವಿರೋಧ ಆಯ್ಕೆ?

ಹೆಚ್ಚುವರಿ ಅಭ್ಯರ್ಥಿ ಇಲ್ಲದಿದ್ದರೆ ನಾಡಿದ್ದು ಫ‌ಲಿತಾಂಶ?

Team Udayavani, Jun 4, 2024, 7:20 AM IST

ಪರಿಷತ್‌ ಸ್ಥಾನಕ್ಕೆ ಚುನಾವಣೆ ಇಲ್ಲ , ಅವಿರೋಧ ಆಯ್ಕೆ?

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಜೂ. 13ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ನಾಮ ಪತ್ರ ಸಲ್ಲಿಕೆ ಕೊನೆಯ ದಿನವಾದ ಸೋಮವಾರ ಮೂರೂ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಅಖಾಡದಲ್ಲಿನ ಸ್ಪಷ್ಟ ಚಿತ್ರಣ ಸಿಕ್ಕಿದೆ.

ಪ್ರತೀ ಅಭ್ಯರ್ಥಿ ಗೆಲ್ಲಲು ವಿಧಾನಸಭೆಯ ಕನಿಷ್ಠ 19 ಶಾಸಕರ ಮತ ಬೇಕಾಗುತ್ತದೆ. ಅದರಂತೆ ಕಾಂಗ್ರೆಸ್‌ನ 7, ಬಿಜೆಪಿಯ 3 ಹಾಗೂ ಜೆಡಿಎಸ್‌ ಓರ್ವ ಅಭ್ಯರ್ಥಿ ಗೆಲ್ಲುವ ಅವಕಾಶಗಳಿರುವುದರಿಂದ ಹೆಚ್ಚುವರಿ ಅಭ್ಯರ್ಥಿಯನ್ನು ಹಾಕಿಲ್ಲ. ಆದರೆ ಕಾಂಗ್ರೆಸ್‌ನ ಆಸಿಫ್ ಪಾಶಾ ಎನ್ನುವವರು ನಾಮಪತ್ರ ಸಲ್ಲಿಸಿದ್ದಾರೆ. ಸೂಚಕರು, ಅನುಮೋದಕರ ಹೆಸರು ಹಾಗೂ ಸಹಿ ಇಲ್ಲದಿರುವುದರಿಂದ ಜೂ. 4ರಂದು ನಾಮಪತ್ರ ಪರಿಶೀಲನೆ ವೇಳೆ ಅದು ತಿರಸ್ಕೃತಗೊಳ್ಳುವ ಸಾಧ್ಯತೆಗಳಿವೆ. ನಾಮಪತ್ರ ವಾಪಾಸ್‌ಗೆ ಜೂ. 6 ಕೊನೆಯ ದಿನ.

ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿ ಇಲ್ಲದಿದ್ದರೆ ಮತದಾನ ಪ್ರಕ್ರಿಯೆ ನಡೆಸುವ ಬದಲು ಜೂ. 6ರಂದು ಅವಿರೋಧ ಆಯ್ಕೆಯನ್ನು ಪ್ರಕಟಿಸುವ ಸಂಭವವಿದೆ.

ಅಲ್ಲೇ ಘೋಷಣೆ, ಅಲ್ಲೇ ನಾಮಪತ್ರ ಸಲ್ಲಿಕೆ
ಪರಿಷತ್‌ ಚುನಾವಣೆಗೆ ಬಿಜೆಪಿ, ಕಾಂಗ್ರೆಸ್‌ ರವಿವಾರಷ್ಟೇ ಅಭ್ಯರ್ಥಿಗಳನ್ನು ಅಂತಿಮಗೊಳಿಸಿತ್ತು. ಆದರೆ ಜೆಡಿಎಸ್‌ ತನ್ನ ಅಭ್ಯರ್ಥಿ ಯಾರೆಂಬುದನ್ನು ಸ್ಪಷ್ಟಪಡಿಸಿರಲಿಲ್ಲ. ನಾಮಪತ್ರ ಸಲ್ಲಿಕೆಯ ಕೊನೆ ದಿನವಾದ ಸೋಮವಾರ ವಿಧಾನಸೌಧದಲ್ಲಿ ಶಾಸಕಾಂಗ ಸಭೆ ನಡೆಸಿ ಜವರಾಯಿಗೌಡ ಅವರನ್ನು ಅಭ್ಯರ್ಥಿ ಎಂದು ಘೋಷಿಸಿದ ಕುಮಾರಸ್ವಾಮಿ ಅವರು ಎಲ್ಲರಿಗಿಂತ ಮೊದಲು ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನೂ ಮುಗಿಸಿದರು.

ಕೈ ಅಭ್ಯರ್ಥಿಗಳಿಗೆ
ಸಿಎಂ, ಡಿಸಿಎಂ ಸಾಥ್‌
ಜೆಡಿಎಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಗೆ ಆಗಮಿಸಿದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಗೂ ಇತರ ನಾಯಕರ ಜತೆಗೆ ಅಭ್ಯರ್ಥಿಗಳು ಆಗಮಿಸಿದ್ದರು. ಅಷ್ಟೂ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆಗೂ ಸಿಎಂ, ಡಿಸಿಎಂ ಖುದ್ದು ಹಾಜರಿದ್ದು, ಹರಸಿದರು. ಬೋಸರಾಜ್‌, ಐವನ್‌ ಡಿ’ಸೋಜಾ, ವಸಂತಕುಮಾರ್‌ ಮೂರು ನಾಮಪತ್ರ ಸಲ್ಲಿಸಿದರೆ ಯತೀಂದ್ರ, ಬಿಲ್ಕಿಸ್‌ ಬಾನೋ, ಗೋವಿಂದರಾಜು ಎರಡೆರಡು ನಾಮಪತ್ರ ಸಲ್ಲಿಸಿದರು. ಜಗದೇವ್‌ ಗುತ್ತೇದಾರ್‌ ಒಂದು ಸೆಟ್‌ ಮಾತ್ರ ಸಲ್ಲಿಸಿದರು.

ರಾಜ್ಯಾಧ್ಯಕ್ಷರಿಗೆ ಕಾದ ಕಲಿಗಳು
ಬಿಜೆಪಿಯ ಸಿ.ಟಿ. ರವಿ, ಎನ್‌. ರವಿಕುಮಾರ್‌ ಹಾಗೂ ಡಾಣ ಎಂ.ಜಿ. ಮುಳೆ ತಲಾ ಒಂದೊಂದು ಸೆಟ್‌ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಎಂ.ಡಿ. ಲಕ್ಷ್ಮೀನಾರಾಯಣ ಹಾಜರಿದ್ದರು. ಬಳಿಕ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್‌, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಆಗಮಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಬರುವುದು ತಡವಾದ್ದರಿಂದ ಬಿಜೆಪಿ ಅಭ್ಯರ್ಥಿಗಳು ಮತ್ತೂಂದು ಸೆಟ್‌ ನಾಮಪತ್ರ ಸಲ್ಲಿಸಲು ಕಾಯುವಂತಾಗಿತ್ತು. ವಿಜಯೇಂದ್ರ ಆಗಮನದ ಬಳಿಕ ಬಿಜೆಪಿ ನಾಯಕರೆಲ್ಲರೂ ಒಟ್ಟಾಗಿ ತೆರಳಿ ಉಮೇದುವಾರಿಕೆ ಸಲ್ಲಿಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು.

ಪರಸ್ಪರ ಶುಭ ಹಾರೈಸಿಕೊಂಡ ಬಿಜೆಪಿ ಜೆಡಿಎಸ್‌
ಬಿಜೆಪಿಯ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿ ವಿಧಾನಸೌಧದಲ್ಲಿರುವ ಚುನಾವಣಾ ಧಿಕಾರಿ ಕಚೇರಿಯಿಂದ ವಿಪಕ್ಷದ ನಾಯಕರ ಕೊಠಡಿಯತ್ತ ಹೊರಟಿದ್ದರು. ಇದೇ ವೇಳೆ ಜೆಡಿಎಸ್‌ ಶಾಸಕಾಂಗ ಪಕ್ಷದ ಕೊಠಡಿಯಲ್ಲಿ ಮಿತ್ರಪಕ್ಷದ ನಾಯಕರು ಇರುವುದನ್ನು ಮನಗಂಡು ಕೊಠಡಿಯೊಳಗೆ ತೆರಳಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದರು. ಬಳಿಕ ಬಿಜೆಪಿ ಜೆಡಿಎಸ್‌ ನಾಯಕರು ಪರಸ್ಪರ ಶುಭ ಹಾರೈಸಿಕೊಂಡರು.

ಟಾಪ್ ನ್ಯೂಸ್

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

Karnataka ಸೇರಿ ವಿವಿಧ ರಾಜ್ಯದ ಸಾಧಕರ ಜತೆ ರಾಷ್ಟ್ರಪತಿ ಭೇಟಿ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್‌ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Manipur: 2 ಗುಂಪುಗಳ ನಡುವೆ ಗುಂಡಿನ ಚಕಮಕಿ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Fake News: ಕೇಂದ್ರ ಸಚಿವ ಅಮಿತ್‌ ಶಾ ನಿಧನ ಎಂದು ಸುಳ್ಳು ಸುದ್ದಿ: ವ್ಯಕ್ತಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.